ಚೆನೈ: 2024ರ ಐಪಿಎಲ್ ಆವೃತ್ತಿಯು ಮುಕ್ತಾಯ ಹಂತಕ್ಕೆ ಬಂದಿದೆ. ಇಲ್ಲಿನ ಎಂ.ಎ ಚಿದಂಬರಂ (ಚೆಪಾಕ್) ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್ (Kolkata Knight Riders) ವಿರುದ್ಧ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
2016ರಲ್ಲಿ ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಸನ್ ರೈಸರ್ಸ್ ಹೈದರಾಬಾದ್ (SRH) ತಂಡ 3ನೇ ಬಾರಿಗೆ ಐಪಿಎಲ್ ಫೈನಲ್ (IPL 2024 Final) ಪ್ರವೇಶಿಸಿದೆ. ಇನ್ನೂ 2012 ಮತ್ತು 2014ರ ಐಪಿಎಲ್ ಆವೃತ್ತಿಯಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 4ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಇಂದಿನ ಗೆಲುವು ಯಾರ ಕೈ ಹಿಡಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.
HERE. WE. GO! ????
For one final time this season, it’s time for the ultimate battle ????
Who’s winning the Grand #Final folks ????
Follow the Match ▶️ https://t.co/lCK6AJCdH9#TATAIPL | #KKRvSRH | #TheFinalCall pic.twitter.com/WHj0e6If5d
— IndianPremierLeague (@IPL) May 26, 2024
ಉಭಯ ತಂಡಗಳ ಪ್ಲೇಯಿಂಗ್ XI:
ಕೋಲ್ಕತಾ ನೈಟ್ ರೈಡರ್ಸ್:
ಸುನೀಲ್ ನರೇನ್, ರೆಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣ್‌ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
ಸನ್‌ರೈಸರ್ಸ್ ಹೈದರಾಬಾದ್:
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಮ್. ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕಟ್, ಟಿ ನಟರಾಜನ್.