ಚೆನ್ನೈ: 2024ರ ಐಪಿಎಲ್ ಟೂರ್ನಿಯಲ್ಲೂ ಲೆಜೆಂಡ್ ಖ್ಯಾತಿಯ ಎಂ.ಎಸ್ ಧೋನಿ (MS Dhoni) ಕಣಕ್ಕಿಳಿಯೋದು ಫಿಕ್ಸ್ ಆಗಿದೆ. ಮಹಿ ಮುಂದಿನ ಐಪಿಎಲ್‌ನಲ್ಲಿ (IPL 2024) ಪಾಲ್ಗೊಳ್ಳುವುದನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಧಿಕೃತಗೊಳಿಸಿದೆ.
ಭಾನುವಾರ ಜಿಯೋಸಿನಿಮಾದಲ್ಲಿ (Jio Cinema) ನಡೆದ ಕಾರ್ಯಕ್ರಮದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಿಟೇನ್, ರಿಲೀಸ್ ಮಾಡಿದ ಆಟಗಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಪೈಕಿ ಅಗ್ರ ಕ್ರಮಾಂಕದಲ್ಲಿ ಡೆವೋನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಶಿವಂ ದುಬೆ, ಮಧ್ಯಮ ಕ್ರಮಾಂಕದಲ್ಲಿ ಮೊಯಿನ್ ಅಲಿ, ರವೀಂದ್ರ ಜಡೇಜ, ಎಂ.ಎಸ್ ಧೋನಿ, ದೀಪಕ್ ಚಹಾರ್, ಕೆಳ ಕ್ರಮಾಂಕದಲ್ಲಿ ಮಹೀಶ್ ತೀಕ್ಷಣ, ಮತೀಶ ಪಥಿರಣ, ಮುಕೇಶ್ ವರುಣ್ ತಂಡಕ್ಕೆ ರಿಟೇನ್ ಆಗಿದ್ದಾರೆ.
Advertisement
Advertisement
ಸಿಎಸ್‌ಕೆ ಬಳಿ ಇನ್ನೆಷ್ಟು ದುಡ್ಡಿದೆ: ಒಟ್ಟು 8 ಆಟಗಾರರಿಗೆ ಚೆನ್ನೈ ಸೂಪರ್ ಕಿಂಗ್ಸ್ ಗೇಟ್‌ಪಾಸ್ ಕೊಟ್ಟಿದೆ. ಇದರಿಂದ ಫ್ರಾಂಚೈಸಿ ಪರ್ಸ್‌ನಲ್ಲಿ (ಉಳಿತಾಯ ಖಾತೆ) 32.2 ಕೋಟಿ ಉಳಿದಿದೆ. ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿರುವ ಮಿನಿ ಹರಾಜಿನಲ್ಲಿ ಇನ್ನಷ್ಟು ಆಟಗಾರರನ್ನು ಬಿಕರಿ ಮಾಡುವ ಉತ್ಸಾಹ ಹೊಂದಿದೆ. ಇದನ್ನೂ ಓದಿ: IPL 2024 Auction: ಮತ್ತೆ ಮುಂಬೈ ಸೇರಲಿದ್ದಾರೆ ಪಾಂಡ್ಯ?
Advertisement
Advertisement
16ನೇ ಆವೃತ್ತಿಯ ಐಪಿಎಲ್ (IPL 2023) ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿದ ಚೆನ್ನೈ ಸೂಪರ್ ಕಿಂಗ್ಸ್ (CSK) 5ನೇ ಬಾರಿಗೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿತು. ಆರಂಭದಿಂದಲೂ ಸಹ ಸಿಎಸ್‌ಕೆ ನಾಯಕನಾಗಿರುವ ಮಹೇಂದ್ರ ಸಿಂಗ್ ಧೋನಿ (MS Dhoni) ಅವರಿಗೆ 2023ರ ಐಪಿಎಲ್ ಕೊನೆಯ ಆವೃತ್ತಿ ಎಂದು ಹೇಳಲಾಗುತ್ತಿತ್ತು. ಆದರೆ, ಈ ಬಗ್ಗೆ ಧೋನಿ ಬಳಿ ಕೇಳಿದಾಗ ಸ್ಪಷ್ಟ ಉತ್ತರ ಬಂದಿರಲಿಲ್ಲ. ಫೈನಲ್ ಪಂದ್ಯ ಮುಗಿದ ಬಳಿಕ ಎಲ್ಲ ಗೊಂದಲಗಳಿಗೆ ಧೋನಿ ತೆರೆ ಎಳೆದು, ಮುಂದಿನ ಐಪಿಎಲ್‌ನಲ್ಲೂ ಆಡುವ ಸುಳಿವು ಕೊಟ್ಟಿದ್ದರು.
ಅಂದು ಮಹಿ ಹೇಳಿದ್ದೇನು?
