ಬೆಂಗಳೂರು: ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿದೆ. ಎದುರಾಳಿ ಸಿಎಸ್‌ಕೆ (CSK) ತಂಡಕ್ಕೆ 174 ರನ್‌ಗಳ ಗುರಿ ನೀಡಿದೆ.
Advertisement
ಟಾಸ್ ಗೆದ್ದು ಮೊದಲು ಕ್ರೀಸ್‌ಗಿಳಿದ ಆರ್‌ಸಿಬಿ ಪರ ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಆರಂಭದಲ್ಲೇ ಸ್ಫೋಟಕ ಇನ್ನಿಂಗ್ಸ್ ಕಟ್ಟಲು ಮುಂದಾದರು. ಮೊದಲ ವಿಕೆಟ್‌ಗೆ ಕೊಹ್ಲಿ (Virat Kohli) ಹಾಗೂ ಡುಪ್ಲೆಸಿಸ್ ಜೋಡಿ 27 ಎಸೆತಗಳಲ್ಲಿ 41 ರನ್‌ಗಳ ಜೊತೆಯಾಟ ನೀಡಿತ್ತು. ಆದ್ರೆ ಡುಪ್ಲೆಸಿಸ್ 23 ಎಸೆತಗಳಲ್ಲಿ 35 ರನ್ (8 ಬೌಂಡರಿ) ಬಾರಿಸಿ ಔಟಾಗುತ್ತಿದ್ದಂತೆ, ಒಂದೊಂದೇ ವಿಕೆಟ್ ಬೀಳಲಾರಂಭಿಸಿದವು. ಮುಂದಿನ 37 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಐದು ಬ್ಯಾಟರ್‌ಗಳನ್ನ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು.
Advertisement
Advertisement
ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಇನ್ನೀಂಗ್ಸ್ ಕಟ್ಟಿದ ದಿನೇಶ್ ಕಾರ್ತಿಕ್ (Dinesh Karthik) ಮತ್ತು ಅನೂಜ್ ರಾವತ್ (Anuj Rawat) ಜೋಡಿ ಉತ್ತಮ ಇನ್ನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. 50 ಎಸೆತಗಳಲ್ಲಿ ಈ ಜೋಡಿ 95 ರನ್ ಬಾರಿಸುವ ಮೂಲಕ ತಂಡದ ಮೊತ್ತ 170 ರನ್ ಗಳ ಗಡಿ ದಾಟುವಂತೆ ಮಾಡಿತು. ಇದನ್ನೂ ಓದಿ: ನನ್ನ ಜೆರ್ಸಿ ನಂ.17, ಇದು 17ನೇ ಆವೃತ್ತಿ – ಈ ಸಲ ಆರ್‌ಸಿಬಿ ಕಪ್ ಗೆದ್ದೇ ಗೆಲ್ಲುತ್ತೆ ಎಂದ ಎಬಿಡಿ
Advertisement
ಆರ್‌ಸಿಬಿ ಪರ ಅನೂಜ್ ರಾವತ್ 48 ರನ್ (25 ಎಸೆತ, 4 ಬೌಂಡರಿ, 3 ಸಿಕ್ಸರ್), ದಿನೇಶ್ ಕಾರ್ತಿಕ್ 38 ರನ್ (26 ಎಸೆತ, 3 ಬೌಂಡರಿ, 2 ಸಿಕ್ಸರ್) ಗಳಿಸಿದ್ರೆ, ಡುಪ್ಲೆಸಿಸ್ 35 ರನ್, ಕೊಹ್ಲಿ 21 ರನ್, ಕ್ಯಾಮರೂನ್ ಗ್ರೀನ್ 18 ರನ್ ಗಳಿಸಿದರು. ಹೆಚ್ಚುವರಿ 13 ರನ್ ತಂಡಕ್ಕೆ ಸೇರ್ಪಡೆಯಾಯಿತು.
ಚೆನ್ನೈ ಸೂಪರ್ ಕಿಂಗ್ಸ್ ಪರ ಮುಸ್ತಫಿಜುರ್ ರೆಹಮಾನ್ 4 ಓವರ್‌ಗಳಲ್ಲಿ 9 ರನ್ ಬಿಟ್ಟುಕೊಟ್ಟು 4 ವಿಕೆಟ್ ಕಿತ್ತರೆ, ದೀಪಕ್ ಚಹಾರ್ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು. ಇದನ್ನೂ ಓದಿ: IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಇಲ್ಲಿದೆ ಅಂದ-ಚೆಂದದ ಫೋಟೋಸ್!