ಕೋಲ್ಕತ್ತಾ: ಫಾಫ್ ಡು ಪ್ಲೆಸಿಸ್ (Faf du Plessis) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಏ.21) ಕೋಲ್ಕತ್ತಾ ನೈಟ್‌ರೈಡರ್ಸ್ ವಿರುದ್ಧ ಸೆಣಸಲಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ (Eden Gardens) ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಮಧ್ಯಾಹ್ನ 3:30 ಗಂಟೆಗೆ ಆರಂಭವಾಗಲಿದೆ. ಆರ್‌ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ನೀಲಿ ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ (Green Jersey) ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ರೋಹಿತ್ ವಿರೋಧ; ಬಿಸಿಸಿಐ ಹೇಳಿದ್ದೇನು? – ಏನಿದು ಇಂಪ್ಯಾಕ್ಟ್ ಪ್ಲೇಯರ್ ರೂಲ್ಸ್?
It’s rewind time, let’s relive some of our finest moments in Green! ????#PlayBold #ನಮ್ಮRCB #IPL2024 #KKRvRCB pic.twitter.com/gAVAgHdNzE
— Royal Challengers Bengaluru (@RCBTweets) April 21, 2024
2011ರ ಐಪಿಎಲ್ನಿಂದಲೂ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ (Green Jersey) ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್‌ಸಿಬಿ ಪ್ರತಿ ವರ್ಷ ಐಪಿಎಲ್‌ನಲ್ಲಿ (IPL 2023) ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ನಮ್ಮ ಸುತ್ತಲಿನ ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿದೆ. ಇದನ್ನೂ ಓದಿ: ಟಿ20 ವಿಶ್ವಕಪ್: ಐರ್ಲೆಂಡ್, ಸ್ಕಾಟ್ಲೆಂಡ್ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ
ಗೆಲುವಿಗಿಂತ ಸೋಲೇ ಹೆಚ್ಚು:
2011ರಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. 2024ರ ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: IPL 2024: ರನ್ ಹೊಳೆ, ದಾಖಲೆಗಳ ಸುರಿಮಳೆ – ಐಪಿಎಲ್‌ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ಸನ್ ರೈಸರ್ಸ್
ಪುಟಿದೇಳುತ್ತಾ ಆರ್‌ಸಿಬಿ?
ಕಳೆದ 7 ಪಂದ್ಯಗಳಲ್ಲಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ ಕೊನೇ ಸ್ಥಾನಕ್ಕೆ ಕುಸಿದಿದೆ. ಇದರಿಂದ ಆರ್‌ಸಿಬಿ ಪ್ಲೇ ಆಫ್ ಹಾದಿ ಕಠಿಣವಾಗಿದೆ. ಇನ್ನುಳಿದ ಪಂದ್ಯಗಳಲ್ಲಿ ಆರ್‌ಸಿಬಿ ಉತ್ತಮ ರನ್‌ರೇಟ್‌ನೊಂದಿಗೆ ಗೆಲುವು ಸಾಧಿಸಿದರೆ, ಪ್ಲೇ ಆಫ್ ಹಾದಿ ತಲುಪುವ ಸಾಧ್ಯತೆಯಿದೆ. ಹಾಗಾಗಿ ಸತತ ಸೋಲಿನಿಂದ ಕಂಗೆಟ್ಟಿರುವ ಆರ್‌ಸಿಬಿ ಇಂದಾದರೂ ಪುಟಿದೇಳುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.