CricketLatestMain PostSports

ಐಪಿಎಲ್ ಮೆಗಾ ಹರಾಜಿಗೆ ಹೆಸರು ನೋಂದಾಯಿಸಿಕೊಂಡ ಶ್ರೀಶಾಂತ್ – ಮೂಲಬೆಲೆ ಎಷ್ಟು ಗೊತ್ತಾ?

ತಿರುವನಂತಪುರಂ: ತಿರುವನಂತಪುರಂ ಎಕ್ಸ್‌ಪ್ರೆಸ್ ಖ್ಯಾತಿಯ ಕೇರಳದ ವೇಗಿ ಎಸ್.ಶ್ರೀಶಾಂತ್ 2022ರ ಐಪಿಎಲ್ ಮೆಗಾ ಹರಾಜಿಗೆ ತಮ್ಮ ಹೆಸರನ್ನು ನೋಂದಾಣಿ ಮಾಡಿಕೊಂಡಿದ್ದಾರೆ.

2013ರಲ್ಲಿ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿ 7 ವರ್ಷಗಳ ನಿಷೇಧದ ಬಳಿಕ ಕಳೆದ ವರ್ಷ ಐಪಿಎಲ್ ಹರಾಜಿನಲ್ಲಿ ತಮ್ಮ ಹೆಸರನ್ನು ಶ್ರೀಶಾಂತ್ ನೋಂದಾಣಿ ಮಾಡಿಕೊಂಡಿದ್ದರು. ಆದರೆ ಅಂತಿಮ ಪಟ್ಟಿಯಲ್ಲಿ ಶ್ರೀಶಾಂತ್ ಅವರ ಹೆಸರು ಇರಲಿಲ್ಲ. ಇದೀಗ ಈ ಬಾರಿ ಮತ್ತೆ 50 ಲಕ್ಷ ರೂ. ಮೂಲಬೆಲೆಗೆ ಶ್ರೀಶಾಂತ್ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಐಪಿಎಲ್ ಹರಾಜಿಗೆ ಆಟಗಾರರ ಪಟ್ಟಿ ಪ್ರಕಟ – ಶಾರೂಕ್ ಖಾನ್, ಅವೇಶ್ ಖಾನ್ ಬೆಲೆ ಕಂಡು ದಂಗಾದ ಕ್ರಿಕೆಟ್‌ ಪ್ರಿಯರು

ನಿಷೇಧದ ಬಳಿಕ ಕ್ರಿಕೆಟ್‍ಗೆ ವಾಪಾಸಾದ ಶ್ರೀ, ಕೇರಳ ಪರ ವಿಜಯ ಹಜಾರೆ, ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಶ್ರೀಶಾಂತ್ ನಿಷೇಧ ಶಿಕ್ಷೆಗೆ ಗುರಿಯಾಗುವ ಮೊದಲು ರಾಜಸ್ಥಾನ ರಾಯಲ್, ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು ಕಿಂಗ್ಸ್ 11 ಪಂಜಾಬ್ ಪರ ಆಡಿದ್ದರು. ಐಪಿಎಲ್‍ನಲ್ಲಿ ಒಟ್ಟು 44 ಪಂದ್ಯವಾಡಿರುವ ಶ್ರೀ 44 ವಿಕೆಟ್ ಪಡೆದು ಮಿಂಚಿದ್ದಾರೆ. ಇದನ್ನೂ ಓದಿ: ಪಂತ್ ಸಿಕ್ಸರ್‌ಗೆ ಕೊಹ್ಲಿ ಡ್ಯಾನ್ಸ್ – ವೀಡಿಯೋ ವೈರಲ್

15ನೇ ಆವೃತ್ತಿ ಐಪಿಎಲ್‍ನ ಮೆಗಾ ಹರಾಜಿನಲ್ಲಿ 1,214 ಮಂದಿ ಆಟಗಾರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 896 ಭಾರತೀಯ ಆಟಗಾರರು ಮತ್ತು 318 ವಿದೇಶಿ ಆಟಗಾರರು ಹರಾಜಿಗೆ ತಮ್ಮ ಹೆಸರನ್ನು ಕೊಟ್ಟಿದ್ದಾರೆ. ಈ ಬಾರಿ 5 ಕ್ಯಾಟಗರಿಯಲ್ಲಿ ಆಟಗಾರರಿಗೆ ಬೆಲೆ ನಿಗದಿಪಡಿಸಲಾಗಿದೆ. 2 ಕೋಟಿ, 1.5 ಕೋಟಿ, 1 ಕೋಟಿ, 50 ಲಕ್ಷ ಮತ್ತು 20 ಲಕ್ಷ ರೂಪಾಯಿಯ ಮೂಲ ಬೆಲೆ ಕ್ಯಾಟಗರಿಯಲ್ಲಿ ಆಟಗಾರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ.

ಅಚ್ಚರಿ ಎಂಬಂತೆ ಸ್ಟಾರ್ ಆಟಗಾರರಾಗಿ ಗುರುತಿಸಿಕೊಂಡಿದ್ದ, ಕ್ರಿಸ್ ಗೇಲ್, ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಸ್ಯಾಮ್ ಕರ್ರನ್, ಮಿಚೆಲ್ ಸ್ಟಾರ್ಕ್ ಐಪಿಎಲ್‍ನಿಂದ ಹಿಂದೆ ಸರಿದಿದ್ದಾರೆ. ಈ ನಡುವೆ ಈ ಹಿಂದಿನ ಐಪಿಎಲ್ ಮತ್ತು ದೇಶಿ ಟೂರ್ನಿಗಳಲ್ಲಿ ಮಿಂಚುಹರಿಸಿದ ಆಟಗಾರಾದ ಶಾರೂಖ್ ಖಾನ್ ಮತ್ತು ಆವೇಶ್ ಖಾನ್ ಮೂಲಬೆಲೆಯನ್ನು 20 ಲಕ್ಷ ಫಿಕ್ಸ್ ಮಾಡಿಕೊಂಡು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.‌ ಇದನ್ನೂ ಓದಿ: ಒತ್ತಾಯಕ್ಕೆ ಮಣಿದು ಕೊಹ್ಲಿ ನಾಯಕತ್ವ ತೊರೆದರು: ಶೋಯೆಬ್‌ ಅಖ್ತರ್‌

Leave a Reply

Your email address will not be published.

Back to top button