ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ 187 ರನ್‌ಗಳಿಸಿದ ಕಿಂಗ್ಸ್ ಪಂಜಾಬ್ ತಂಡವು ಶಿಖರ್ ಧವನ್(88) ಹಾಗೂ ಬನುಕಾ ರಾಜಪಕ್ಸ ಅವರ ಅಬ್ಬರ ಆಟದಿಂದ 11 ರನ್‌ಗಳ ಗೆಲುವು ದಾಖಲಿಸಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲ ಬ್ಯಾಟಿಂಗ್ ಅವಕಾಶ ಪಡೆದ ಪಂಜಾಬ್ ಕಿಂಗ್ಸ್, 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 187 ರನ್‌ಗಳ ಮೊತ್ತಗಳಿಸಿತು. 187 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ತಂಡವು 20 ಓವರ್‌ಗಳಲ್ಲಿ 176 ರನ್‌ಗಳನ್ನು ಗಳಿಸಲಷ್ಟೇ ಸಾಧ್ಯವಾಯಿತು. ಇದನ್ನೂ ಓದಿ: ವಿಕೆಟ್ ನೀಡಿದ ಪೋಲಾರ್ಡ್‍ಗೆ ಮುತ್ತು ಕೊಟ್ಟು ಸಂಭ್ರಮಿಸಿದ ಕೃನಾಲ್ ಪಾಂಡ್ಯ
Advertisement
Advertisement
ಚೆನ್ನೈ ಮೊದಲ 6 ಎಸೆತಗಳಲ್ಲಿ 10 ರನ್‌ಗಳನ್ನು ಗಳಿಸಿತು. ನಂತರದಲ್ಲಿ ರಾಬಿನ್ ಉತ್ತಪ್ಪ. ಶಿವಂ ದುಬೆ ಬಹುಬೇಗನೇ ನಿರ್ಗಮಿಸಿದರು. ಆದರೆ 2ನೇ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್ ಆಗಿ ಕ್ರೀಸ್‌ಗಿಳಿದ ಅಂಬಟಿ ರಾಯುಡು 78ರನ್ (39 ಎಸೆತ, 7 ಬೌಂಡರಿ, 6 ಸಿಕ್ಸರ್) ಗಳನ್ನು ಚಚ್ಚುವ ಮೂಲಕ ಪಂಜಾಬ್ ಬೌಲರ್‌ಗಳ ಬೆವರಳಿಸಿದ್ದರು. ಇದರಿಂದಾಗಿ ಚೆನ್ನೈ ತಂಡಕ್ಕೆ ಗೆಲುವಿನ ಕನಸು ಚಿಗುರಿತ್ತು. ಇದನ್ನೂ ಓದಿ: 3.10 ಕೋಟಿ ರೂಪಾಯಿಯ ಐಷಾರಾಮಿ ಕಾರು ಖರೀದಿಸಿದ ಹಿಟ್ ಮ್ಯಾನ್
Advertisement
Advertisement
ರಾಯುಡು ಆಟಕ್ಕೆ ಬ್ರೇಕ್ ಹಾಕುವಲ್ಲಿ ರಬಾಡಾ ಯಶಸ್ವಿಯಾದರು. 39ನೇ ಎಸೆತದಲ್ಲಿ ತಮ್ಮ ವಿಕೆಟ್ ಒಪ್ಪಿಸಿ ಹೊರನಡೆದರು. 5ನೇ ಕ್ರಮಾಂಕದಲ್ಲಿ ಬಂದ ಮಹೇಂದ್ರ ಸಿಂಗ್ ಧೋನಿ ಅವರು ಬಿರುಸಿನ ಆಟವನ್ನೇ ಆಡಿದರು. ಕೊನೆಯ 7ನೇ ಎಸೆತದಲ್ಲಿ ಸಿಂಗಲ್ ತೆಗೆದುಕೊಂಡ ಧೋನಿ ಕೊನೆಯ ಓವರ್‌ನಲ್ಲಿ ತಮ್ಮಲ್ಲೇ ಸ್ಟ್ರೈಕ್ ಉಳಿಸಿಕೊಂಡರು. 6 ಎತೆಗಳಿಗೆ 28 ರನ್‌ಗಳಷ್ಟೇ ಬೇಕಿತ್ತು. ಮೊದಲ ಬಾಲ್‌ಗೆ ಸಿಕ್ಸರ್ ಬಾರಿಸಿದರು. ಆದರೆ, 2ನೇ ಎಸೆತ ಬೌನ್ಸ್ ಆದ ಹಿನ್ನೆಲೆ ಮತ್ತೊಂದು ಸಿಕ್ಸ್ ಹೊಡೆಯುವ ಪ್ರಯತ್ನವೂ ಕೈತಪ್ಪಿತು. 3ನೇ ಎಸೆತವೂ ವಿಫಲವಾಯಿತು. ನಾಲ್ಕನೆ ಎಸೆತದಲ್ಲಿ ಸಿಕ್ಸ್ ಎತ್ತುವ ಪ್ರಯತ್ನದಲ್ಲಿದ್ದ ಧೋನಿ ಕ್ಯಾಚ್ ನೀಡಿ ನಿರ್ಗಮಿಸಿದರು. ಚೆನ್ನೈ ಅನಿವಾರ್ಯವಾಗಿ ಸೋಲಿನ ಹೊಣೆ ಹೊರಬೇಕಾಯಿತು. ಋತುರಾಜ್ ಗಾಯಕ್ವಾಡ್ 30(27), ರಾಬಿನ್ ಉತ್ತಪ್ಪ 1 (7), ಮಿಚೆಲ್ ಸ್ಯಾಟ್ನರ್ 9 (15), ಶಿವಂ ದುಬೆ 8 (7) ರನ್‌ಗಳಿಸಿದರು. ಚೆನ್ನೈ ಸೂಪರ್ ಕಿಂಗ್ಸ್ ಪರ ಡ್ವೇನ್ ಬ್ರಾವೋ(2/42) ಹಾಗೂ ಮಹೀಶ್ ತೀಕ್ಷಣ(1/32) ವಿಕೆಟ್ ಪಡೆದರು.
