ಚೆನ್ನೈ: ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಚೆನ್ನೈ 6 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಕೋಲ್ಕತ್ತಾ 18.3 ಓವರ್‌ಗಳಲ್ಲಿ 147 ರನ್ ಗಳಿಸಿ ಗೆಲುವು ಸಾಧಿಸಿತು.
Advertisement
Advertisement
ಕೋಲ್ಕತ್ತಾ 33 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡರೂ ನಾಲ್ಕನೇ ವಿಕೆಟಿಗೆ ನಿತೀಶ್ ರಾಣಾ ಮತ್ತು ರಿಂಕು ಸಿಂಗ್ 4ನೇ ವಿಕೆಟಿಗೆ 76 ಎಸೆತಗಳಲ್ಲಿ 99 ರನ್ ಜೊತೆಯಾಟವಾಡಿ ತಂಡವನ್ನು ಗೆಲುವಿನ ಹತ್ತಿರ ತಂದು ನಿಲ್ಲಿಸಿದರು. ರಿಂಕು ಸಿಂಗ್ 54 ರನ್(43 ಎಸೆತ, 4 ಬೌಂಡರಿ, 3 ಸಿಕ್ಸರ್) ಸಿಡಿಸಿ ರನೌಟ್ ಆದರು. ನಾಯಕ ನಿತೀಶ್ ರಾಣಾ ಔಟಾಗದೇ 57 ರನ್(44 ಎಸೆತ, 6 ಬೌಂಡರಿ, 1 ಸಿಕ್ಸರ್) ಹೊಡೆದರು.
Advertisement
ಈ ಗೆಲುವಿನೊಂದಿಗೆ 8ನೇ ಸ್ಥಾನದಲ್ಲಿದ್ದ ಕೋಲ್ಕತ್ತಾ 12 ಅಂಕಗಳೊಂದಿಗೆ 7ನೇ ಸ್ಥಾನಕ್ಕೆ ಜಿಗಿದರೆ ಚೆನ್ನೈ 15 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ. ಇದನ್ನೂ ಓದಿ: 59 ರನ್‌ಗಳಿಗೆ ರಾಜಸ್ಥಾನ್ ಆಲೌಟ್ – RCBಗೆ 112 ರನ್‌ಗಳ ಭರ್ಜರಿ ಜಯ – ಪ್ಲೆ ಆಫ್ ಕನಸು ಜೀವಂತ
Advertisement
ಮೊದಲು ಬ್ಯಾಟ್ ಮಾಡಿದ ಚೆನ್ನೈ ಪರ ಋತುರಾಜ್ ಗಾಯಕ್‌ವಾಡ್ 17 ರನ್(13 ಎಸೆತ, 2 ಬೌಂಡರಿ), ಕಾನ್ವೇ 30 ರನ್(28 ಎಸೆತ, 3 ಬೌಂಡರಿ) ಶಿವಂ ದುಬೆ 48 ರನ್ (34 ಎಸೆತ, 1 ಬೌಂಡರಿ, 3 ಸಿಕ್ಸರ್) ರವೀಂದ್ರ ಜಡೇಜಾ 20 ರನ್ (24 ಎಸೆತ, 1 ಸಿಕ್ಸರ್) ಸಿಡಿಸಿ ಔಟಾದರು.
ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ತಲಾ 2 ವಿಕೆಟ್, ವೈಭವ್ ಅರೋರ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.