ಮೊಹಾಲಿ: ಇಲ್ಲಿನ ಪಂಜಾಬ್ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್ ಹಾಗೂ ಪಂಜಾಬ್ ನಡುವಿನ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಕ್ರಿಸ್ ಗೇಲ್ ಭರ್ಜರಿ ಶತಕ ಸಿಡಿಸಿದರೆ, ಪೆವಿಲಿಯನ್ ನಲ್ಲಿ ಕುಳಿತಿದ್ದ ಯುವರಾಜ್ ಗಂಗ್ನಮ್ ಸ್ಟೈಲ್ ನಲ್ಲಿ ಡಾನ್ಸ್ ಮಾಡಿ ಸಂಭ್ರಮಿಸಿದ್ದಾರೆ.
ಪಂದ್ಯದಲ್ಲಿ 61ನೇ ಎಸೆತದಲ್ಲಿ 1 ರನ್ ಗಳಿಸುವ ಮೂಲಕ ಗೇಲ್ ಶತಕ ಪೂರೈಸಿದರು. ಈ ವೇಳೆ ಯುವಿ ಗಂಗ್ನಮ್ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಅಲ್ಲದೇ ಪಂಜಾಬ್ ತಂಡದ ಮಾಲೀಕರಾಗಿರುವ ನಟಿ ಪ್ರೀತಿ ಜಿಂಟಾ ಸಹ ವಿಐಪಿ ಗ್ಯಾಲರಿಯಲ್ಲಿ ಕುಣಿದು ಕುಪ್ಪಳಿಸಿದರು. ಪಂದ್ಯದ ಬಳಿಕವೂ ಗೇಲ್ ರ ಶತಕದ ಸಂಭ್ರಮದ ಆಚರಣೆ ಮುಂದುವರೆದಿದ್ದು ಈ ಕುರಿತ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೆರೆಬಿಯನ್ ಆಟಗಾರ ಗೇಲ್ ಶತಕ ಸಿಡಿಸುವ ಮೂಲಕ ತಮ್ಮನ್ನು ಟೀಕಿಸುತ್ತಿದ್ದವರಿಗೆ ಬ್ಯಾಟ್ ಮೂಲಕವೇ ಉತ್ತರಿಸಿದ್ದಾರೆ. ಈ ಮೂಲಕ ತಮ್ಮಲ್ಲಿ ಇನ್ನು ಬ್ಯಾಟಿಂಗ್ ನಡೆಸುವ ಶಕ್ತಿ ಇದೆ ಎಂದು ಸಾಬೀತು ಪಡಿಸಿದ್ದಾರೆ. ಕೇವಲ 63 ಎಸೆತಗಳನ್ನು ಎದುರಿಸಿದ ಗೇಲ್ ಔಟಾಗದೆ 11 ಸಿಕ್ಸರ್, 1 ಬೌಂಡರಿ ಮೂಲಕ 104 ರನ್ ಸಿಡಿಸಿದ್ದರು. ಅಲ್ಲದೇ ಟೂರ್ನಿಯ ಮೊದಲ ಶತಕ ದಾಖಲಿಸಿದ್ದರು. ಇದನ್ನೂ ಓದಿ: ನನ್ನನ್ನು ಆಯ್ಕೆ ಮಾಡುವ ಮೂಲಕ ಸೆಹ್ವಾಗ್ ಐಪಿಎಲ್ ರಕ್ಷಿಸಿದ್ದಾರೆ: ಕ್ರಿಸ್ ಗೇಲ್
ಕಳೆದ ಹಲವು ಆವೃತ್ತಿಗಳಲ್ಲಿ ಆರ್ ಸಿಬಿ ತಂಡವನ್ನು ಪ್ರತಿನಿಧಿಸಿದ್ದ ಗೇಲ್ ರನ್ನು ಈ ಬಾರಿ ಪಂಜಾಬ್ ಖರೀದಿಸಿತ್ತು. ಆದರೆ ಗೇಲ್ ಅವರಿಗೆ ಆರಂಭದ ಎರಡು ಪಂದ್ಯಗಳಲ್ಲಿ ಆಡುವ 11ರ ಬಳಗದಲ್ಲಿ ಸ್ಥಾನ ನೀಡಿರಲಿಲ್ಲ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯಕ್ಕೆ ಅವಕಾಶ ಪಡೆದ ಗೇಲ್ 62 ರನ್ ಸಿಡಿಸಿ ಭರವಸೆ ಮೂಡಿಸಿದ್ದರು. ಬಳಿಕ ಗುರುವಾರ ರಾತ್ರಿ ನಡೆದ ಹೈದರಾಬಾದ್ ವಿರುದ್ಧವೂ ಶತಕ ಸಿಡಿಸಿ ಅಬ್ಬರಿಸಿದ್ದಾರೆ.
Congratulations @henrygayle Just Awesome..#SRHvKXIP @IPL 100 runs in 58 balls pic.twitter.com/EMri9dtzRD
— Mohammad shawon (@shawon841) April 19, 2018
Here’s to yet another Gaylestorm ???? @henrygayle#LivePunjabiPlayPunjabi #KingsXIPunjab #KXIP #VIVOIPL pic.twitter.com/sixUgw1pcd
— Punjab Kings (@PunjabKingsIPL) April 19, 2018