ಪುಣೆ: ಐಪಿಎಲ್ 10ನೇ ಆವೃತ್ತಿಯಲ್ಲಿ ಪುಣೆ ತಂಡದ ನಾಯಕ ಸ್ಥಾನದಿಂದ ಧೋನಿ ಅವರನ್ನು ಕಿತ್ತುಹಾಕಲಾಗಿದ್ದು, ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸಲಿದ್ದಾರೆ.
ಐಪಿಎಲ್ 2017ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನಡೆಯುವ ಮುನ್ನಾ ದಿನ ಈ ಮಹತ್ವದ ಬೆಳವಣಿಗೆ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪುಣೆ ಸೂಪರ್ ಜೈಂಟ್ಸ್ ಮಾಲೀಕ ಸಂಜಯ್ ಗೋಯಂಕಾ, ಧೋನಿ ನಾಯಕತ್ವದಿಂದ ಕೆಳಗಡೆ ಇಳಿಯಲಿಲ್ಲ. ಕಳೆದ ಆವೃತ್ತಿಯಲ್ಲಿ ನಮ್ಮ ತಂಡ ಉತ್ತಮ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಕಿರಿಯ ಆಟಗಾರನ ನೇತೃತ್ವದಲ್ಲಿ ತಂಡವನ್ನು ಮುನ್ನಡೆಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Advertisement
ಐಪಿಎಲ್ 9ರ ಆವೃತ್ತಿಯ 14 ಪಂದ್ಯದಲ್ಲಿ ಪುಣೆ 5 ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿತ್ತು. ಧೋನಿ 12 ಇನ್ನಿಂಗ್ಸ್ ಒಂದು ಅರ್ಧಶತಕ ಸಹಿತ 284 ರನ್‍ಗಳಿಸಿದ್ದರು.
Advertisement
ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾ. ಲೋಧಾ ನೇತೃತ್ವದ ಸಮಿತಿ ಶಿಫಾರಸಿನಂತೆ ಐಪಿಎಲ್‍ನಿಂದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳನ್ನು 2 ವರ್ಷಗಳ ಅಮಾನತುಗೊಂಡಿತ್ತು. ಈ ಹಿನ್ನೆಲೆಯಲ್ಲಿ 2015ರವರೆಗೆ ಚೆನ್ನೈ ತಂಡವನ್ನು ಮುನ್ನಡೆಸಿದ್ದ ಧೋನಿ 2016ರ ಆವೃತ್ತಿಯಲ್ಲಿ ಪುಣೆ ತಂಡವನ್ನು ಮುನ್ನಡೆಸಿದ್ದರು.
Advertisement
ಸತತ 8 ಆವೃತ್ತಿಯಲ್ಲಿ ಚೆನ್ನೈ ತಂಡವನ್ನು ಧೋನಿ ಮುನ್ನಡೆಸಿದ್ದರು. 2010 ಮತ್ತು 2011ರಲ್ಲಿ ಚೆನ್ನೈ ತಂಡ ಚಾಂಪಿಯನ್ ಆಗಿತ್ತು. 2008, 2012, 2013, 2015 ರಲ್ಲಿ ರನ್ನರ್ ಅಪ್ ಆಗಿತ್ತು.