ಮುಂಬೈ: 15ನೇ ಆವೃತ್ತಿ ಐಪಿಎಲ್‍ನ ಮೊದಲ ಪಂದ್ಯದಲ್ಲಿ ಚೆನ್ನೈ ನೀಡಿದ ಸಾಧಾರಣ ಮೊತ್ತ ಬೆನ್ನಟ್ಟಿದ ಕೋಲ್ಕತ್ತಾ ತಂಡ ಇನ್ನೂ 9 ಎಸೆತ ಬಾಕಿ ಇರುವಂತೆಯೇ 133 ರನ್ ಸಿಡಿಸಿ ಗೆಲುವಿನ ನಗೆ ಬೀರಿತು.
Advertisement
ಚೆನ್ನೈ ನೀಡಿದ 132 ರನ್‍ಗಳ ಟಾರ್ಗೆಟ್‍ನ್ನು ಕೋಲ್ಕತ್ತಾ ತಂಡ 18.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 133 ರನ್ ಸಿಡಿಸಿ ಗೆದ್ದು, 14ನೇ ಸೀಸನ್ ಐಪಿಎಲ್‍ನ ಫೈನಲ್ ಪಂದ್ಯದ ಸೋಲಿನ ಸೇಡು ತೀರಿಸಿಕೊಂಡಿತು. ಇದನ್ನೂ ಓದಿ: ಚೆನ್ನೈ ತಂಡದ ಹೊಸ ಸೂಪರ್ ಕಿಂಗ್‍ಗೆ ಪೋಸ್ಟ್ ಮೂಲಕ ಶುಭಕೋರಿದ ಅಮುಲ್
Advertisement
Advertisement
ಕೆಕೆಆರ್ ಪರ ಆರಂಭಿಕ ಜೋಡಿ ಅಜಿಂಕ್ಯಾ ರಹಾನೆ ಮತ್ತು ವೆಂಕಟೇಶ್ ಅಯ್ಯರ್ ಉತ್ತಮ ಆರಂಭ ನೀಡಿತು. ವೆಂಕಟೇಶ್ ಅಯ್ಯರ್ 16 ರನ್ (16 ಎಸೆತ, 2 ಬೌಂಡರಿ) ಸಿಡಿಸಿ ಔಟ್ ಆದರು. ಈ ಮೊದಲು ರಹಾನೆ ಜೊತೆ ಮೊದಲ ವಿಕೆಟ್‍ಗೆ 43 ರನ್ (38 ಎಸೆತ) ಜೊತೆಯಾಟವಾಡಿದರು. ಬಳಿಕ ನಿತೇಶ್ ರಾಣಾ 21 ರನ್ (17 ಎಸೆತ, 2 ಬೌಂಡರಿ, 1 ಸಿಕ್ಸ್) ಬಾರಿಸಿ ತಂಡಕ್ಕೆ ನೆರವಾದರು. ಇನ್ನೊಂದೆಡೆ ಅರ್ಧಶತಕದ ಹೊಸ್ತಿಲಲ್ಲಿದ್ದ ರಹಾನೆ 44 ರನ್ (34 ಎಸೆತ, 6 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟ್ ಆದರು. ಇದನ್ನೂ ಓದಿ: ಇಂದಿನಿಂದ ಐಪಿಎಲ್ ಆರಂಭ – ಅತಿ ಹೆಚ್ಚು ರನ್ ಸಿಡಿಸಿದ ಟಾಪ್ ತಂಡಗಳು
Advertisement
ಅಂತಿಮವಾಗಿ ಸ್ಯಾಮ್ ಬಿಲ್ಲಿಂಗ್ಸ್ 25 ರನ್ (21 ಎಸೆತ, 1 ಸಿಕ್ಸ್, 1 ಬೌಂಡರಿ) ಮತ್ತು ಶ್ರೇಯಸ್ ಅಯ್ಯರ್ ಅಜೇಯ 20 ರನ್ (20 ಎಸೆತ, 1 ಬೌಂಡರಿ) ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರವೀಂದ್ರ ಜಡೇಜಾರ ಆಯ್ಕೆ ಆರಂಭದಲ್ಲೇ ತಲೆಕೆಳಗಾಯಿತು. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ ಶೂನ್ಯ ಸುತ್ತಿದರೆ, ಡೆವೂನ್ ಕಾನ್ವೇ 3 ರನ್‍ಗೆ ಸುಸ್ತಾದರು. ಬಳಿಕ ಬಂದ ರಾಬಿನ್ ಉತ್ತಪ್ಪ, ಬೌಂಡರಿ, ಸಿಕ್ಸ್ ಸಿಡಿಸಿ ಅಬ್ಬರಿಸುವ ಸೂಚನೆ ನೀಡಿದರು ಕೂಡ ಅವರ ಆಟ 28 ರನ್ (21 ಎಸೆತ, 2 ಬೌಂಡರಿ, 2 ಸಿಕ್ಸ್) ಅಂತ್ಯಗೊಂಡಿತು. ಇವರೊಂದಿಗೆ ಅಂಬಾಟಿ ರಾಯುಡು 15 ರನ್ (17 ಎಸೆತ, 1 ಬೌಂಡರಿ, 1 ಸಿಕ್ಸ್) ಸಿಡಿಸಿ ಪೆವಿಲಿಯನ್ ಸೇರಿಕೊಂಡರು.
ಧೋನಿ ಭರ್ಜರಿ ಬ್ಯಾಟಿಂಗ್
61 ರನ್‍ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಚೆನ್ನೈ ತಂಡಕ್ಕೆ ರವೀಂದ್ರ ಜಡೇಜಾ ಮತ್ತು ಧೋನಿ ಆಸರೆಯಾದರು. ಈ ಜೋಡಿ ಕೆಕೆಆರ್ ಬೌಲರ್‌ಗಳ ಬೆವರಿಳಿಸಿತು. ಧೋನಿ ತಮ್ಮ ಹಳೆಯ ಖದರ್‌ನಲ್ಲಿ ಬ್ಯಾಟ್ ಬೀಸಿ ಅಜೇಯ 50 ರನ್ (38 ಎಸೆತ, 7 ಬೌಂಡರಿ, 1 ಸಿಕ್ಸ್) ಸಿಡಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ಜಡೇಜಾ ಅಜೇಯ 26 ರನ್ (28 ಎಸೆತ, 1 ಸಿಕ್ಸ್) ಬಾರಿಸಿ ಮಿಂಚಿದರು. ಈ ಜೋಡಿ ಆರನೇ ವಿಕೆಟ್‍ಗೆ ಅಜೇಯ 70 ರನ್ (56 ಎಸೆತ) ಜೊತೆಯಾಟವಾಡಿತು. ಅಂತಿಮವಾಗಿ ಚೆನ್ನೈ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿತು.
ಕೆಕೆಆರ್ ಪರ ಉಮೇಶ್ ಯಾದವ್ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ ಮತ್ತು ಆಂಡ್ರೆ ರಸೆಲ್ ತಲಾ 1 ವಿಕೆಟ್ ಪಡೆದರು.