ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾನುವಾರ ಕೋಲ್ಕತ್ತಾ ನೈಟ್‌ರೈಡರ್ಸ್ (KKR), ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ (Gujarat Titans) ವಿರುದ್ಧ ರೋಚಕ ಜಯ ಸಾಧಿಸಿತು.
ಕೊನೆಯ ಓವರ್‌ನಲ್ಲಿ ರಿಂಕು ಸಿಂಗ್ (Rinku Singh) ಸಿಡಿಸಿದ 5 ಭರ್ಜರಿ ಸಿಕ್ಸರ್ ನೆರವಿನಿಂದ ಕೆಕೆಆರ್, ಗುಜರಾತ್ ಜೈಂಟ್ಸ್ ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿ, ತವರಿನಲ್ಲೇ ಹಾಲಿ ಚಾಂಪಿಯನ್ಸ್‌ಗೆ ಮುಖಭಂಗ ಉಂಟುಮಾಡಿತು. ಇದನ್ನೂ ಓದಿ: IPL 2023: ಕೊನೆಯ ಓವರ್‌ನಲ್ಲಿ 6, 6, 6, 6, 6 - KKRಗೆ 3 ವಿಕೆಟ್‌ಗಳ ರೋಚಕ ಜಯ
ರಿಂಕು ಸಿಂಗ್ ಅಮೋಘ ಪ್ರದರ್ಶನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಬಾಲಿವುಡ್ ತಾರೆಯರೂ ಪ್ರಸಂಶೆ ವ್ಯಕ್ತಪಡಿಸಿದ್ದಾರೆ. ಹಾಟ್ ತಾರೆ ಅನನ್ಯ ಪಾಂಡೆ (Ananya Pandey) ಹಾಗೂ ಶಾರುಖ್ ಪುತ್ರಿ ಸುಹಾನಾ ಖಾನ್ (Suhana Khan) ತಮ್ಮ ಸ್ಟೇಟಸ್‌ನಲ್ಲಿ ರಿಂಕು ಸಿಂಗ್ ಬ್ಯಾಟಿಂಗ್ ಮಾಡುವ ಫೋಟೋವನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: RCB ಅಭಿಮಾನಿಗಳೇ ಎಚ್ಚರ – ಬ್ಲ್ಯಾಕ್‌ನಲ್ಲಿ ದುಬಾರಿ ಬೆಲೆಗೆ ಟಿಕೆಟ್ ಖರೀದಿಸಿ ಮೋಸ ಹೋಗದಿರಿ
`ಖಾರೂಖ್ ಖಾನ್ ಪುತ್ರಿ ಇದನ್ನೂ ಊಹಿಸಲು ಅಸಾಧ್ಯ ಎಂದರೆ, ಅನ್ಯನ್ಯ ಪಾಂಡೆ ನಿಜಕ್ಕೂ ನಂಬಲಾಗುತ್ತಿಲ್ಲ ರಿಂಕು ಕಿಂಗ್ʼ ಎಂದು ತಮ್ಮ ಇನ್ಸ್ಟಾಗ್ರಾಮ್ ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದಾರೆ.
ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 204 ರನ್ ಗಳಿಸಿತ್ತು. 205 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್ ನಿಗದಿತ ಓವರ್‌ಗಳಲ್ಲಿ 207 ರನ್ ಗಳಿಸಿ ಗೆಲುವು ಸಾಧಿಸಿತು.