ಪುಣೆ: ಗುಜರಾತ್ ಟೈಟಾನ್ಸ್ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ನೀಡಿದ ಉತ್ತಮ ಪ್ರದರ್ಶನದ ಫಲವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.
Advertisement
ಗೆಲ್ಲಲು 172 ರನ್‍ಗಳ ಗುರಿ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ರಿಷಭ್ ಪಂತ್ 43 ರನ್ (29 ಎಸೆತ, 7 ಬೌಂಡರಿ) ಮತ್ತು ಲಲಿತ್ ಯಾದವ್ 25 ರನ್ (22 ಎಸೆತ, 2 ಬೌಂಡರಿ, 1 ಸಿಕ್ಸ್) ಸಿಡಿಸಿ ಹೋರಾಡಿದ್ದನ್ನು ಹೊರತುಪಡಿಸಿ ಉಳಿದ ಯಾವೊಬ್ಬ ಬ್ಯಾಟ್ಸ್‌ಮ್ಯಾನ್ ಕೂಡ ಡೆಲ್ಲಿ ಬೌಲರ್‌ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಲು ಎಡವಿದರು. ಅಂತಿಮವಾಗಿ ಡೆಲ್ಲಿ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 157 ರನ್‌ಗಳಿಸಲಷ್ಟೆ ಶಕ್ತವಾಗಿ ಸೋಲು ಕಂಡಿತು.
Advertisement
Advertisement
ಡೆಲ್ಲಿ ನಾಯಕನ ನಿರ್ಧಾರದಂತೆ ಮೊದಲು ಬ್ಯಾಟಿಂಗ್ ಮಾಡಲು ಅವಕಾಶ ಪಡೆದ ಗುಜರಾತ್ ಟೈಟಾಟ್ಸ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಮ್ಯಾಥ್ಯೂ ವೇಡ್ 1 ರನ್‍ಗೆ ಸುಸ್ತಾದರು. ನಂತರ ವಿಜಯ್ ಶಂಕರ್ 13 ರನ್ (20 ಎಸೆತ, 1 ಬೌಂಡರಿ) ಬಾರಿಸಿ ನಿರಾಸೆ ಮೂಡಿಸಿದರು.
Advertisement
ನಂತರ ಜೊತೆಯಾದ ಶುಭಮನ್ ಗಿಲ್ ಮತ್ತು ನಾಯಕ ಹಾರ್ದಿಕ್ ಪಾಂಡ್ಯ 3ನೇ ವಿಕೆಟ್‍ಗೆ 65 ರನ್ (47 ಎಸೆತ) ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು. ಹಾರ್ದಿಕ್ ಪಾಂಡ್ಯ 31 ರನ್ (27 ಎಸೆತ, 4 ಬೌಂಡರಿ) ಸಿಡಿಸಿ ಔಟ್ ಆದರು. ಆದರೆ ಗಿಲ್ ಮಾತ್ರ ತಮ್ಮ ಬ್ಯಾಟಿಂಗ್ ಆರ್ಭಟ ಮುಂದುವರಿಸಿ 84 ರನ್ (46 ಎಸೆತ 6 ಬೌಂಡರಿ, 4 ಸಿಕ್ಸ್) ಬಾರಿಸಿ ಕ್ಯಾಚ್ ನೀಡಿ ಔಟ್ ಆದರು. ಅಂತಿಮವಾಗಿ ಟೈಟಾನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 171 ರನ್ ಪೇರಿಸಿತು.
ಡೆಲ್ಲಿ ಪರ ಮುಸ್ತಫಿಜುರ್ ರೆಹಮಾನ್ 3 ವಿಕೆಟ್ ಮಿಂಚಿದರೆ, ಖಲೀಲ್ ಅಹಮದ್ 2 ಮತ್ತು ಕುಲ್‍ದೀಪ್ ಯಾದವ್ 1 ವಿಕೆಟ್ ಕಿತ್ತರು.