ಜೈಪುರ: 2019ರ ಐಪಿಎಲ್ ಆವೃತ್ತಿಯಲ್ಲಿ ಆರ್ ಸಿಬಿ ತಂಡದ ಪ್ರಯಾಸ್ ಐಪಿಎಲ್ ಟೂರ್ನಿಗೆ ಪಾದಾರ್ಪಣೆ ಮಾಡಿದ್ದು, ಆ ಮೂಲಕ ಐಪಿಎಲ್ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಪ್ರಯಾಸ್ ಪಾದಾರ್ಪಣೆ ಮಾಡಿದ್ದಾರೆ. 16 ವರ್ಷ 157 ದಿನಗಳ ವಯಸ್ಸಿಗೆ ಪ್ರಯಾಸ್ ಐಪಿಎಲ್ ಆಡುವ ಅವಕಾಶ ಪಡೆದಿದ್ದು, ಇದಕ್ಕೂ ಮುನ್ನ ಅಫ್ಘಾನಿಸ್ತಾನದ ಸ್ಪಿನ್ನರ್ ಮುಜೀಬ್ ರೆಹಮಾನ್ ಯಂಗೆಸ್ಟ್ ಪ್ಲೇಯರ್ ಎಂಬ ಹೆಗ್ಗಳಿಕೆ ಪಡೆದಿದ್ದರು.
Advertisement
Prayas in to bowl!! 16 years and 157 days old! #playBold #VIVOIPL2019 #SRHvRCB pic.twitter.com/RgAioNwacW
— Royal Challengers Bangalore (@RCBTweets) March 31, 2019
Advertisement
ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಈ ಬಾರಿ ತಂಡದಲ್ಲಿ ಬದಲಾವಣೆ ಮಾಡುವ ಮೂಲಕ ಪ್ರಯಾಸ್‍ಗೆ ಅವಕಾಶ ನೀಡಿ, ಉತ್ತಮ ಆಟಗಾರ ಎಂದು ಹೇಳಿದ್ದಾರೆ. ಅಂದಹಾಗೇ 20 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ ಪ್ರಯಾಸ್ ರೇ ಬರ್ಮನ್‍ರನ್ನ ಬರೋಬ್ಬರಿ 1.5 ಕೋಟಿ ರೂ ನೀಡಿ ಆರ್ ಸಿಬಿ ಖರೀದಿ ಮಾಡಿತ್ತು.
Advertisement
ಬೆಂಗಾಲ್ ತಂಡದ ಲೆಗ್ ಸ್ಪಿನ್ನರ್ ಆಗಿರುವ ಪ್ರಯಾಸ್ 16 ವರ್ಷಕ್ಕೆ ಕೋಟಿ ರೂ. ಮೊತ್ತಕ್ಕೆ ಹರಾಜದ ಹೆಗ್ಗಳಿಕೆಯನ್ನು ಪಡೆದಿದ್ದರು. ‘ಮಿಸ್ಟರಿ’ ಸ್ಪಿನ್ನರ್ ಎಂಬ ಹೆಸರು ಪಡೆದಿರುವ ಪ್ರಯಾಸ್ 20 ರನ್ ನೀಡಿ 4 ವಿಕೆಟ್ ಪಡೆದಿರುವುದು ಇದೂವರೆಗಿನ ಅತ್ಯುತ್ತಮ ಪ್ರದರ್ಶನವಾಗಿದೆ. 2002 ರಲ್ಲಿ ಜನಿಸಿರುವ ಪ್ರಯಾಸ್ ಬೌಲರ್ ಮಾತ್ರವಲ್ಲದೇ ಉತ್ತಮ ಆಲ್‍ರೌಂಡರ್ ಆಗಿದ್ದು, ಬಲಗೈ ಬ್ಯಾಟ್ಸ್ ಮನ್ ಕೂಡ ಆಗಿದ್ದಾರೆ.
Advertisement
Youngest #VIVOIPL debutant at 16 for @RCBTweets ????
What was your biggest achievement at 16? #SRHvRCB pic.twitter.com/EzRaK14ISf
— IndianPremierLeague (@IPL) March 31, 2019
ಇದುವರೆಗೂ 9 ಲಿಸ್ಟ್ ಎ ಪಂದ್ಯಗಳನ್ನು ಆಡಿರುವ ಪ್ರಯಾಸ್ 6 ಇನ್ನಿಂಗ್ಸ್ ಗಳಲ್ಲಿ ಬ್ಯಾಟಿಂಗ್ ನಡೆಸಿ 47 ರನ್ ಗಳಿಸಿದ್ದರೆ ಹಾಗೂ ಬೌಲಿಂಗ್‍ನಲ್ಲಿ 11 ವಿಕೆಟ್ ಪಡೆದಿದ್ದಾರೆ. ಉಳಿದಂತೆ ವಿಜಯ್ ಹಜಾರೆ ಟೂರ್ನಿಯಲ್ಲಿ ಉತ್ತಮ ಎಕಾನಮಿಯೊಂದಿಗೆ 11 ವಿಕೆಟ್ ಪಡೆದುಕೊಂಡಿದ್ದಾರೆ. ಮೊದಲು ದೆಹಲಿ ತಂಡದ ಪರ ಆಡಿದ್ದ ಪ್ರಯಾಸ್ ಬಳಿಕ ಬೆಂಗಾಲ್ ತಂಡವನ್ನು ಸೇರಿಕೊಂಡಿದ್ದರು. ಮೊದಲ ಪಂದ್ಯದಲ್ಲಿ 4 ಓವರ್ ಬೌಲ್ ಮಾಡಿರುವ ಪ್ರಯಾಸ್ ಯಾವುದೇ ವಿಕೆಟ್ ಪಡೆಯದೆ 56 ರನ್ ನೀಡಿದ್ದರು.