ಮುಂಬೈ: 15ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಈ ಬಾರಿಯ ಐಪಿಎಲ್ ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡಲಾಗಿದೆ.
Advertisement
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಐಪಿಎಲ್ ಆಡಳಿತ ಮಂಡಳಿ, 15ನೇ ಆವೃತ್ತಿ ಐಪಿಎಲ್‍ನ್ನು ಸ್ಟೇಡಿಯಂಗೆ ಬಂದು ವೀಕ್ಷಿಸಲು 25% ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಕೊರೊನಾ ನಿಯಮವನ್ನು ಗಮನದಲ್ಲಿಟ್ಟುಕೊಂಡು 25% ಪ್ರೇಕ್ಷಕರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಆದರೆ ಸ್ಟೇಡಿಯಂಗೆ ಆಗಮಿಸುವ ಪ್ರೇಕ್ಷಕರು ಕೊರೊನಾ ನಿಯಮಗಳಾದ ಸಾಮಾಜಿಕ ಅಂತರ, ಮಾಸ್ಕ್‌ಗಳನ್ನು ಕಡ್ಡಾಯವಾಗಿ ಧರಿಸಬೇಕೆಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: 25ರ ಹರೆಯದಲ್ಲೇ ಟೆನ್ನಿಸ್‍ಗೆ ವಿದಾಯ ಘೋಷಿಸಿದ ವಿಶ್ವ ನಂಬರ್ 1 ಆಟಗಾರ್ತಿ ಆಶ್ ಬಾರ್ಟಿ
Advertisement
Advertisement
15ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರನ್ನರ್‌ಅಪ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯದಿಂದಲೇ 25% ಪ್ರೇಕ್ಷಕರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಮುಂಬೈ ನಗರದಲ್ಲಿರುವ ವಾಂಖೆಡೆ ಸ್ಟೇಡಿಯಂ, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಒಟ್ಟು 20 ಲೀಗ್ ಪಂದ್ಯಗಳು ನಡೆಯಲಿದೆ. ಪುಣೆಯ ಎಮ್‍ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂ ಮತ್ತು ಬ್ರಬೋರ್ನ್ ಕ್ರೀಡಾಂಗಣದಲ್ಲಿ 15 ಪಂದ್ಯ ನಡೆಯಲಿದೆ. ಎಲ್ಲಾ ತಂಡಗಳು ತಲಾ 4 ಪಂದ್ಯಗಳನ್ನು ವಾಂಖೆಡೆ ಮತ್ತು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಆಡಲಿದ್ದು, ತಲಾ 3 ಪಂದ್ಯಗಳನ್ನು ಬ್ರಬೋರ್ನ್ ಮತ್ತು ಎಮ್‍ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಡಲಿದೆ. ಇದನ್ನೂ ಓದಿ: ಐಪಿಎಲ್‍ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿ
Advertisement
ಐಪಿಎಲ್ ಮಾರ್ಚ್ 26 ರಂದು ಆರಂಭವಾಗಿ ಮೇ 29ಕ್ಕೆ ಕೊನೆಗೊಳ್ಳಲಿದೆ. ಒಟ್ಟು 65 ದಿನಗಳ ಕಾಲ ಟೂರ್ನಿ ನಡೆಯಲಿದೆ.