ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Cricket Stadium) ಮಂಗಳವಾರ ನಡೆಯಲಿರುವ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮ (RCB Unbox Event) ಮತ್ತು ಮೂರು ಐಪಿಎಲ್ (IPL) ಪಂದ್ಯಗಳನ್ನು ವೀಕ್ಷಿಸುವ ಕ್ರಿಕೆಟ್ ಅಭಿಮಾನಿಗಳಿಗೆ ಬಿಎಂಟಿಸಿ (BMTC) ಸಿಹಿ ಸುದ್ದಿ ನೀಡಿದೆ.
ಮಾರ್ಚ್ 19 ಮಂಗಳವಾರ ‘ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮ’ ನಡೆಯಲಿದೆ. ಮಾರ್ಚ್ 25, 29 ಮತ್ತು ಏಪ್ರಿಲ್ 2ರಂದು ಐಪಿಎಲ್ ಕ್ರಿಕೆಟ್ ಪಂದ್ಯನಡೆಯಲಿದ್ದು ಆ ದಿನ ಸಂಜೆ ಮತ್ತು ರಾತ್ರಿ ಹೆಚ್ಚುವರಿ ಬಿಎಂಟಿಸಿ ಬಸ್ಸುಗಳನ್ನು ಇಳಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ರಾಜಕೀಯವಾಗಿ ಡಿಕೆಶಿ ನನಗೆ ವಿಷ ಹಾಕಿದ್ದಾರೆ: ಹೆಚ್ಡಿಕೆ ಕಿಡಿ
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ ಸಿಟಿಗೆ, ಎಂಟಿಸಿಟಿ–ನಾಯಂಡಹಳ್ಳಿ ಮೂಲಕ ಕೆಂಗೇರಿ ಕೆಎಚ್ಬಿ ಕ್ವಾರ್ಟರ್ಸ್ಗೆ, ಎಚ್ಎಎಲ್ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ, ಹೂಡಿ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್ಶಿಪ್ಗೆ, ನಾಗವಾರ–ಟ್ಯಾನರಿ ರಸ್ತೆ ಮೂಲಕ ಆರ್.ಕೆ. ಹೆಗಡೆ ನಗರಕ್ಕೆ, ಹೆಣ್ಣೂರು ರಸ್ತೆ ಮೂಲಕ ಬಾಗಲೂರಿಗೆ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ. ಇದನ್ನೂ ಓದಿ: ಯೋಗ ಗುರು ಬಾಬಾ ರಾಮ್ದೇವ್, ಪತಂಜಲಿ ಮುಖ್ಯಸ್ಥನಿಗೆ ಸುಪ್ರೀಂ ಸಮನ್ಸ್
ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ನೆಲಮಂಗಲ, ಯಲಹಂಕ 5ನೇ ಹಂತ, ಹೊಸಕೋಟೆಗಳಿಗೂ ಹೆಚ್ಚುವರಿ ಬಸ್ ವ್ಯವಸ್ಥೆ ಇರಲಿದೆ.