ಮುಂಬೈ: ವಿಶ್ವಾದ್ಯಂತ ಹಾಗೂ ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿ ತೊಂದರೆಗೆ ಸಿಲುಕಿದೆ. ಆದರೆ ಏನೇ ಆದರೂ ಈ ಬಾರಿಯ ಟೂರ್ನಿ ನಡೆಯಲೇ ಬೇಕು ಅಂತ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಟೂರ್ನಿ ನಡೆಸುವ ಬಗ್ಗೆ ಸಲಹೆ ಕೂಡ ನೀಡಿದ್ದಾರೆ.
ಖಾಲಿ ಮೈದಾನ, ಕ್ರಿಕೆಟ್ ಅಭಿಮಾನಿಗಳಿಲ್ಲದ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಇಲ್ಲಿಯೇ ಟೂರ್ನಿ ನಡೆಸಬೇಕು. ಇದರಿಂದ ಪ್ರೇಕ್ಷಕರ ಜೀವಕ್ಕೆ ಯಾವುದೇ ಅಪಾಯವಿಲ್ಲ ಇರುವುದಿಲ್ಲ ಎಂದು ಪಿಟರ್ಸನ್ ಸಲಹೆ ನೀಡಿದ್ದಾರೆ.
Advertisement
Advertisement
ಐಪಿಎಲ್ ಟೂರ್ನಿ ಮೂರು ಅಥವಾ ನಾಲ್ಕು ವಾರಗಳಲ್ಲಿ ಕೊನೆಗೊಳ್ಳಬೇಕು. ಹೀಗಾಗಿ ಈ ಬಾರಿ ಐಪಿಎಲ್‍ನ ಸ್ವರೂಪವೂ ಚಿಕ್ಕದಾಗಿರಬೇಕು ಎಂದು ಪೀಟರ್ಸನ್ ಸಲಹೆ ನೀಡಿದ್ದಾರೆ.
Advertisement
ಕೊರೊನಾ ವೈರಸ್ ಹಾಗೂ ವಿದೇಶಿ ಆಟಗಾರರಿಗೆ ವೀಸಾ ನಿರ್ಬಂಧದಿಂದಾಗಿ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮಾರ್ಚ್ 29ರಿಂದ ಏಪ್ರಿಲ್ 15ರವರೆಗೆ ಮುಂದೂಡಿದೆ. ಮೊದಲ ಪಂದ್ಯ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಬೇಕಿತ್ತು.
Advertisement
“ಜುಲೈ-ಆಗಸ್ಟ್‍ನಲ್ಲಿ ಕ್ರೀಡಾ ಚಟುವಟಿಕೆ ಆರಂಭವಾಗಬೇಕು. ಐಪಿಎಲ್‍ನ 13ನೇ ಆವೃತ್ತಿಯನ್ನು ಸಹ ನಡೆಸಬೇಕು ಎಂದು ಬಯಸುತ್ತೇನೆ. ವಿಶ್ವದ ಪ್ರತಿಯೊಬ್ಬ ಆಟಗಾರನೂ ಇದನ್ನೇ ಬಯಸುತ್ತಿದ್ದಾರೆ. ಅವರು ಸಹ ಟೂರ್ನಿಯಲ್ಲಿ ಆಡಲೇಬೇಕು ಎನ್ನುವ ಇಚ್ಛೆಯನ್ನು ಹೊಂದಿದ್ದಾರೆ. ಆಟಗಾರರು ಮತ್ತು ಫ್ರಾಂಚೈಸಿಗಳ ಜೊತೆಗೆ ತೆರೆಮರೆಯಲ್ಲಿ ಕೆಲಸ ಮಾಡುವವರಿಗೆ ಐಪಿಎಲ್ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಫ್ರ್ಯಾಂಚೈಸಿ ಸ್ವಲ್ಪ ಹಣವನ್ನು ಉಳಿಸುವ ಮಾರ್ಗವನ್ನು ಸಹ ಕಂಡುಕೊಳ್ಳಬೇಕು. ಉದಾಹರಣೆಗೆ ಎಲ್ಲಾ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೆ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ನಡೆಸಲಾಗುತ್ತದೆ. ಹೀಗಾಗಿ ಟೂರ್ನಿಯನ್ನು ಮೂರು ಅಥವಾ ನಾಲ್ಕು ವಾರಗಳಿಗೆ ಕಡಿತಗೊಳಿಸಬಹುದು” ಎಂದು ಸಲಹೆ ನೀಡಿದ್ದಾರೆ.
