Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಚಾಂಪಿಯನ್ಸ್‌ ಟ್ರೋಫಿ ಗೆದ್ದ ಬಳಿಕ ಮೊಹಮ್ಮದ್‌ ಶಮಿ ತಾಯಿಯ ಕಾಲು ಮುಟ್ಟಿ ಆಶೀರ್ವಾದ ಪಡೆದ ಕೊಹ್ಲಿ

Public TV
Last updated: March 13, 2025 7:58 pm
Public TV
Share
2 Min Read
virat kohli mohammed shami mother
SHARE

– ವಿರಾಟ್‌ ವಿನಯತೆಗೆ ಫ್ಯಾನ್ಸ್‌ ಮೆಚ್ಚುಗೆ

ದುಬೈ: ಕೆಲ ದಿನಗಳ ಹಿಂದಷ್ಟೆ ಬದ್ಧವೈರಿ ಪಾಕ್‌ ತಂಡದ ಬೌಲರ್‌ನ ಶೂಲೇಸ್‌ ಕಟ್ಟುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದ ವಿರಾಟ್‌ ಕೊಹ್ಲಿ (Virat Kohli), ಈಗ ಮತ್ತೊಂದು ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಗೆದ್ದ ಸಂಭ್ರಮದಲ್ಲಿದ್ದಾಗ ಬೌಲರ್ ಮೊಹಮ್ಮದ್‌ ಶಮಿ ಅವರ ತಾಯಿ ಕಾಲು ಮುಟ್ಟಿ ಆಶೀರ್ವಾದ ಪಡೆದು ಕೊಹ್ಲಿ ಗಮನ ಸೆಳೆದಿದ್ದಾರೆ.

ಭಾರತದ ಐತಿಹಾಸಿಕ ಗೆಲುವಿನ ಸಂಭ್ರಮದ ನಡುವೆ, ಕೊಹ್ಲಿ ಮತ್ತು ಮೊಹಮ್ಮದ್ ಶಮಿ (Mohammed Shami) ಅವರ ತಾಯಿ ಅಂಜುಮ್ ಅರಾ ನಡುವಿನ ಹೃದಯಸ್ಪರ್ಶಿ ಕ್ಷಣ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕಾಲಿನ ಗಾಯದಿಂದಾಗಿ ಒಂದು ವರ್ಷದ ವಿರಾಮದ ನಂತರ ತಮ್ಮ ಮಗ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವುದನ್ನು ವೀಕ್ಷಿಸಲು ದುಬೈಗೆ ಬಂದಿದ್ದರು. ಪಂದ್ಯದ ನಂತರ ಕೊಹ್ಲಿ, ಶಮಿ ಅವರ ತಾಯಿಯನ್ನು ಭೇಟಿಯಾದರು. ಕೊಹ್ಲಿ ಭಾವುಕರಾಗಿ ಶಮಿ ಅವರ ತಾಯಿಯ ಬಳಿಗೆ ಬಂದು ಗೌರವದ ಸಂಕೇತವಾಗಿ ಅವರ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದರು. ಶಮಿ ತಾಯಿ ಕೂಡ ಕೊಹ್ಲಿ ತಲೆ ಮುಟ್ಟಿ ಆಶೀರ್ವದಿಸಿದರು. ಈ ಭಾವುಕ ಕ್ಷಣದ ವೀಡಿಯೋ ವೈರಲ್‌ ಆಗಿದ್ದು, ಜನಮೆಚ್ಚುಗೆ ಗಳಿಸಿದೆ. ಇದನ್ನೂ ಓದಿ: ರೋಹಿತ್‌ ಪಂದ್ಯಶ್ರೇಷ್ಠ – ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಕ್ಯಾಪ್ಟನ್‌

Here is the clip https://t.co/MBWpwfp45U pic.twitter.com/zHE3A8KTAR

— 🇳🇿 (@whyrattkuhli) March 9, 2025

ಆಟಗಾರರ ನಡುವಿನ ಬಲವಾದ ಸೌಹಾರ್ದತೆ ಮತ್ತು ಗೌರವವನ್ನು ಇದು ಎತ್ತಿ ತೋರಿಸಿದೆ. ನಂತರ ವಿರಾಟ್‌ ಮತ್ತು ಶಮಿ ಅವರ ತಾಯಿ ಜೊತೆ ಫೋಟೊ ತೆಗೆಸಿಕೊಂಡರು. ಪರಸ್ಪರರು ಕುಶಲೋಪರಿ ವಿಚಾರಿಸಿದರು.

ಭಾನುವಾರ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ (New Zealand) ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು. ಇದನ್ನೂ ಓದಿ: 140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

Share This Article
Facebook Whatsapp Whatsapp Telegram

Cinema Updates

Darshan Vijayalakshmi
ಥಾಯ್ಲೆಂಡ್‌ನಲ್ಲಿರುವ ದರ್ಶನ್ ವಿಜಯಲಕ್ಷ್ಮಿಗೆ ನೋ ಟೆನ್ಷನ್
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories
The Task Movie
ಭೀಮ ಖ್ಯಾತಿಯ ಜಯ ಸೂರ್ಯ ನಟನೆಯ `ದಿ ಟಾಸ್ಕ್’ ಚಿತ್ರೀಕರಣ ಮುಕ್ತಾಯ
Cinema Latest Sandalwood Top Stories

You Might Also Like

Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನವಾದ 4 ದಿನದ ಬಳಿಕ ಸಿಕ್‌ ಲೀವ್‌ ಹಾಕಿದ್ರು 100ಕ್ಕೂ ಹೆಚ್ಚು ಪೈಲಟ್‌ಗಳು

Public TV
By Public TV
23 minutes ago
savadatti yellamma temple
Belgaum

ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ `ಮಾಸ್ಟರ್ ಪ್ಲ್ಯಾನ್’ – ಕಾಮಗಾರಿಗೆ ಸರ್ಕಾರದಿಂದ 215 ಕೋಟಿ ಅನುಮೋದನೆ

Public TV
By Public TV
53 minutes ago
HK Patil
Bengaluru City

ಜನತೆಗೆ ಮತ್ತೊಂದು ಶಾಕ್‌; ರಾಜ್ಯದ ಎಲ್ಲಾ ಬಹುಮಹಡಿ, ಎತ್ತರದ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಕ್ಯಾಬಿನೆಟ್ ಅಸ್ತು

Public TV
By Public TV
1 hour ago
Kalaburagi Student
Districts

ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ತುಂಬಿ ಹರಿಯುತ್ತಿರುವ ನದಿ ದಾಟಿದ ವಿದ್ಯಾರ್ಥಿನಿ

Public TV
By Public TV
1 hour ago
Dharwad Police Firing
Dharwad

ಧಾರವಾಡ | ವಿಚಾರಣೆ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಕಳ್ಳರಿಬ್ಬರ ಕಾಲಿಗೆ ಗುಂಡೇಟು

Public TV
By Public TV
1 hour ago
Purushottama Bilimale
Dakshina Kannada

ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಹೆಸರಿಡಲಿ: ಪುರುಷೋತ್ತಮ ಬಿಳಿಮಲೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?