ಐಪಿಎಲ್ ಫೈನಲ್ ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ್ದ ಮಹಿ, ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನಿವೃತ್ತಿ ಘೋಷಿಸಲು ಇದು ನನಗೆ ಉತ್ತಮ ಸಮಯವಾಗಿದೆ. ಈ ವರ್ಷ ನಾನು ಎಲ್ಲೇ ಹೋಗಿದ್ದರು ನನ್ನ ಮೇಲೆ ಪ್ರೀತಿ ಮತ್ತು ವಾತ್ಸಲ್ಯ ತೋರಿಸಿದರು. ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದು ಹೇಳುವುದು ಸುಲಭದ ವಿಷಯ. ಆದ್ರೆ ಕಠಿಣ ವಿಷಯವೆಂದರೆ ಇನ್ನೂ 9 ತಿಂಗಳು ಕಷ್ಟಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ನನ್ನ ದೈಹಿಕ ಸಾಮರ್ಥ್ಯಕ್ಕೆ ಸುಲಭವಲ್ಲ. ಆದ್ರೆ ಅಭಿಮಾನಿಗಳಿಗೆ ಉಡುಗೊರೆಯಾಗಲಿದೆ. ನಾನು ಈ ಬಾರಿ ಮೊದಲ ಪಂದ್ಯ ಆಡುವಾಗ ಎಲ್ಲರೂ ನನ್ನ ಹೆಸರನ್ನು ಕೂಗುತ್ತಿದ್ದರು. ನಿಜ ಹೇಳಬೇಕೆಂದರೆ ಆಗ ನನ್ನ ಕಣ್ಣುಗಳು ಒದ್ದೆಯಾಗಿದ್ದವು. ಹಾಗಾಗಿ ಡಗೌಟ್‌ನಲ್ಲಿ ಸ್ವಲ್ಪ ಸಮಯ ತೆಗೆದುಕೊಂಡಿದ್ದೆ. ಅಭಿಮಾನಿಗಳ ಈ ಪ್ರೀತಿಯನ್ನು ಆನಂದಿಸಬೇಕು ಎಂದು ನಾನು ಅರಿತುಕೊಂಡಿದ್ದೇನೆ. ಇಂದು ನಾನು ಏನಾಗಿದ್ದೇನೋ ಅದಕ್ಕೆಲ್ಲಾ ಮೂಲ ಕಾರಣವೇ ಅಭಿಮಾನಿಗಳ ಪ್ರೀತಿ. ಅಭಿಮಾನಿಗಳು ನನ್ನ ವೃತ್ತಿ ಜೀವನದ ಪ್ರಮುಖ ಭಾಗ ಎಂದು ಧೋನಿ ಭಾವುಕರಾಗಿದ್ದರು.
2023ರ ಐಪಿಎಲ್ ಫೈನಲ್ ಪಂದ್ಯದಲ್ಲಿ 215 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ಎಸೆತಗಳನ್ನು ಎದುರಿಸುತ್ತಿದ್ದಂತೆ ಮಳೆ ಕಾಟ ಶುರುವಾಯಿತು. ಬಳಿಕ ತಡರಾತ್ರಿ 12:10ಕ್ಕೆ ಆರಂಭಗೊಂಡಿತು. ಮಳೆ ಅಡ್ಡಿಯಾಗಿದ್ದರಿಂದ ಡಕ್ವರ್ತ್ ಲೂಯಿಸ್ (DSL) ನಿಯಮ ಅನ್ವಯಿಸಲಾಯಿತು. ಈ ನಿಯಮದ ಪ್ರಕಾರ ಸಿಎಸ್‌ಕೆ 15 ಓವರ್‌ಗಳಲ್ಲಿ 171 ರನ್ ಗಳ ಬೃಹತ್ ಮೊತ್ತದ ಟಾರ್ಗೆಟ್ ಪಡೆಯಿತು. ಆದರೆ ಸಂಘಟಿತ ಬ್ಯಾಟಿಂಗ್ ಪ್ರದರ್ಶನದಿಂದ ನಿಗದಿತ ಓವರ್‌ಗಳಲ್ಲಿ ರನ್ ಪೂರೈಸುವಲ್ಲಿ ಯಶಸ್ವಿಯಾಯಿತು. ಮಧ್ಯ ರಾತ್ರಿಯಲ್ಲಿ ಆರಂಭಗೊಂಡ ಪಂದ್ಯ ಕೊನೇ ಕ್ಷಣದ ವರೆಗೂ ರೋಚಕತೆಯಿಂದ ಕೂಡಿತ್ತು. ಇದನ್ನೂ ಓದಿ: IPL 2024: 10 ತಂಡಗಳಲ್ಲಿ ಯಾರಿಗೆಲ್ಲಾ ಗೇಟ್ ಪಾಸ್ – ರಿಲೀಸ್ ಆಟಗಾರರ ಪಟ್ಟಿ ಸಲ್ಲಿಕೆಗೆ ಇಂದು ಕೊನೆಯ ದಿನ