ಮುಂಬೈ: ಡಿವೈನ್ ಕಾನ್ವೆಯ ಸ್ಫೋಟಕ ಬ್ಯಾಟಿಂಗ್ ಹಾಗೂ ಮೊಯಿನ್ ಅಲಿ ಅವರ ಮಿಂಚಿನ ಬೌಲಿಂಗ್ ದಾಳಿಯಿಂದ ಚೆನ್ನೈ ಸೂಪರ್‌ಕಿಂಗ್ಸ್ 91 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.
ಮುಂಬೈನ ಡಾ.ಡಿ.ವೈ.ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್‌ಕಿಂಗ್ಸ್ ತಂಡವು 20 ಓವರ್‌ಗಳಲ್ಲಿ ಭರ್ಜರಿ 208 ರನ್ ಪೇರಿಸಿ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 209 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.4 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 117 ರನ್‌ಗಳಿಸಿ ಸಿಎಸ್‌ಕೆಗೆ ಮಂಡಿಯೂರಿತು.
Advertisement
Advertisement
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದು ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಕಲೆಹಾಕಿದ್ದು ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 209 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ಇದನ್ನೂ ಓದಿ: ಹೈದ್ರಾಬಾದ್ ಹಾರಾಟಕ್ಕೆ ಬ್ರೇಕ್ ಹಾಕಿದ ‘ಗ್ರೀನ್‌ಬಾಯ್ಸ್’- RCBಗೆ 67 ರನ್‌ಗಳ ಭರ್ಜರಿ ಜಯ
Advertisement
Advertisement
ಈ ಗುರಿ ಬೆನ್ನತ್ತಿದ ಡೆಲ್ಲಿ ತಂಡದಲ್ಲಿ ಪ್ರಮುಖ ಬ್ಯಾಟರ್‌ಗಳ ವೈಫಲ್ಯ ಕಂಡುಬಂದಿತು. ಆರಂಭಿಕ ಆಟಗಾರ ಶ್ರೀಕರ್ ಭರತ್ 8 ರನ್‌ಗಳಿಗೆ ಹಾಗೂ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ 19 ರನ್ (12 ಎಸೆತ) ಗಳಿಸಿ ವಿಕೆಟ್ ಒಪ್ಪಿಸಿದ್ದು, ಡೆಲ್ಲಿಗೆ ಆಘಾತ ನೀಡಿತು. ಈ ವೇಳೆ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್ ಜೋಡಿ 19 ಎಸೆತಗಳಲ್ಲಿ 36 ರನ್‌ಗಳಿಸಿ, ತಂಡಕ್ಕೆ ಗೆಲುವಿನ ಕನಸು ಚಿಗುರುವಂತೆ ಮಾಡಿತ್ತು. ಆದರೆ ಪ್ರಮುಖ ಬ್ಯಾಟರ್‌ಗಳ ಸಾಂಗಿಕ ಪ್ರದರ್ಶನಕ್ಕೆ ಎಲ್ಲಿಯೂ ಅವಕಾಶ ಕೊಡದ ಸಿಎಸ್‌ಕೆ ಟೀಂ ಡೆಲ್ಲಿ ಬ್ಯಾಟರ್‌ಗಳನ್ನು ಕಟ್ಟಿ ಹಾಕಿತ್ತು.
2 ವಿಕೆಟ್‌ಗಳನ್ನು ಕಳೆದುಕೊಂಡರೂ ಉತ್ತಮ ಪ್ರದರ್ಶನವನ್ನೇ ನೀಡಿದ್ದ ಡೆಲ್ಲಿ ತಂಡವು ಮೊದಲ 7 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 71 ರನ್‌ಗಳನ್ನು ಪೇರಿಸಿತ್ತು. ನಂತರ ಬಂದ ಪ್ರಮುಖ ಬ್ಯಾಟರ್‌ಗಳ ವೈಫಲ್ಯದ ಆಟ ತಂಡದ ಸೋಲನ್ನು ಒಪ್ಪಿಕೊಳ್ಳುವಂತೆ ಮಾಡಿತು.
