ಮುಂಬೈ: ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲರ್ ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ದಾಖಲೆ ಬರೆದಿದ್ದಾರೆ.
ಐಪಿಎಲ್‌ನಲ್ಲಿ 150 ವಿಕೆಟ್ ಕಿತ್ತ ಭಾರತದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಭುವನೇಶ್ವರ್ ಕುಮಾರ್ ಪಾತ್ರವಾಗಿದ್ದಾರೆ. ಇದನ್ನೂ ಓದಿ: 2023ರಲ್ಲಿ ಆರಂಭಗೊಳ್ಳಲಿದೆ 6 ತಂಡಗಳ ನಡುವಿನ ಮಹಿಳಾ ಐಪಿಎಲ್
Advertisement
Advertisement
ವೇಗದ ಬೌಲರ್‌ಗಳ ಪೈಕಿ ವೆಸ್ಟ್ ಇಂಡೀಸ್‌ನ ಆಲ್‌ರೌಂಡರ್ ಬ್ರಾವೋ (174), ಶ್ರೀಲಂಕಾದ ಲಸಿತ್ ಮಾಲಿಂಗ (170) ವಿಕೆಟ್ ಕಿತ್ತಿದ್ದಾರೆ. ಈಗ ಭುವನೇಶ್ವರ್ ಕುಮಾರ್ 150 ವಿಕೆಟ್ ಸಾಧನೆ ಮಾಡಿದ ಮೂರನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.
Advertisement
ಭಾರತದ ಪರವಾಗಿ ಸ್ಪಿನ್ನರ್‌ಗಳಾದ ಅಮಿತ್ ಮಿಶ್ರಾ (166), ಪಿಯೂಶ್ ಚಾವ್ಲಾ(157), ಯಜುವೇಂದ್ರ ಚಹಲ್(151), ಹರ್ಭಜನ್ ಸಿಂಗ್ 150 ವಿಕೆಟ್ ಪಡೆದಿದ್ದಾರೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ 22 ರನ್ ನೀಡಿ 3 ವಿಕೆಟ್ ಕಿತ್ತಿದ್ದರು. ಇದನ್ನೂ ಓದಿ: 6 ಸಿಕ್ಸ್, 8 ಫೋರ್ ಚಚ್ಚಿ ಮಿಲ್ಲರ್ ಮಿಂಚಿಂಗ್ – ಗುಜರಾತ್‍ಗೆ ರೋಚಕ ಜಯ
Advertisement
ಭಾನುವಾರ ನಡೆದ ಪಂದ್ಯದಲ್ಲಿ ಹೈದರಬಾದ್ 7 ವಿಕೆಟ್‌ಗಳ ಜಯವನ್ನು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್‌ಗಳಲ್ಲಿ 151 ರನ್‌ಗಳಿಗೆ ಆಲೌಟ್ ಆಯ್ತು. ಹೈದರಾಬಾದ್ 18.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 152 ರನ್ ಹೊಡೆಯುವ ಮೂಲಕ ಜಯ ಸಾಧಿಸಿದೆ. ಒಟ್ಟು 6 ಪಂದ್ಯಗಳಲ್ಲಿ 4 ಪಂದ್ಯ ಗೆದ್ದಿರುವ ಹೈದರಾಬಾದ್ ಅಂಕಪಟ್ಟಿಯಲ್ಲಿ ಸದ್ಯ 8 ಅಂಕಗೊಳೊಂದಿಗೆ 4ನೇ ಸ್ಥಾನದಲ್ಲಿದೆ.