ಕೋಲ್ಕತ್ತಾ: ಆರಂಭಿಕ ಆಟಗಾರ ಹ್ಯಾರಿ ಬ್ರೂಕ್ (Harry Brook) ಅವರ ಸ್ಫೋಟಕ ಶತಕದಿಂದ ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ 23 ರನ್‌ಗಳ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ 4 ವಿಕೆಟ್ ನಷ್ಟಕ್ಕೆ 228 ರನ್ ಹೊಡೆಯಿತು. 229 ರನ್‌ಗಳ ಸವಾಲು ಪಡೆದ ಕೋಲ್ಕತ್ತಾ 7 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತು.
Advertisement
Advertisement
ಕೋಲ್ಕತ್ತಾ 30 ರನ್‌ಗಳಿಸುವಷ್ಟರಲ್ಲೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿತ್ತು. ನಾಯಕ ನಿತೀಶ್ ರಾಣಾ (Nitish Rana) ಮತ್ತು ರಿಂಕು ಸಿಂಗ್ (Rinku Singh) ಸ್ಫೋಟಕ ಆಟವಾಡಿದರು. ರಾಣಾ 75 ರನ್(41 ಎಸೆತ, 5 ಬೌಂಡರಿ, 6 ಸಿಕ್ಸರ್) ಹೊಡೆದು ಔಟಾದರು. ಕೊನೆಯವರೆಗೂ ಹೋರಾಡಿದ ರಿಂಕು ಔಟಾಗದೇ 58 ರನ್(31 ಎಸೆತ, 4 ಬೌಂಡರಿ, 4 ಸಿಕ್ಸರ್) ಚಚ್ಚಿದ್ದರು.
Advertisement
ಕೊನೆಯ 24 ಎಸೆತದಲ್ಲಿ ಕೋಲ್ಕತ್ತಾ ಗೆಲ್ಲಲು 70 ರನ್‌ಗಳ ಅವಶ್ಯಕತೆಯಿತ್ತು. ರಾಣಾ ಮತ್ತು ರಿಂಕು ಸಿಂಗ್ 6ನೇ ವಿಕೆಟಿಗೆ 39 ಎಸೆತಗಳಲ್ಲಿ 69 ರನ್ ಹೊಡೆದಿದ್ದರು. 17ನೇ ಓವರ್‌ನ ಮೊದಲ ಎಸೆತವನ್ನು ರಾಣಾ ಸಿಕ್ಸರ್‌ಗೆ ಅಟ್ಟಿದ್ದರೆ ಎರಡನೇ ಎಸೆತವನ್ನೂ ಸಿಕ್ಸರ್‌ಗೆ ಅಟ್ಟುವ ಪ್ರಯತ್ನ ನಡೆಸಿದರು. ಆದರೆ ಕ್ಯಾಚ್ ಔಟಾದ ಪರಿಣಾಮ ಪಂದ್ಯ ಹೈದರಬಾದ್ ಕಡೆಗೆ ತಿರುಗಿತು.
Advertisement
ಬ್ರೂಕ್ ಶತಕ:
ಸನ್ ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಹ್ಯಾರಿ ಬ್ರೂಕ್ ಈ ಐಪಿಎಲ್ (IPL 2023) ಅವೃತ್ತಿಯಲ್ಲಿ ಮೊದಲ ಶತಕ (Century) ಸಿಡಿಸಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 55 ಎಸೆತಗಳಲ್ಲಿ ಔಟಾಗದೇ 100 ರನ್ (12 ಬೌಂಡರಿ, 3 ಸಿಕ್ಸರ್) ಚಚ್ಚಿದ್ದರು. ಇದು ಈ ಐಪಿಎಲ್‌ನಲ್ಲಿ ತಂಡವೊಂದರ ಅತಿ ಹೆಚ್ಚು ಸ್ಕೋರ್ ಆಗಿರುವುದು ವಿಶೇಷ.
ಮೊದಲ 32 ಎಸೆತಗಳಲ್ಲಿ 50 ರನ್ ಬಂದರೆ ನಂತರ 33 ಎಸೆತದಲ್ಲಿ ಬ್ರೂಕ್ 50 ರನ್ ಚಚ್ಚಿದ್ದಾರೆ. ಹೈದರಾಬಾದ್ ಪರ ನಾಯಕ ಐಡೆನ್ ಮಾರ್ಕ್ರಾಮ್ 50 ರನ್(26 ಎಸೆತ, 2 ಬೌಂಡರಿ, 5 ಸಿಕ್ಸರ್), ಅಭಿಷೇಕ್ ಶರ್ಮಾ 32 ರನ್ (17 ಎಸೆತ, 3 ಬೌಂಡರಿ, 2 ಸಿಕ್ಸರ್), ಕ್ಲಾಸೆನ್ ಔಟಾಗದೇ 1 6 ರನ್ (6 ಎಸೆತ, 2 ಬೌಂಡರಿ, 1 ಸಿಕ್ಸರ್) ಹೊಡೆದರು. ಇತರೇ ರೂಪದಲ್ಲಿ 12 ರನ್ (1 ನೋಬಾಲ್, 11 ವೈಡ್) ಬಂದಿತ್ತು.
ರನ್ ಏರಿದ್ದು ಹೇಗೆ?
50 ರನ್ – 26 ಎಸೆತ
100 ರನ್ – 66 ಎಸೆತ
150 ರನ್ – 59 ಎಸೆತ
200 ರನ್ – 109 ಎಸೆತ
228 ರನ್ – 120 ಎಸೆತ