ಚೆನ್ನೈ: ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದಿಂದ ಲೆಜೆಂಡ್ ಎಂ.ಎಸ್ ಧೋನಿ (MS Dhoni) ಕೆಳಗಿಳಿದಿದ್ದಾರೆ. ಅವರ ಬದಲಿಗೆ ನೂತನ ನಾಯಕನಾಗಿ ಬಲಗೈ ಬ್ಯಾಟರ್ ಋತುರಾಜ್ ಗಾಯಕ್ವಾಡ್ (Ruturaj Gaikwad) ನೇಮಕಗೊಂಡಿದ್ದಾರೆ.
2024ರ ಐಪಿಎಲ್ ಟೂರ್ನಿ ಆರಂಭಕ್ಕೆ ಒಂದು ದಿನ ಮುಂಚಿತವಾಗಿಯೇ ಧೋನಿ ನಾಯಕ ಸ್ಥಾನದಿಂದ ಕೆಳಗಿಳಿದಿದ್ದು, 2024ರ ಟೂರ್ನಿಯಲ್ಲಿ ಋತುರಾಜ್ ಹಾಲಿ ಚಾಂಪಿಯನ್ಸ್ ಸಿಎಸ್‌ಕೆ (CSK) ತಂಡವನ್ನು ಮುನ್ನಡೆಸಲಿದ್ದಾರೆ. ಇದನ್ನೂ ಓದಿ: ಐಪಿಎಲ್ ಹಬ್ಬದಲ್ಲಿ ಏನೆಲ್ಲಾ ವಿಶೇಷ – ಚೊಚ್ಚಲ ಟ್ರೋಫಿ ಗೆಲ್ಲುವ ವಿಶ್ವಾಸದಲ್ಲಿ ಆರ್‌ಸಿಬಿ ಕಲಿಗಳು
Advertisement
Advertisement
2019ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಋತುರಾಜ್ ಗಾಯಕ್ವಾಡ್ 52 ಪಂದ್ಯಗಳು 51 ಇನ್ನಿಂಗ್ಸ್‌ಗಳಲ್ಲಿ 1,797 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ, 14 ಅರ್ಧಶತಕ, 159 ಬೌಂಡರಿ, 73 ಸಿಕ್ಸರ್‌ಗಳನ್ನ ಒಳಗೊಂಡಿದೆ. ಇದನ್ನೂ ಓದಿ: ಪಾಕಿಸ್ತಾನ ಸೂಪರ್ ಲೀಗ್‌ಗಿಂತಲೂ ನಮ್ಮ ಹೆಣ್ಮಕ್ಕಳ ಟೂರ್ನಿಯೇ ಹೆಚ್ಚು ಶ್ರೀಮಂತ
Advertisement
Advertisement
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಉಸಿರು ಯಾರು ಎಂದು ಕೇಳಿದರೆ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ (Cricket Fans) ನಿಸ್ಸಂಶಯವಾಗಿ ಧೋನಿ ಹೆಸರನ್ನೇ ಹೇಳುತ್ತಾರೆ. 42 ವರ್ಷದ ಮಹಿ, 2008ರಲ್ಲಿ ಐಪಿಎಲ್ ಆರಂಭವಾದಾಗಿನಿಂದ ಚೆನ್ನೈ ತಂಡದ ನಾಯಕನಾಗಿದ್ದಾರೆ. 2013ರಿಂದ 2 ವರ್ಷಗಳ ತಂಡವನ್ನು ಅಮಾನತುಗೊಳಿಸಿದ್ದು, ಹೊರತುಪಡಿಸಿ ಉಳಿದ ಎಲ್ಲ ಆವೃತ್ತಿಗಳಲ್ಲೂ ಚೆನ್ನೈ ತಂಡದ ಪರವಾಗಿಯೇ ಆಡಿದ್ದಾರೆ.
2022ರ ಆವೃತ್ತಿಯಲ್ಲಿ ಧೋನಿ ತಮ್ಮ ನಾಯತ್ವ ತೊರೆದಿದ್ದರು. ಈ ವೇಳೆ ರವೀಂದ್ರ ಜಡೇಜಾ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಆದ್ರೆ ಸತತ ಸೋಲಿನಿಂದ ಬೇಸರಗೊಂಡ ರವೀಂದ್ರ ಜಡೇಜಾ, ಧೋನಿ ಅವರಿಗೆ ನಾಯಕ ಸ್ಥಾನವನ್ನು ಮರಳಿಸಿದ್ದರು. 2023ರ ಆವೃತ್ತಿಯಲ್ಲಿ ಮಹಿ ನಾಯಕತ್ವದಲ್ಲಿಯೇ ಚೆನ್ನೈ ತಂಡ 5ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದನ್ನೂ ಓದಿ: RCB Unbox: ‘ಬೆಂಗಳೂರ್’ ಅಲ್ಲ ಇನ್ಮುಂದೆ ಹೇಳಿ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’