ಮುಂಬೈ: ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಹೈದರಾಬಾದ್ ತಂಡ ಗುಜರಾತ್ ವಿರುದ್ಧ 8 ವಿಕೆಟ್‍ಗಳ ಅಂತರದಿಂದ ಗೆದ್ದು ಬೀಗಿದೆ.
Advertisement
ಗೆಲ್ಲಲು 163 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಹೈದರಾಬಾದ್ ಉತ್ತಮ ಆರಂಭ ಪಡೆಯಿತು. ಅಭಿಷೇಕ್ ಶರ್ಮಾ ಮತ್ತು ಕೇನ್ ವಿಲಿಯಮ್ಸನ್ ಗುಜರಾತ್ ಬೌಲರ್‌ಗಳಿಗೆ ಕಾಡಿದರು. ಈ ಜೋಡಿ ಮೊದಲ ವಿಕೆಟ್‍ಗೆ 64 ರನ್ (53 ಎಸೆತ) ಗಳ ಜೊತೆಯಾಟವಾಡಿತು. ಈ ವೇಳೆ ಉತ್ತಮವಾಗಿ ಆಡುತ್ತಿದ್ದ ಅಭಿಷೇಕ್ ಶರ್ಮಾ 42 ರನ್ (32 ಎಸೆತ, 4 ಬೌಂಡರಿ) ವಿಕೆಟ್ ಪಡೆಯುವಲ್ಲಿ ರಶೀದ್ ಖಾನ್ ಯಶಸ್ವಿಯಾದರು. ಬಳಿಕ ಬಂದ ರಾಹುಲ್ ತ್ರಿಪಾಠಿ 17 ರನ್ (11 ಎಸೆತ, 1 ಬೌಂಡರಿ, 1 ಸಿಕ್ಸ್) ಸಿಡಿಸಿ ಗಾಯಗೊಂಡು ನಿವೃತ್ತರಾದರು.
Advertisement
Advertisement
ಇತ್ತ ಕೇನ್ ವಿಲಿಯಮ್ಸನ್ 57 ರನ್ (46 ಎಸೆತ, 2 ಬೌಂಡರಿ, 4 ಸಿಕ್ಸ್) ಸಿಡಿಸಿ ನಾಯಕನಾಟವಾಡಿದರು. ಅಂತಿಮವಾಗಿ 19.1 ಓವರ್‌ಗಳ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು ಇನ್ನೂ 5 ಎಸೆತ ಬಾಕಿ ಇರುವಂತೆ ಹೈದರಾಬಾದ್ 168 ರನ್ ಸಿಡಿಸಿ 8 ವಿಕೆಟ್‍ಗಳಿಂದ ಗೆಲುವು ದಾಖಲಿಸಿತು.
Advertisement
ಟಾಸ್ ಗೆದ್ದ ಹೈದರಾಬಾದ್ ನಾಯಕ ಕೇನ್ ವಿಲಿಯಮ್ಸನ್ ಎದುರಾಳಿ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿದರು. ಹೈದರಾಬಾದ್ ಬೌಲರ್‌ಗಳು ಕೂಡ ನಾಯಕನ ನಿರ್ಧಾರಂತೆ ಗುಜರಾತ್ ಬ್ಯಾಟ್ಸ್‌ಮ್ಯಾನ್‌ಗಳಿಗೆ ಆರಂಭದಿಂದಲೇ ಕಡಿವಾಣ ಹಾಕಿದರು. ಗುಜರಾತ್ ಪರ ನಾಯಕ ಹಾರ್ದಿಕ್ ಪಾಂಡ್ಯ ಏಕಾಂಗಿ ಹೋರಾಟ ನಡೆಸಿದರು. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಬಂದ ಪಾಂಡ್ಯ ಕೊನೆಯ ಎಸೆತದ ವರೆಗೆ ಬ್ಯಾಟ್ ಬೀಸಿ ಭರ್ತಿ 50 ರನ್ (42 ಎಸೆತ, 4 ಬೌಂಡರಿ, 1 ಸಿಕ್ಸ್) ಸಿಡಿಸಿ ಅಜೇಯರಾಗಿ ಉಳಿದರು.
ಪಾಂಡ್ಯಗೆ ಉತ್ತಮ ಸಾಥ್ ನೀಡಿದ ಕನ್ನಡಿಗ ಅಭಿನವ್ ಮನೋಹರ್ 35 ರನ್ (21 ಎಸೆತ, 5 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟ್ ಆದರು. ಈ ಮೊದಲು ಪಾಂಡ್ಯ ಜೊತೆ 5ನೇ ವಿಕೆಟ್‍ಗೆ 50 ರನ್ (32 ಎಸೆತ) ಜೊತೆಯಾಟವಾಡಿ ತಂಡಕ್ಕೆ ನೆರವಾದರು. ಅಂತಿಮವಾಗಿ ಗುಜರಾತ್ ತಂಡ 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು.
ಹೈದರಾಬಾದ್ ಪರ ಭುವನೇಶ್ವರ್ ಕುಮಾರ್ ಮತ್ತು ಟಿ.ನಟರಾಜನ್ ತಲಾ 2 ವಿಕೆಟ್ ಕಿತ್ತು ಗುಜರಾತ್ ತಂಡಕ್ಕೆ ಮುಳುವಾದರು. ಮಾರ್ಕೊ ಜಾನ್ಸೆನ್ ಮತ್ತು ಉಮ್ರಾನ್ ಮಲಿಕ್ ತಲಾ 1 ವಿಕೆಟ್ ಹಂಚಿಕೊಂಡರು.