ಡೆಲ್ಲಿ ತಂಡದ ಪರ ಮಿಚೆಲ್ ಮಾರ್ಷ್ 25 ರನ್ (20 ಎಸೆತ, 3 ಬೌಂಡರಿ, 1 ಸಿಕ್ಸರ್), ರಿಷಭ್‌ಪಂತ್ 21 (11 ಎಸೆತ, 4 ಬೌಂಡರಿ), ಶಾರ್ದೂಲ್ ಠಾಕೂರ್ 24 ರನ್ (19 ಎಸೆತ, 1 ಸಿಕ್ಸರ್, 2 ಬೌಂಡರಿ), ರೋವ್ಮನ್ ಪೋವೆಲ್ 3, ಅಕ್ಸರ್ ಪಟೇಲ್ 6, ರಿಪಾಲ್ ಪಟೇಲ್ 1 ರನ್ ಗಳಿಸಿದರೆ, ಅನ್ರಿಚ್ ನಾರ್ಟ್ಜೆ 1 ರನ್‌ಗಳಿಸಿ ಅಜೇಯರಾಗುಳಿದರು. ಡೆಲ್ಲಿ ಪರ ಎನ್ರಿಚ್ ನಾಕಿಯಾ 3 ಹಾಗೂ ಖಲೀಲ್ ಅಹ್ಮದ್ 2 ವಿಕೆಟ್ ಗಳಿಸಿದರು.
ಮೊಯಿನ್ ಬೌಲಿಂಗ್ ಮಿಂಚಿನ ದಾಳಿ: ಡೆಲ್ಲಿ ಬೌಲರ್‌ಗಳ ವಿರುದ್ಧ ಮಿಂಚಿನ ದಾಳಿ ನಡೆಸಿದ ಆಲ್‌ರೌಂಡರ್ ಮೊಯಿನ್ ಅಲಿ, ಡೆಲ್ಲಿ ಬ್ಯಾಟರ್‌ಗಳನ್ನು ಬಗ್ಗುಬಡಿದರು. 4 ಓವರ್‌ನಲ್ಲಿ ಕೇವಲ 13 ರನ್‌ಗಳನ್ನು ನೀಡಿ 3 ವಿಕೆಟ್ ಉರುಳಿಸಿದರು. ಇದಕ್ಕೆ ತಾವೇನು ಕಮ್ಮಿ ಇಲ್ಲವೆನ್ನುವಂತೆ ಮುಖೇಶ್ ಚೌಧರಿ, 2 ಸಿಮರ್ಜೀತ್ ಸಿಂಗ್ 2 ವಿಕೆಟ್ ಗಳಿಸಿದರು.
ಕಾನ್ವೆ ಸ್ಫೋಟಕ ಬ್ಯಾಟಿಂಗ್: ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಸಿಎಸ್‌ಕೆ ತಂಡದ ಡಿವೋನ್ ಕಾನ್ವೆ ಹಾಗೂ ಋತುರಾಜ್ ಗಾಯಕವಾಡ್ ಮಗದೊಮ್ಮೆ ಅತ್ಯುತ್ತಮ ಪ್ರದರ್ಶನ ನೀಡಿದರು. ಆರಂಭದಲ್ಲಿ ಡೆಲ್ಲಿ ಬೌಲರ್‌ಗಳನ್ನು ಬೆಂಡಿತ್ತಿದ ಈ ಜೋಡಿ ಮೊದಲ ವಿಕೆಟ್ ಕಳೆದುಕೊಳ್ಳುವ ವೇಳೆಗೆ 11 ಓವರ್‌ಗಳಲ್ಲಿ 110 ರನ್‌ಗಳ ಜೊತೆಯಾಟ ಕಲೆಹಾಕಿತ್ತು. ಇಬ್ಬರ ಸಾಂಗಿಕ ಬ್ಯಾಟಿಂಗ್ ಪ್ರದರ್ಶನದಿಂದ ತಂಡವು 200 ರನ್‌ಗಳ ಗಡಿ ದಾಟಲು ಸಾಧ್ಯವಾಯಿತು. ಇದನ್ನೂ ಓದಿ: ಮುಂಬೈ ತಂಡಕ್ಕೆ ರೋಚಕ ಜಯ – 3ನೇ ಸೋಲಿನ ಕಹಿ ಅನುಭವಿಸಿದ ಗುಜರಾತ್
