ನವದೆಹಲಿ: ಪುಣೆಯಲ್ಲಿ ನಡೆದ ಐಪಿಎಲ್ ಮ್ಯಾಚ್‌ನಲ್ಲಿ ರಾಜಾಸ್ತಾನ್ ರಾಯಲ್ಸ್ ವಿರುದ್ಧ ಪರಾಭವಗೊಂಡ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್‌ಗೆ 12 ಲಕ್ಷ ದಂಡ ವಿಧಿಸಲಾಗಿದೆ.
ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ರಾಜಾಸ್ತಾನ್ ರಾಯಲ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಭಾರೀ ದಂಡಕ್ಕೆ ಗುರಿಯಾಗಿರುವುದು ಚರ್ಚೆಗೆ ಕಾರಣವಾಗಿದೆ. ಸೋಮವಾರ ನಡೆದ ಪಂದ್ಯದಲ್ಲಿ ಹೈದ್ರಾಬಾದ್ ತಂಡವು 61 ರನ್‌ಗಳಿಂದ ಸೋಲನ್ನು ಅನುಭವಿಸಿತು. ಆದರೆ ಹೈದ್ರಾಬಾದ್ ತಂಡವು ನಿಧಾನಗತಿಯ ಬೌಲಿಂಗ್ ರೇಟನ್ನು ನಿರ್ವಹಿಸಿದ್ದರಿಂದ ದಂಡ ವಿಧಿಸಲಾಗಿದೆ ಎಂದು IPL ಕ್ರಿಕೆಟ್ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಲಕ್ನೋಗೆ ಲಾಕ್ ಹಾಕಿದ ಟೈಟಾನ್ಸ್ – ಗುಜರಾತ್‍ಗೆ 5 ವಿಕೆಟ್‍ಗಳ ಜಯ
Advertisement
Advertisement
ಕನಿಷ್ಠ ಓವರ್ ರೇಟ್ ಅಪರಾಧಕ್ಕೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಇದು ತಂಡದ ಮೊದಲ ಅಪರಾಧವಾಗಿರುವುದರಿಂದ, ಸನ್‌ರೈಸರ್ಸ್ ಹೈದ್ರಾಬಾದ್ ನಾಯಕ ಕೇನ್ ವಿಲಿಯಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದೂ ಹೇಳಿದೆ.