ಮುಂಬೈ: 2024ರ 17ನೇ ಆವೃತ್ತಿಯ ಐಪಿಎಲ್ (IPL 2024) ಹರಾಜು ಈ ಬಾರಿ ದುಬೈನಲ್ಲಿ (Dubai) ನಡೆಯುವ ಸಾಧ್ಯತೆ ಇದೆ. ಡಿಸೆಂಬರ್ 15 ಮತ್ತು 19ರ ನಡುವೆ ಆಟಗಾರರ ಹರಾಜು ನಡೆಯಲಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಬಿಸಿಸಿಐ ಮಾಡಿಕೊಳ್ಳುತ್ತಿದೆ ಎಂದು ವರದಿಯಾಗಿದೆ.
ಐಪಿಎಲ್ ಹರಾಜಿಗೆ ಸಂಬಂಧಿಸಿದಂತೆ ಬಿಸಿಸಿಐ (BCCI) ಯಾವುದೇ ಅಧಿಕೃತ ಮಾಹಿತಿಯನ್ನು ಫ್ರಾಂಚೈಸಿಗಳಿಗೆ ಕಳುಹಿಸಿಲ್ಲ. ಈ ಹರಾಜು ದುಬೈನಲ್ಲಿ ನಡೆಯಲಿದೆ ಎಂಬ ಚರ್ಚೆ ಜೋರಾಗಿದೆ. ಐಪಿಎಲ್ ಹರಾಜು ಡಿಸೆಂಬರ್ 18 ಅಥವಾ 19 ರಂದು ನಡೆಯಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: Breaking: ಕರ್ನಾಟಕ ಚಲನಚಿತ್ರ ಕಪ್ ಕ್ರಿಕೆಟ್ ಪಂದ್ಯಕ್ಕೆ ಧೋನಿ, ಸಚಿನ್ ಆಗಮನ
16ನೇ ಆವೃತ್ತಿಯ ಹರಾಜನ್ನು ಇಸ್ತಾಂಬುಲ್‍ನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು, ಆದರೆ ಅಂತಿಮವಾಗಿ ಕೊಚ್ಚಿಯಲ್ಲಿ ಹರಾಜು ನಡೆದಿತ್ತು.
ಈ ಬಾರಿ ಕೂಡ ಮಹಿಳೆಯರ ಪ್ರೀಮಿಯರ್ ಲೀಗ್ ನಡೆಯಲಿದ್ದು, ಆಟಗಾರ್ತಿಯರ ಹರಾಜು ಪ್ರಕ್ರಿಯೆ ಡಿಸೆಂಬರ್ 9 ರಂದು ನಡೆಸಲು ಯೋಜನೆ ರೂಪಿಸಲಾಗಿದೆ. ಇದರ ಹರಾಜು ಪ್ರಕ್ರಿಯೆಯ ಸ್ಥಳ ಇನ್ನೂ ನಿಗದಿಯಾಗಿಲ್ಲ. ಇದನ್ನೂ ಓದಿ: 27 ರನ್ ಅಂತರದಲ್ಲಿ 5 ವಿಕೆಟ್ ಉಡೀಸ್, ಇಂಗ್ಲೆಂಡ್‌ಗೆ ಹೀನಾಯ ಸೋಲು – ಲಂಕಾಗೆ 8 ವಿಕೆಟ್‌ಗಳ ಜಯ
Web Stories