ನವದೆಹಲಿ: ಭಾರತ ತಂಡದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಈ ವರ್ಷದ ಐಪಿಎಲ್‍ನಲ್ಲಿ ನೂತನವಾಗಿ ಸೇರ್ಪಡೆಗೊಂಡಿರುವ ಅಹಮದಾಬಾದ್ ತಂಡದ ನಾಯಕರಾಗುವುದು ಬಹುತೇಕ ಖಚಿತವಾಗಿದೆ.
ಗುಜರಾತ್‍ನ ಬರೋಡಾದ ನಿವಾಸಿಯಾಗಿರುವ ಹಾರ್ದಿಕ್ ಪಾಂಡ್ಯ ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಡುತ್ತಿದ್ದರು. ಇದೇ ಮೊದಲ ಬಾರಿಗೆ ತಮ್ಮ ರಾಜ್ಯವನ್ನು ಮುನ್ನಡೆಸುವ ಸಾಧ್ಯತೆಯಿದೆ.
Advertisement
Advertisement
ಅಹಮದಾಬಾದ್ ತಂಡದಲ್ಲಿ ಮುಖ್ಯ ಕೋಚ್ ಆಗಿ ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ ನೇಮಕಗೊಳ್ಳುವ ಸಾಧ್ಯತೆಯಿದೆ. 2017ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತರಾದ ನೆಹ್ರಾ, ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಸಹಾಯಕ ಕೋಚ್ ಆಗಿ ಕೆಲಸ ಮಾಡುತ್ತಿದ್ದರು.
Advertisement
ಈ ಬಾರಿ ನಡೆದ ಬಿಡಿಂಗ್‍ನಲ್ಲಿ 5 ಬಾರಿ ಚಾಂಪಿಯನ್ ಆದ ಮುಂಬೈ ಇಂಡಿಯನ್ಸ್ ತಂಡವು ರೋಹಿತ್ ಶರ್ಮಾ, ಜಸ್ಪ್ರಿತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಹಾಗೂ ಕಿರಣ್ ಪೊಲಾರ್ಡ್ ಅವರನ್ನು ಮೊದಲು ಉಳಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಕೈಬಿಟ್ಟಿತ್ತು.
Advertisement
ಈ ವರ್ಷ ಹಳೆಯ ಐಪಿಲ್ ತಂಡಗಳ ಜೊತೆಗೆ ಅಹಮದಾಬಾದ್ ಹಾಗೂ ಲಕ್ನೋ ತಂಡಗಳೆರಡು ಹೊಸದಾಗಿ ಸೇರ್ಪಡೆಗೊಂಡಿದೆ. ಈ ಎರಡು ತಂಡಗಳು ಬಿಡ್‍ಗೂ ಮೊದಲೇ ಗರಿಷ್ಟ ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲು ಐಪಿಎಲ್ ಅನುಮತಿ ಮಾಡಿದೆ. ಹೀಗಾಗಿ ಶೀಘ್ರವೇ ಈ ತಂಡಗಳು ಮೂವರು ಆಟಗಾರರ ಹೆಸರನ್ನು ಪ್ರಕಟಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಕಾಲಭೈರವನಿಗೆ ಪೊಲೀಸ್ ಸಮವಸ್ತ್ರ – ಫೋಟೋ ವೈರಲ್
ಹಾರ್ದಿಕ್ ಪಾಂಡ್ಯ ಐಪಿಎಲ್ ಪಂದ್ಯದಲ್ಲಿ ಒಟ್ಟಾರೆಯಾಗಿ 92 ಪಂದ್ಯಗಳನ್ನು ಆಡಿದ್ದು, 1,476 ರನ್ ಗಳಿಸಿದ್ದಾರೆ. ಹಾಗೂ 42 ವಿಕೆಟ್‍ಗಳನ್ನು ಪಡೆದಿದ್ದಾರೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ಹಾರ್ದಿಕ್ ಭಾರತ ಪರ ಆಡಿರಲಿಲ್ಲ. ಬೆನ್ನು ನೋವಿನ ಸಮಸ್ಯೆಗಳಿಂದ ಬಳಲುತ್ತಿರುವ ಇವರು ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ಪ್ರವಾಸದಲ್ಲೂ ಪಾಲ್ಗೊಂಡಿಲ್ಲ. ಇದನ್ನೂ ಓದಿ: ನಾನು ಫಿಟ್ ಆಗಿದ್ದೇನೆ, ಹೊರಗಿನವರು ಏನು ಹೇಳುತ್ತಾರೆ ಅನ್ನೋದು ನನಗೆ ಮುಖ್ಯವಲ್ಲ: ಕೊಹ್ಲಿ