ಮುಂಬೈ: ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು ಎಂದು ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
Advertisement
ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಸಿಎಸ್‍ಕೆ ಫಾಫ್ ಡು ಪ್ಲೆಸಿಸ್ ಅವರನ್ನು ಬಿಡಬಾರದಿತ್ತು. ರವೀಂದ್ರ ಜಡೇಜಾ ತಮ್ಮ ಫಾರ್ಮ್‍ನತ್ತ ಗಮನ ಹರಿಸಬೇಕಾಗಿದೆ. ಐಪಿಎಲ್ 2022ರ ಮೊದಲು ಧೋನಿ ಸಿಎಸ್‍ಕೆ ನಾಯಕತ್ವದಿಂದ ಕೆಳಗಿಳಿದಿದ್ದು, ಈ ಋತುವಿನಲ್ಲಿ ಇನ್ನೂ ತಮ್ಮ ಮೊದಲ ಗೆಲುವು ದಾಖಲಿಸದ ರವೀಂದ್ರ ಜಡೇಜಾಗೆ ನಾಯಕತ್ವವನ್ನು ಹಸ್ತಾಂತರಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕಳೆದ ವರ್ಷ ಬೆಂಚ್ ಬಿಸಿ ಮಾಡಿದ ಆಟಗಾರರು ಈ ಬಾರಿ ಮ್ಯಾಚ್ ವಿನ್ನರ್ಸ್
Advertisement
Advertisement
ಪ್ರಸ್ತುತ ಐಪಿಎಲ್ 2022ರಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ತನ್ನ ಆರಂಭಿಕ ನಾಲ್ಕು ಪಂದ್ಯಗಳನ್ನು ಕಳೆದುಕೊಂಡಿದೆ. ಇದು ಫ್ರಾಂಚೈಸಿ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಭವಿಸಿದೆ. ಚೆನ್ನೈ ಟೂರ್ನಿಯಲ್ಲಿ ನಾಲ್ಕು ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಆದರೆ ಈ ಋತುವಿನಲ್ಲಿ ಜಯದ ಲಯ ಕಂಡುಕೊಳ್ಳಲು ಹೆಣಗಾಡುತ್ತಿದೆ ಎಂದರು. ಇದನ್ನೂ ಓದಿ: ರಾಹುಲ್ ಗೋಲ್ಡನ್ ಡಕ್ – ನಿರಾಸೆಗೊಂಡ ಆಥಿಯಾ ಶೆಟ್ಟಿ
Advertisement
ಐಪಿಎಲ್ 2022ರ ಮೆಗಾ ಹರಾಜಿನಲ್ಲಿ ರೂ. 7 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಖರೀದಿಸಿದ ಫಾಫ್ ಡು ಪ್ಲೆಸಿಸ್ ಅವರು ತಮ್ಮ ಸಂಪೂರ್ಣ ಐಪಿಎಲ್ ವೃತ್ತಿಜೀವನವನ್ನು ಸಿಎಸ್‍ಕೆಯೊಂದಿಗೆ ಕಳೆದಿದ್ದರು. ಅವರು ಈ ಹಿಂದೆ ಚೆನ್ನೈನ 2021 ರ ಐಪಿಎಲ್ ವಿಜಯೋತ್ಸವದಲ್ಲಿ 59 ಎಸೆತಗಳಲ್ಲಿ 86 ರನ್ ಗಳಿಸಿ ಪ್ರಮುಖ ಪಾತ್ರ ವಹಿಸಿದ್ದರು. ಕೆಕೆಆರ್ ವಿರುದ್ಧದ ಫೈನಲ್‍ನಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಸಹ ಅವರು ತಮ್ಮ ಮುಡಿಗೇರಿಸಿಕೊಂಡಿದ್ದರು.
ರವೀಂದ್ರ ಜಡೇಜಾ ಅವರ ಮೇಲೆ ಯಾವುದೇ ನಾಯಕತ್ವದ ಒತ್ತಡವನ್ನು ಹೇರದೆ ಆಟಗಾರನಾಗಿಯೇ ಆಡಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.