ಅಬುಧಾಬಿ: ಐಪಿಎಲ್‍ನ ಐದನೇ ಪಂದ್ಯ ಇಂದು ಅಬುಧಾಬಿಯಲ್ಲಿ ನಡೆಯಲಿದೆ. ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಪರಸ್ಪರ ಮುಖಾಮುಖಿಯಾಗಲಿವೆ.
Advertisement
ಟೂರ್ನಿಯಲ್ಲಿ ಎರಡು ತಂಡಗಳು ಹೇಳಿಕೊಳ್ಳುವಂತ ಪ್ರದರ್ಶವನ್ನು ನೀಡಿಲ್ಲ. ಒಟ್ಟು 8 ಪಂದ್ಯಗಳನ್ನಾಡಿರುವ ಮುಂಬೈ 4 ಪಂದ್ಯಗಳನ್ನು ಗೆದ್ದು, ನಾಲ್ಕು ಪಂದ್ಯಗಳನ್ನು ಸೋತಿದೆ. 8 ಪಂದ್ಯಗಳನ್ನಾಡಿರುವ ಕೆಕೆಆರ್, ಕೇವಲ ಮೂರು ಪಂದ್ಯಗಳನ್ನು ಗೆದ್ದು 5 ಪಂದ್ಯಗಳನ್ನು ಸೋತಿದೆ. ಅಂಕಪಟ್ಟಿಯಲ್ಲಿ ಮುಂಬೈ 4ನೇ ಸ್ಥಾನದಲ್ಲಿದ್ದರೆ ಕೆಕೆಆರ್ 6ನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಹೈದರಾಬಾದ್ ವಿರುದ್ಧ ಡೆಲ್ಲಿಗೆ 8 ವಿಕೆಟ್‍ಗಳ ಭರ್ಜರಿ ಜಯ
Advertisement
Advertisement
ಪ್ರತಿ ಸೀಸನ್‍ನಲ್ಲಿಯೂ ಮೊದಲಾರ್ಧ ಪಂದ್ಯಗಳನ್ನು ಸೋತು ನಂತರ ಪುಟಿದೇಳುವ ಮುಂಬೈ, ಈ ಪಂದ್ಯವನ್ನು ಗೆಲ್ಲುವ ಮೂಲಕ ಅಬುದುಬೈನಲ್ಲಿ ಶುಭಾರಂಭ ಮಾಡಲು ರೆಡಿಯಾಗಿದೆ. ಕಳೆದ ಸೀಸನ್ ನಿಂದಲೂ ಕೊಲ್ಕತ್ತಾ ತಂಡ ಐಪಿಎಲ್‍ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಕೆಕೆಆರ್ ತಂಡದಲ್ಲಿ ಸ್ಟಾರ್ ಆಟಗಾರರ ಬಳಗವೇ ಇದೆ. ಬ್ಯಾಟಿಂಗ್ ವಿಭಾಗದಲ್ಲಿ ಶುಭಮನ್ ಗಿಲ್, ರಾಹುಲ್ ತ್ರಿಪಾಟಿ, ಇಯನ್ ಮೊರ್ಗನ್, ನೀತಿಶ್ ರಾಣ, ಅಂಡ್ರೆ ರಸೆಲ್ ರಂತ ಹೊಡಿಬಡಿ ಆಟಗಾರರಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಸುನೀಲ್ ನರೈನ್, ವರುಣ್ ಚಕ್ರವರ್ತಿ, ಪ್ರಸಿದ್ಧ್ ಕೃಷ್ಣ ಆಟಗಾರರು ಎದುರಾಳಿ ತಂಡವನ್ನು ಕಟ್ಟಿಹಾಕಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಇದನ್ನೂ ಓದಿ: ಕ್ರಿಕೆಟ್‍ನಲ್ಲಿ ಲಿಂಗ ಸಮಾನತೆಗಾಗಿ ಬ್ಯಾಟ್ಸ್‌ಮ್ಯಾನ್ ಬದಲಾಗಿ ‘ಬ್ಯಾಟರ್’ ಪದ ಬಳಕೆ
Advertisement
ಮುಂಬೈ ಇಂಡಿಯನ್ಸ್ ಬಲಾಬಲವನ್ನು ನೊಡುವುದಾದರೇ ಡಿ ಕಾಕ್, ಸೂರ್ಯ ಕುಮಾರ್ ಯಾದವ್, ಇಶನ್ ಕಿಶಾನ್, ಪೊಲಾರ್ಡ್ ರಂತ ಅಬ್ಬರಿಸುವ ಬ್ಯಾಟ್ಸ್‍ಮನ್‍ಗಳಿದ್ದಾರೆ. ಮೊದಲ ಪಂದ್ಯದಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಆಡುವುದು ಬಹುತೇಕ ಖಚಿತವಾಗಿದ್ದು, ಮುಂಬೈ ಬ್ಯಾಟಿಂಗ್ ಬಲ ಮತ್ತಷ್ಟು ಹೆಚ್ಚಲಿದೆ. ಬೌಲಿಂಗ್ ವಿಭಾಗದಲ್ಲಿ ಮುಂಬೈ ಅತ್ಯಂತ ಬಲಿಷ್ಟವಾಗಿದೆ. ರಾಹುಲ್ ಚಹಾರ್, ಟ್ರೆಂಟ್ ಬೋಲ್ಟ್, ಅಡಮ್ ಮಿಲ್ನೆ, ಬೂಮ್ರರಂತ ಬೌಲರ್‍ಗಳನ್ನು ಕೆಕೆಆರ್ ತಂಡ ಎದುರಿಸಬೇಕಿದೆ.
ಮುಂಬೈ ನಾಯಕ ರೋಹಿತ್ ಶರ್ಮಾ, ಕೆಕೆಆರ್ ವಿರುದ್ಧ ಪ್ರತಿ ಬಾರಿಯೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ 18 ರನ್ ಗಳಿಸಿದರೆ ಐಪಿಎಲ್ ತಂಡಯೊಂದರ ವಿರುದ್ಧ 1000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ. ಕೆಕೆಆರ್ ವಿರುದ್ಧದ ಪಂದ್ಯಗಳಲ್ಲಿ ಒಟ್ಟು 4 ಬಾರಿ ಪಂದ್ಯ ಶ್ರೇಷ್ಟ ಪ್ರಶಸ್ತಿಗೆ ರೋಹಿತ್ ಶರ್ಮಾ ಭಾಜನರಾಗಿದ್ದಾರೆ.
ಕೆಕೆಆರ್ ತಂಡಕ್ಕಿಂತಲೂ, ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲೂ ಮುಂಬೈ ಬಲಿಷ್ಟವಾಗಿದೆ. ಎರಡು ತಂಡಗಳಲ್ಲಿನ ಸ್ಟಾರ್ ಆಟಗಾರರ ಮೇಲೆ ಭಾರೀ ನಿರೀಕ್ಷೆಯಿದೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದ್ದು ಗೆಲುವಿಗಾಗಿ ಉಭಯ ತಂಡಗಳು ಕಾದಾಟ ನಡೆಸಲಿವೆ.