Saturday, 21st July 2018

Recent News

ಅಣ್ಣನ ಬೌಲಿಂಗ್‍ನಲ್ಲಿ ಸೂಪರ್ ಕ್ಯಾಚ್ ಹಿಡಿದ ಹಾರ್ದಿಕ್ ಪಾಂಡ್ಯ: ವಿಡಿಯೋ ನೋಡಿ

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಸ್ಫೋಟಕ ಆಟಗಾರ ಮ್ಯಾಕ್ಸ್ ವೆಲ್, ಕೃನಾಲ್ ಎಸೆತದಲ್ಲಿ ಸಿಡಿಸಿದ ಚೆಂಡನ್ನು ಡೈವ್ ಮಾಡಿ ಹಿಡಿಯುವ ಮೂಲಕ ಹಾರ್ದಿಕ್ ಪಾಂಡ್ಯ ಸೂಪರ್ ಕ್ಯಾಚ್ ಹಿಡೆದಿದ್ದಾರೆ. ಈ ಮೂಲಕ ಪಾಂಡ್ಯ ಸಹೋದರರು ಮೋಡಿ ಮಾಡಿದ್ದಾರೆ.

ಮುಂಬೈ ನೀಡಿದ ಬೃಹತ್ ಮೊತ್ತವನ್ನು ಬೆನ್ನತ್ತಿದ್ದ ಡೆಲ್ಲಿ ತಂಡದ ಪರ ಬಿರುಸಿನ ಬ್ಯಾಟಿಂಗ್ ನಡೆಸಿದ್ದ ಮ್ಯಾಕ್ಸ್ ವೆಲ್ ಕೇವಲ 6 ಎಸೆತಗಳಲ್ಲಿ 13 ರನ್ ಸಿಡಿಸಿದ್ದರು. ಈ ವೇಳೆ ಬೌಲಿಂಗ್ ಮಾಡುತ್ತಿದ್ದ ಕೃನಾಲ್ ಪಾಂಡ್ಯ ಮ್ಯಾಕ್ಸ್ ವೆಲ್ ರನ್ನು ಔಟ್ ಮಾಡಿದರು. ಕೃನಾಲ್ ೆಸೆತದಲ್ಲಿ  13 ಓವರ್ 2ನೇ ಬಾರಿ ಹೊಡೆತಕ್ಕೆ ಮುಂದಾದ ಮಾಕ್ಸ್ ವೆಲ್ ಬೌಂಡರಿಯತ್ತ ಬಾಲ್ ಸಿಡಿಸಿದರು. ಈ ವೇಳೆ ಬೌಂಡರಿ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ರನ್ನಿಂಗ್ ಡೈವ್ ಹೊಡೆದು ಕ್ಯಾಚ್ ಹಿಡಿದರು.

ಇದಕ್ಕೂ ಮುನ್ನ ಕೇವಲ 25 ರನ್ ಎಸೆತಗಳಿಂದ 47 ಸಿಡಿಸಿದ್ದ ರಿಷಭ್ ಪಂತ್ ರ ವಿಕೆಟನ್ನು ಕೃನಾಲ್ ಪಾಂಡ್ಯ ಪಡೆದಿದ್ದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲದಲ್ಲಿ ವೈರಲ್ ಆಗಿದ್ದು, ಪಾಂಡ್ಯ ಸಹೋದರರಿಗೆ ಅಭಿಮಾನಿಗಳು ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಮುಂಬೈ ಉತ್ತಮ ಪ್ರದರ್ಶನ ನೀಡಿದ ಬಳಿಕವೂ ಸೋಲುವ ಮೂಲಕ ಟೂರ್ನಿಯಲ್ಲಿ ಸತತ 3 ಪಂದ್ಯಗಳಲ್ಲಿ ಸೋತಿದೆ. ಮತ್ತೊಂದೆಡೆ ಮುಂಬೈ ವಿರುದ್ಧದ ಗೆಲುವಿನ ಸವಿ ಪಡೆದ ಡೆಲ್ಲಿ  7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿ ಟೂರ್ನಿಯಲ್ಲಿ ಜಯದ ಖಾತೆ ತೆರೆದಿದೆ.

Leave a Reply

Your email address will not be published. Required fields are marked *