ಅಹಮದಾಬಾದ್: ಫೈನಲ್‍ಗೆ ಲಗ್ಗೆ ಇಡಲು ಗಲ್ಲಲೇಬೇಕಾದ ಪಂದ್ಯದಲ್ಲಿ ರಾಜಸ್ಥಾನ ಪರ ಜೋಸ್ ಬಟ್ಲರ್ ಬ್ಯಾಟಿಂಗ್ ಜೋಶ್‍ಗೆ ಆರ್‌ಸಿಬಿ ಕಂಗೆಟ್ಟು ಮನೆ ದಾರಿ ಹಿಡಿದಿದೆ.ಈ ಮೂಲಕ ಬಟ್ಲರ್ 2006ರಲ್ಲಿ ಕೊಹ್ಲಿ ಮಾಡಿದ್ದ ದಾಖಲೆಗೆ ಸಮನಾಗಿದ್ದಾರೆ.
ಈ ಬಾರಿಯ ಕ್ವಾಲಿಫೈಯರ್ 2ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್‍ಗಳಿಂದ ಸೋಲಿಸಿದ ರಾಜಸ್ಥಾನ್ ರಾಯಲ್ಸ್ ಐಪಿಎಲ್ ಫೈನಲ್‍ಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ಬಟ್ಲರ್ ಕೊಹ್ಲಿ ದಾಖಲೆಗೆ ಸರಿಸಮರಾಗಿದ್ದಾರೆ. ಈ ಬಾರಿಯ ಐಪಿಎಲ್‍ನಲ್ಲಿ ಜೋಸ್ ಬಟ್ಲರ್ 4ನೇ ಬಾರಿ ಶತಕವನ್ನು ಸಿಡಿಸುವ ಮೂಲಕ 2006ರಲ್ಲಿ ಈ ಸಾಧನೆ ಮಾಡಿದ್ದ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟುವ ಎಲ್ಲಾ ಲಕ್ಷಣಗಳು ಇವೆ.
Advertisement
Advertisement
ನಿನ್ನೆ ನಡೆದ ಪಂದ್ಯದಲ್ಲಿ ಬಟ್ಲರ್ ಕೇವಲ 59 ಎಸೆತಗಳಲ್ಲಿ ಭರ್ಜರಿ ಶತಕವನ್ನು ಸಿಡಿಸಿ ಜಯಕ್ಕೆ ಕಾರಣರಾಗಿದ್ದರು. ಪ್ರಸಿದ್ಧ್ ಕೃಷ್ಣ ಮತ್ತು ಓಬೇದ್ ಮೆಕಾಯ್ ಅವರ ಬೌಲಿಂಗ್‍ಗೆ ಭರ್ಜರಿ ಪ್ರದರ್ಶನ ತೋರಿದ ಬಟ್ಲರ್ 60 ಎಸೆತಗಳಿಗೆ 106(ಔಟಾಗದೆ) ರನ್ ಸಿಡಿಸಿದ್ದರು. ಈ ಬಾರಿಯ ಐಪಿಎಲ್‍ನಲ್ಲಿ ಬಟ್ಲರ್ ಈಗಾಗಲೇ 824 ರನ್ ಗಳಿಸಿದ್ದಾರೆ.
Advertisement
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಕ್ವಾಲಿಫೈಯರ್ 2ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಏಳು ವಿಕೆಟ್‍ಗಳ ಭರ್ಜರಿ ಜಯದೊಂದಿಗೆ ರಾಜಸ್ಥಾನ್ ರಾಯಲ್ಸ್ ಐಪಿಎಲ್ 2022 ರ ಫೈನಲ್‍ಗೆ ಪ್ರವೇಶಿಸಿದೆ. ಇದನ್ನೂ ಓದಿ: ಈ ಸಲ ಕಪ್ ನಮ್ದೇ ಮುಂದಿನ ವರ್ಷಕ್ಕೆ – ಆರ್‌ಸಿಬಿಗೆ ಹೀನಾಯ ಸೋಲು – ರಾಯಲ್ ಆಗಿ ಫೈನಲ್‍ಗೆ ಎಂಟ್ರಿಕೊಟ್ಟ ಆರ್‌ಆರ್
Advertisement
ವಿರಾಟ್ ಕೊಹ್ಲಿ ಹಾಗೂ ಡೇವಿಡ್ ವಾರ್ನರ್ ನಂತರ ಬಟ್ಲರ್ ಐಪಿಎಲ್‍ನ ಒಂದೇ ಋತುವಿನಲ್ಲಿ 800ರನ್ ಗಡಿ ದಾಟಿದ ಮೂರನೇ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಕೊಹ್ಲಿ 2016ರ ಐಪಿಎಲ್‍ನಲ್ಲಿ ದಾಖಲೆಯ 973ರನ್ ಗಳಿಸಿದರು. ಸನ್‍ರೈಸರ್ಸ್ ಹೈದರಾಬಾದ್‍ಗೆ ತಮ್ಮ ಚೊಚ್ಚಲ ಪ್ರಶಸ್ತಿಯನ್ನು ಮುದ್ರೆಯೊತ್ತಲು ಸಹಾಯ ಮಾಡಲು ಡೇವಿಡ್ ವಾರ್ನರ್ ಅವರು 848 ರನ್‍ಗಳನ್ನು ದಾಖಲಿಸಿದ್ದರು. ಇದನ್ನೂ ಓದಿ: ಕೊಹ್ಲಿ ಬ್ಯಾಟ್‍ನಿಂದ ಶತಕ ನಿರೀಕ್ಷೆ – ಅಭಿಮಾನಿಗಳ ಎದೆಬಡಿತ ಹೆಚ್ಚಿಸಿದ RR Vs RCB Qualifier 2