ಭಾರತದ ಮಾಜಿ ಬ್ಯಾಟ್ಸ್‌ಮನ್ ಸಂಜಯ್ ಮಂಜ್ರೇಕರ್ ಕೂಡ ಐಪಿಎಲ್‍ನ ಮಹತ್ವವನ್ನು ವ್ಯಕ್ತಪಡಿಸಿದ್ದಾರೆ. ಪೀಟರ್ಸನ್ ಅವರ ಸಲಹೆಗೆ ಸಹಮತ ನೀಡಿರುವ ಮಂಜ್ರೇಕರ್, ಸರ್ಕಾರ, ಮಂಡಳಿ ಮತ್ತು ಫ್ರಾಂಚೈಸಿಗಳು ಸೇರಿದಂತೆ ಇತರ ಎಲ್ಲಾ ಸಂಬಂಧಿತ ಸಂಸ್ಥೆಗಳಿಂದ ಒಪ್ಪಿಗೆ ಪಡೆದು ಐಪಿಎಲ್ ನಡೆಸಬೇಕು. ಇದು ವಿಶೇಷ ಆರ್ಥಿಕತೆಯನ್ನು ಸಹ ಪ್ರಾರಂಭಿಸುತ್ತದೆ. ಏಕೆಂದರೆ ಈ ಟೂರ್ನಿ ನಡೆಬೇಕಾಗಿರುವುದು ಮುಂಬೈ ಇಂಡಿಯನ್ಸ್, ಎಂ.ಎಸ್.ಧೋನಿ ಅಥವಾ ವಿರಾಟ್ ಕೊಹ್ಲಿ ಅವರಿಗಾಗಿ ಅಷ್ಟೇ ಅಲ್ಲ. ಐಪಿಎಲ್‍ನಿಂದ ಉದ್ಯೋಗ ಪಡೆಯುವವರಿಗೆ ಟೂರ್ನಿ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಇದೇ ವಿಚಾರವಾಗಿ ಮಾತನಾಡಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಜಸ್ಟಿನ್ ಲ್ಯಾಂಗರ್, ನೀವು ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ ನಿಮ್ಮ ಮುಂದೆ ಜನಸಂದಣಿ ಇರುತ್ತಿರಲಿಲ್ಲ. ಆಗಲೇ ಕ್ರಿಕೆಟ್ ಆಡಿದ್ದೀರಿ. ಏಕೆಂದರೆ ನೀವು ಆಟವನ್ನು ಇಷ್ಟಪಡುತ್ತೀರಿ. ನಿಮ್ಮ ತಂಡದ ಆಟಗಾರರೊಂದಿಗೆ ಆಡಲು ಇಷ್ಟಪಡುತ್ತೀರಿ. ಈ ಆಟದ ಪ್ರೀತಿಯಿಂದಾಗಿ ಇಂದು ಹೆಚ್ಚಿನ ಜನರು ಟಿವಿ ಮಾಧ್ಯಮ ಮತ್ತು ರೇಡಿಯೋ ಮೂಲಕ ಜನರನ್ನು ರಂಜಿಸಲು ಸಮರ್ಥರಾಗಿದ್ದೀರಿ. ಇದಕ್ಕಾಗಿಯೇ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯವನ್ನು ನಡೆಸುವುದು ಮುಖ್ಯವಾಗಿದೆ. ಇದು ಸ್ವಲ್ಪ ವಿಭಿನ್ನವಾಗಿರುತ್ತದೆ. ಆದರೆ ನಾವೆಲ್ಲರೂ ಎಷ್ಟು ಅದೃಷ್ಟವಂತರು ಎಂಬುದನ್ನು ಎಂದಿಗೂ ನಿರ್ಲಕ್ಷಿಸಬಾರದು ಎಂದು ಐಪಿಎಲ್ ಟೂರ್ನಿ ನಡೆಸುವ ಬಗ್ಗೆ ಸಲಹೆ ನೀಡಿದ್ದಾರೆ.