ಮುಂಬೈ: ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 55ನೇ ಐಪಿಎಲ್ (IPL 2024) ಪಂದ್ಯದಲ್ಲಿ ಮುಂಬೈ (Mumbai Indians) ತಂಡ ಸನ್ ರೈಸರ್ಸ್ ಹೈದರಾಬಾದ್ (SunRisers Hyderabad) ತಂಡದ ವಿರುದ್ದ 7 ವಿಕೆಟ್‌ಗಳ ಜಯ ಗಳಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ನಿಗದಿತ ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಎದುರಾಳಿ ತಂಡಕ್ಕೆ 174 ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ತಂಡ 17.2 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿ ಭರ್ಜರಿ ಜಯ ಗಳಿಸಿತು.
ಸನ್ ರೈಸರ್ಸ್ ಹೈದರಾಬಾದ್ ನೀಡಿದ ಗುರಿ ಬೆನ್ನಟ್ಟಿದ ಮುಂಬೈ ತಂಡದ ಮೊತ್ತ ಕೇವಲ 32 ಇರುವಾಗಲೇ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಎದುರಿಸಿತು. ಇಶಾನ್ ಕಿಶನ್ 7 ಎಸೆತಗಳಲ್ಲಿ 9 ರನ್‌ಗಳಿಸಿ ಔಟಾದರು. ರೋಹಿತ್ ಶರ್ಮಾ 5 ಎಸೆತಗಳಲ್ಲಿ 4 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ನಮನ್ ಧೀರ್ 9 ಎಸೆತಗಳಲ್ಲಿ ತಂಡಕ್ಕೆ ಕೊಡುಗೆ ನೀಡದೆ ಮರಳಿದರು. ಬಳಿಕ ಸೂರ್ಯ ಕುಮಾರ್ 51 ಎಸೆತಗಳಲ್ಲಿ 6 ಸಿಕ್ಸರ್ 12 ಬೌಂಡರಿಗಳ ನೆರವಿನಿಂದ 102 ರನ್ ಹಾಗೂ ತಿಲಕ್ ವರ್ಮಾ 32 ಎಸೆತಗಳಲ್ಲಿ 37 ರನ್ ಗಳಿಸಿ ತಂಡವನ್ನು ಗೆಲುವಿನ ದಡ ತಲುಪಿಸಿದರು.
ಸನ್ ರೈಸರ್ಸ್ ಪರ ಪ್ಯಾಟ್ ಕಮಿನ್ಸ್, ಮಾರ್ಕೊ ಜಾನ್ಸನ್, ಭುವನೇಶ್ವರ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದರು.
ಸನ್ ರೈಸರ್ಸ್ ಪರ ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 1 ಸಿಕ್ಸರ್ 7 ಬೌಂಡರಿ ನೆರವಿನಿಂದ 48 ರನ್ ಗಳಿಸಿ ಅರ್ಧಶತಕ ವಂಚಿತರಾದರು. ಪ್ಯಾಟ್ ಕಮಿನ್ಸ್ 17 ಎಸೆತಗಳಲ್ಲಿ 35 ರನ್ ಗಳಿಸಿ ಔಟಾಗದೆ ಉಳಿದರು. ನಿತೀಶ್ ಕುಮಾರ್ ರೆಡ್ಡಿ 15 ಎಸೆತಗಳಲ್ಲಿ 20 ರನ್ ಗಳಿಸಿ ಔಟಾದರು. ಮಾರ್ಕೊ ಜಾನ್ಸನ್ 12 ಎಸೆತಗಳಲ್ಲಿ 17 ರನ್ ಕಲೆ ಹಾಕಿ ಪೆವಿಲಿಯನ್‌ಗೆ ಮರಳಿದರು.
ಮುಂಬೈ ಪರ ಹಾರ್ದಿಕ್ ಪಾಂಡ್ಯ ಮತ್ತು ಪಿಯೂಷ್ ಚಾವ್ಲಾ ತಲಾ ಮೂರು ವಿಕೆಟ್ ಪಡೆದರು. ಅನ್ಶುಲ್ ಕಾಂಬೋಜ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ ಒಂದು ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಒಂದೇ ಓವರ್‌ನಲ್ಲಿ ಶಹಬಾಜ್ ಅಹ್ಮದ್ ಮತ್ತು ಮಾರ್ಕೊ ಜಾನ್ಸನ್ ಅವರ ವಿಕೆಟ್ ಪಡೆದು ಮಿಂಚಿದರು.