ಕಾನ್ವೆ ಕೇವಲ 27 ಎಸೆತಗಳಲ್ಲಿ ಅಮೋಘ ಅರ್ಧಶತಕ ಸಿಡಿಸಿ, ಈ ಸೀಸನ್‌ನಲ್ಲೇ ಹ್ಯಾಟ್ರಿಕ್ ಅರ್ಧಶತಕಗಳ ಸಾಧನೆ ಮಾಡಿದರು. ಅತ್ತ ಕಲಾತ್ಮಕ ಇನ್ನಿಂಗ್ಸ್ ಕಟ್ಟಿದ ಗಾಯಕವಾಡ್ 41 ರನ್ (33 ಎಸೆತ, 4 ಬೌಂಡರಿ, 1 ಸಿಕ್ಸರ್) ಗಳಿಸಿ ಔಟ್ ಆದರು. ಇದೇ ವೇಳೆ ಶತಕದ ಸನಿಹದಲ್ಲಿ ಕಾನ್ವೆ ಎಡವಿದರು. ಅಲ್ಲದೆ ಕೇವಲ 13 ರನ್ ಅಂತರದಿಂದ ಶತಕ ವಂಚಿತರಾದರು. 49 ಎಸೆತಗಳನ್ನು ಎದುರಿಸಿದ ಕಾನ್ವೆ ಏಳು ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 87 ರನ್ ಗಳಿಸಿದರು. ಇದಾದ ಬೆನ್ನಲ್ಲೇ ದುಬೆ 19 ಎಸೆತಗಳಲ್ಲಿ ಸ್ಪೋಟಕ 32 ರನ್ (2 ಬೌಂಡರಿ, 2 ಸಿಕ್ಸರ್) ಚಚ್ಚಿ ವಿಕೆಟ್ ಒಪ್ಪಿಸಿದರು.
ಕೊನೆಯ ಹಂತದಲ್ಲಿ ನಾಯಕ ಮಹೇಂದ್ರ ಸಿಂಗ್ ಧೋನಿ 8 ಎಸೆತಗಳಲ್ಲಿ 21 ರನ್ ಗಳಿಸಿ (2 ಸಿಕ್ಸರ್, 1 ಬೌಂಡರಿ) ಅಜೇಯರಾಗುಳಿದರು. ಈ ಮೂಲಕ ಸಿಎಸ್‌ಕೆ 6 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತು.
ಡೆಲ್ಲಿ ಪ್ಲೇ ಆಫ್ ಕನಸು ಭಗ್ನ: ಮೊದಲ 10 ಪಂದಗಳಲ್ಲಿ 5 ಪಂದ್ಯಗಳನ್ನು ಗೆದ್ದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇ ಆಫ್‌ಗೆ ಬರಲು ಇನ್ನೂ ಕನಿಷ್ಠ 3 ಪಂದ್ಯಗಳನ್ನು ಗೆಲ್ಲಬೇಕಿತ್ತು. ಆದರೆ ಚೆನ್ನೈಗೆ ಶರಾಣದ ಡೆಲ್ಲಿ ಉಳಿದ ನಾಲ್ಕು ಪಂದ್ಯಗಳಲ್ಲಿ ಕನಿಷ್ಠ ಮೂರು ಪಂದ್ಯಗಳನ್ನಾದರೂ ಗೆಲ್ಲಬೇಕಿದೆ. ನಂತರದ ರೇಸ್‌ನಲ್ಲಿ ಹೈದರಾಬಾದ್, ಕಿಂಗ್ಸ್ ಪಂಜಾಬ್ ತಂಡಗಳಿವೆ.
ರನ್ ಏರಿದ್ದು ಹೇಗೆ?
35 ಎಸೆತ 50 ರನ್
61 ಎಸೆತ 100 ರನ್
92 ಎಸೆತ 150 ರನ್
120 ಎಸೆತ 208 ರನ್