ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಡೆಲ್ಲಿ ತಂಡದ ಯುವ ಆಟಗಾರ ರಿಷಭ್ ಪಂತ್ ದಾಖಲೆ ಶತಕ ಸಿಡಿಸಿದ್ದು, ಐಪಿಎಲ್ ನ 50 ನೇ ಶತಕ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.
ಫಿರೋಜ್ ಶಾ ಕೋಟ್ಲಾ ಮೈಧಾನದಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ ರಿಷಭ್ 63 ಎಸೆತಗಳಲ್ಲಿ 128 ರನ್ (15 ಬೌಂಡರಿ, 7 ಸಿಕ್ಸರ್) ಸಿಡಿಸಿ ಅಜೇಯರಾಗಿ ಉಳಿದರು. ವಿಶೇಷವಾಗಿ ಇನ್ನಿಂಗ್ಸ್ ನ ಕೊನೆಯ ಓವರ್ ಎಸೆದ ಭುವನೇಶ್ವರ್ ಬೌಲಿಂಗ್ ನಲ್ಲಿ 26 ರನ್ ಸಿಡಿಸಿದರು.
Advertisement
Advertisement
ಈ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ರಿಷಭ್ ಐಪಿಎಲ್ ನಲ್ಲಿ ಶತಕ ಗಳಿಸಿದ 31 ಆಟಗಾರ ಹಾಗೂ ಭಾರತದ 13ನೇ ಆಟಗಾರ ಎನಿಸಿಕೊಂಡರು. ಅಲ್ಲದೇ ಈ ಟೂರ್ನಿಯಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಕೂಡ ಆಗಿದ್ದಾರೆ. ಅಲ್ಲದೇ ಭಾರತದ ಪರ ಐಪಿಎಲ್ ನಲ್ಲಿ ಆತೀ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದರು. ರಿಷಬ್ ಶತಕ ನಡುವೆಯೂ ಹೈದರಾಬಾದ್ ತಂಡ ಪಂದ್ಯದಲ್ಲಿ ಗೆಲುವು ಪಡೆಯಿತು.
Advertisement
Rishabh Pant in IPL 2018:
521 runs, 27 sixes at age of 20.
– Youngest to score 500+ runs in an IPL season.
– Youngest to hit 25+ sixes in an IPL season.
— Bharath Seervi (@SeerviBharath) May 10, 2018
Advertisement
ಭಾರತೀಯ ಆಟಗಾರರ ಪೈಕಿ ಕಿಂಗ್ಸ್ ಇಲೆವನ್ ಪಂಜಾಬ್‍ನ ಮುರಳಿ ವಿಜಯ್ 128 ರನ್ ಗಳಿಸಿದ್ದರೆ, ಈ ಹಿಂದೆ ಪಂಜಾಬ್ ಪರ ಆಡಿದ್ದ ಸೆಹ್ವಾಗ್ 122 ರನ್ ಹೊಡೆದಿದ್ದರು.
ಈ ಟೂರ್ನಿಯಲ್ಲಿ ಹೈದರಾಬಾದ್ ತಂಡದ ಕೀ ಬೌಲರ್ ಎಂದೇ ಕರೆಸಿಕೊಂಡಿದ್ದ ಭುವನೇಶ್ವರ್ ಕುಮಾರ್ ಹಾಗೂ ರಷೀದ್ ಖಾನ್ ಬೌಲಿಂಗ್ ನಲ್ಲೇ ಅತೀ ರನ್ ಸಿಡಿಸಿದ ಪಂತ್ ಬ್ಯಾಟಿಂಗ್ ಹಲವು ಅಭಿಮಾನಿಗಳು ಫಿದಾ ಆಗಿದ್ದಾರೆ. ಐಪಿಎಲ್ ನಲ್ಲಿ ಶತಕ ಸಿಡಿಸಿದ ಎರಡನೇ ಕಿರಿಯ ಆಟಗಾರ ಎಂಬ ಹೆಗ್ಗಳಿಕೆ ಪಡೆದಿರುವ ಪಂತ್ 1 ಸಾವಿರ ರನ್ ಪೂರ್ಣಗೊಳಿಸಿದರು. ಈ ಹಿಂದೆ 2009 ರಲ್ಲಿ ಮನೀಶ್ ಪಾಂಡೆ ಆರ್‌ಸಿಬಿ ಪರ ಶತಕ ಸಿಡಿಸಿದ ಕಿರಿಯ ಆಟಗಾರ ಎನಿಸಿಕೊಂಡಿದ್ದರು. ಈ ಟೂರ್ನಿಯ 11 ಪಂದ್ಯಗಳಲ್ಲಿ 521 ರನ್ ಗಳಿಸಿರುವ ಪಂತ್ ಪಂಜಾಬ್ ಕೆಎಲ್ ರಾಹುಲ್ ಜೊತೆ ಆರೆಂಜ್ ಕ್ಯಾಪ್ ಪಡೆದಿದ್ದಾರೆ.
Rishabh Pant's 128* (63):
– 50th century in IPL history
– Highest score by an Indian in IPL
– Highest score by an Indian in T20s
– Second-youngest centurion in IPL#DDvSRH
— Bharath Seervi (@SeerviBharath) May 10, 2018
Really special innings from Rishabh. Those were not bad balls from Bhuvi in the last over barring the last full toss, but Rishabh Pant is really special and I hope he is nurtured well. #DDvSRH
— Virender Sehwag (@virendersehwag) May 10, 2018
More and more I am convinced there is something special about Rishabh Pant.
— Harsha Bhogle (@bhogleharsha) May 10, 2018