ಮುಂಬೈ: ಐಪಿಎಲ್ ಹರಾಜಿನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ದುಬಾರಿ ಬೆಲೆಗೆ ಮಾರಾಟವಾಗಬಹುದು ಎಂದು ಭಾರತದ ಮಾಜಿ ಆಟಗಾರ ಆಕಾಶ್ ಚೋಪ್ರಾ ಹೇಳಿದ್ದಾರೆ.
ಮೆಗಾ ಹರಾಜಿನ ಸಮಯದಲ್ಲಿ ಆಟಗಾರನ ಸಂಭಾವನೆಗೆ ಯಾವುದೇ ಮಿತಿಯಿಲ್ಲದಿದ್ದರೆ, ಕೆಎಲ್ ರಾಹುಲ್ 20 ಕೋಟಿಗೂ ಹೆಚ್ಚು ಮೊತ್ತಕ್ಕೆ ಹರಾಜು ಆಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಮುಂದಿನ ಐಪಿಎಲ್‍ನಲ್ಲಿ ಕನ್ನಡಿಗ ರಾಹುಲ್ ಆರ್ಸಿಬಿ ಕ್ಯಾಪ್ಟನ್?
Advertisement
Advertisement
ಐಪಿಎಲ್ 2022 ಕ್ಕೆ ಮುಂಚಿತವಾಗಿ ರಾಹುಲ್ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕತ್ವವನ್ನು ತೊರೆಯಲು ಮುಂದಾಗುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ಸೇರ್ಪಡೆಯಾಗಿದ್ದು ಹರಾಜು ಪ್ರಕ್ರಿಯೆ ಜೋರಾಗಿ ನಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: ಚಿನ್ನದ ಮೊಟ್ಟೆ ಇಟ್ಟ ಐಪಿಎಲ್ – 2008ರಲ್ಲಿ ಬಿಡ್ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?
Advertisement
If KL Rahul ends up in the auction…and if the draft system doesn’t put a ceiling on a player’s salary…he will easily be the most expensive player in the upcoming auction. 20 Crore +.
— Aakash Chopra (@cricketaakash) November 19, 2021
Advertisement
ರಾಹುಲ್ ಉತ್ತಮ ಬ್ಯಾಟ್ಸ್‌ಮನ್ ಮತ್ತು ತಂಡವನ್ನು ಮುನ್ನಡೆಸುವ ಸಾಮರ್ಥ್ಯ ಇರುವ ಕಾರಣ ಫ್ರಾಂಚೈಸಿಗಳು ಅವರನ್ನು ದುಬಾರಿ ಬೆಲೆ ನೀಡಿ ಖರೀದಿಸಬಹುದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.