ಟಾಸ್ ಸೋತು ಬ್ಯಾಂಟಿಂಗ್ ಇಳಿದ ಪಂಜಾಬ್ ತಂಡದ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್(88) ಹಾಗೂ ಬನುಕಾ ರಾಜಪಕ್ಸ(42) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಪಂಜಾಬ್ ಕಿಂಗ್ಸ್ 187 ರನ್‌ಗಳ ಪೈಪೋಟಿಯ ಮೊತ್ತ ಕಲೆಹಾಕಿತು.
ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ಪರ ನಾಯಕ ಮಯಾಂಕ್ ಅಗರ್ವಾಲ್(18) ಬಹುಬೇಗನೆ ನಿರ್ಗಮಿಸಿದರು. ಆದರೆ 2ನೇ ಜೊತೆಯಾದ ಶಿಖರ್ ಧವನ್ 88 ರನ್(59 ಬಾಲ್, 9 ಬೌಂಡರಿ, 2 ಸಿಕ್ಸ್) ಐಪಿಎಲ್‌ನಲ್ಲಿ ಮತ್ತೊಂದು ಅರ್ಧಶತಕ ಬಾರಿಸಿ ಅಬ್ಬರಿಸಿದರು. ಇವರಿಗೆ ಸಾಥ್ ನೀಡಿದ ಬನುಕಾ ರಾಜಪಕ್ಸ 42 ರನ್(32 ಬಾಲ್, 2 ಬೌಂಡರಿ, 2 ಸಿಕ್ಸ್) ಬ್ಯಾಟಿಂಗ್ ಪ್ರದರ್ಶಿಸಿದರು. ಸಿಎಸ್‌ಕೆ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಈ ಜೋಡಿ 2ನೇ ವಿಕೆಟ್‌ಗೆ 110(71) ರನ್‌ಗಳ ಜೊತೆಯಾಟದ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು.
ರಾಜಪಕ್ಸ ವಿಕೆಟ್ ಪತನದ ನಂತರ ಬಂದ ಲಿಯಮ್ ಲಿವಿಂಗ್‌ಸ್ಟೋನ್ 19 ರನ್ (7 ಬಾಲ್, 1 ಬೌಂಡರಿ, 2 ಸಿಕ್ಸ್) ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೇ ಧವನ್ ಹಾಗೂ ಲಿವಿಂಗ್‌ಸ್ಟೋನ್ 3ನೇ ವಿಕೆಟ್‌ಗೆ 27(11 ಎಸೆತ) ಜೊತೆಯಾಟದ ಕಾಣಿಕೆ ನೀಡಿದರು. ನಂತರ ಬಂದ ಇಂಗ್ಲೆಂಡ್ ಟೀಂನ ಆರಂಭಿಕ ಆಟಗಾರ ಜಾನಿ ಬ್ರೈಸ್ಟೋ 3 ಎಸೆತಗಳಲ್ಲಿ ಕೇವಲ 6 ರನ್‌ಗಳನ್ನು ಗಳಿಸಿ ರನೌಟ್‌ನಲ್ಲಿ ತಮ್ಮ ವಿಕೆಟ್ ಒಪ್ಪಿಸಿ ನಡೆದರು. ಬೌಲಿಂಗ್‌ನಲ್ಲಿ ಕಾಗಿಸೋ ರಬಾಡಾ ಹಾಗೂ ರಿಶಿ ಧವನ್ ತಲಾ 2 ವಿಕೆಟ್‌ಗಳನ್ನು ಪಡೆದುಕೊಳ್ಳುವ ಮೂಲಕ ತಂಡದ ಗೆಲುವಿಗೆ ನೆರವಾದರು.
ರನ್ ಏರಿಕೆಯಾಗಿದ್ದು ಹೇಗೆ?
74 ಎಸೆತಗಳಲ್ಲಿ 50 ರನ್
75 ಎಸೆತಗಳಲ್ಲಿ 100 ರನ್
108 ಎಸೆತಗಳಲ್ಲಿ 150 ರನ್
120 ಎಸೆತಗಳಲ್ಲಿ 187 ರಬ್