Cricket

ಜೇಸನ್ ರಾಯ್ ಅಬ್ಬರಕ್ಕೆ ಮಕಾಡೆ ಮಲಗಿದ ರಾಜಸ್ಥಾನ್ ರಾಯಲ್ಸ್: ಹೈದರಾಬಾದ್‍ಗೆ ಜಯ

Published

on

Share this

ದುಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 7 ವಿಕೆಟ್‍ಗಳ ಭರ್ಜರಿ ಜಯಗಳಿಸುವ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ಎರಡನೇ ಜಯ ದಾಖಲಿಸಿದೆ.

ರಾಜಸ್ಥಾನ ನೀಡಿದ್ದ 165 ರನ್‍ಗಳ ಗುರಿಯನ್ನು ಬೆನ್ನತ್ತಿದ ಹೈದರಾಬಾದ್, 18.3 ಓವರ್‌ಗಳಲ್ಲಿ 167 ರನ್ ಗಳಿಸಿ ಜಯದ ನಗೆ ಬೀರಿತು. ಈ ಮೂಲಕ ಯುಎಇನಲ್ಲಿ ಮೊದಲ ಜಯವನ್ನು ತನ್ನದಾಗಿಸಿಕೊಂಡಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್, ದುಬೈ ಪಿಚ್‍ನಲ್ಲಿ ನಿಧಾನವಾಗಿ ಉತ್ತಮ ಮೊತ್ತ ಕಲೆ ಹಾಕಿತು. ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 164ರನ್ ಪೇರಿಸಿತು. ರಾಜಸ್ಥಾನ್ ಪರ ಜೈಸ್ವಾಲ್ 36 ರನ್ (23 ಎಸೆತ, 5 ಬೌಂಡರಿ, 1 ಸಿಕ್ಸರ್) ಗಳಿಸಿದರು. ಮಹಿಪಾಲ್ ಲೊಮರ್ 29ರನ್ (28 ಎಸೆತ, 1 ಬೌಂಡರಿ, 1 ಸಿಕ್ಸರ್) ಸಿಡಿಸಿದರೆ, ನಾಯಕ ಸಂಜು ಸ್ಯಾಮ್ಸನ್ 82 ರನ್ (57 ಎಸೆತ, 7 ಬೌಂಡರಿ, 3 ಸಿಕ್ಸರ್) ಸಿಡಿಸುವ ಮೂಲಕ ಹೈದರಾಬಾದ್ ಬೌಲರ್‍ಗಳನ್ನು ಬೆಂಡೆತ್ತಿದರು. ಸನ್ ರೈಸರ್ಸ್ ಹೈದರಾಬಾದ್ ಪರ ಸಿದ್ದಾರ್ಥ್ ಕೌಲ್ 2, ರಶೀದ್ ಖಾನ್ 1, ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರು. ಇದನ್ನೂ ಓದಿ: ಟಿ20 ಕ್ರಿಕೆಟ್‍ನಲ್ಲಿ ವಿರಾಟ್ ಕೊಹ್ಲಿ 10ಏ ಕಿಂಗ್

165 ರನ್‍ಗಳ ಗುರಿ ಬೆನ್ನತ್ತಿದ ಹೈದರಾಬಾದ್‍ಗೆ ಜೇಸನ್ ರಾಯ್ ಹಾಗೂ ವೃದ್ಧಿಮಾನ್ ಸಹಾ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‍ಗೆ ಈ ಜೋಡಿ, 5.1 ಓವರ್‌ಗಳಲ್ಲಿ 57 ರನ್ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟರು. ಉತ್ತಮವಾಗಿ ಆಡುತ್ತಿದ್ದ ವೃದ್ಧಿಮಾನ್ ಸಹಾ 18 ರನ್ (11 ಎಸೆತ, 2 ಬೌಂಡರಿ, 1 ಸಿಕ್ಸರ್) ಮಹಿಪಾಲ್‍ಗೆ ವಿಕೆಟ್ ಒಪ್ಪಿಸಿದರು. ರಾಜಸ್ಥಾನ್ ಬೌಲರ್‌ಗಳನ್ನು ಮನ ಬಂದಂತೆ ದಂಡಿಸಿದ ಜೇಸನ್ ರಾಯ್ 60 ರನ್ (42 ಎಸೆತ, 8 ಬೌಂಡರಿ, 1 ಸಿಕ್ಸರ್) ಚಚ್ಚಿ ಚೇತನ್ ಸಕರಿಯಾಗೆ ವಿಕೆಟ್ ಕೊಟ್ಟು ಹೊರ ನಡೆದರು. ನಂತರ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಆಟವಾಡಿ ಸನ್ ರೈಸರ್ಸ್ ಹೈದರಾಬಾದ್‍ಗೆ ಗೆಲುವು ದೊರಕಿಸಿಕೊಟ್ಟರು. ಇದನ್ನೂ ಓದಿ: 5 ಎಸೆತದಲ್ಲಿ 21 ರನ್ ಚಚ್ಚಿದ ಜಡೇಜಾ – ಕೊನೆಯ ಎಸೆತದಲ್ಲಿ ಚೆನ್ನೈಗೆ ರೋಚಕ ಜಯ

ಭರ್ಜರಿ ಬ್ಯಾಟಿಂಗ್ ಮಾಡಿದ ನಾಯಕ ಕೇನ್ ವಿಲಿಯಮ್ಸನ್, 51 ರನ್ (41 ಎಸೆತ, 5 ಬೌಂಡರಿ, 1 ಸಿಕ್ಸರ್) ಸಿಡಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಇವರಿಗೆ ಉತ್ತಮ ಸಾಥ್ ನೀಡಿದ ಅಭಿಷೇಕ್ ಶರ್ಮಾ 21 ರನ್ (16 ಎಸೆತ, 1 ಬೌಂಡರಿ, 1 ಸಿಕ್ಸರ್) ಚಚ್ಚುವ ಮೂಲಕ ತಂಡದ ಗೆಲುವಿಗೆ ಸಹಕಾರಿಯಾದರು.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications