ಅಹಮದಾಬಾದ್: ಚೊಚ್ಚಲ ಐಪಿಎಲ್ ಆವೃತ್ತಿಯ ಚಾಂಪಿಯನ್ ರಾಜಸ್ಥಾನ್ ರಾಯಲ್ಸ್ ವಿರುದ್ಧ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs RR) ತಂಡ ಇಂದು (ಬುಧವಾರ) ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯುವ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.
ಉಭಯ ತಂಡಗಳು ಇದುವರೆಗಿನ ಐಪಿಎಲ್ (IPL 2024) ಆವೃತ್ತಿಯಲ್ಲಿ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಆರ್ಸಿಬಿ 15, ರಾಜಸ್ಥಾನ್ 13 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 3 ಪಂದ್ಯಗಳು ಫಲಿತಾಂಶ ಇಲ್ಲದೇ ರದ್ದಾಗಿದೆ. ರಾಜಸ್ಥಾನ್ ರಾಯಲ್ಸ್ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿ ಗೆದ್ದು ಮಾಜಿ ಚಾಂಪಿಯನ್ ಎನ್ನಿಸಿಕೊಂಡಿದ್ದರೆ ಮೂರು ಬಾರಿ ಫೈನಲ್ ಪ್ರವೇಶಿಸಿದ್ದ ಆರ್‌ಸಿಬಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ಇದನ್ನೂ ಓದಿ: ಫ್ಲೆಮಿಂಗ್ ಟೀಂ ಇಂಡಿಯಾ ಕೋಚ್ ಆಗ್ತಾರಾ? – ಧೋನಿ ಸಹಾಯ ಕೇಳಿದ ಬಿಸಿಸಿಐ
Advertisement
Advertisement
ಸೇಡು ತೀರಿಸಿಕೊಳ್ಳಲಿದೆಯೇ ಆರ್‌ಸಿಬಿ?
ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2022ರಲ್ಲಿ ನಡೆದಿದ್ದ ಐಪಿಎಲ್ ಟೂರ್ನಿಯ ಕ್ವಾಲಿಫೈಯರ್-2 ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲೇ ನಡೆದಿತ್ತು. ಪಂದ್ಯದಲ್ಲಿ ರಾಜಸ್ಥಾನ್ 7 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತ್ತು. ಇದೀಗ ಅಂದಿನ ಈ ಸೋಲಿಗೆ ಆರ್ಸಿಬಿ ಈ ಬಾರಿಯ ಎಲಿಮಿನೇಟರ್ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
Advertisement
Advertisement
ಐಪಿಎಲ್‌ನಲ್ಲಿ ಆರ್‌ಸಿಬಿ ಸಾಧನೆ:
16 ಆವೃತ್ತಿ ಕಳೆದರೂ ಈವರೆಗೆ ಒಂದು ಬಾರಿಯೂ ಟ್ರೋಫಿ ಗೆಲ್ಲದ ಆರ್‌ಸಿಬಿ 9 ಬಾರಿ ಪ್ಲೇ ಆಫ್ ಪ್ರವೇಶಿಸಿದೆ. 2009, 2011 ಹಾಗೂ 2016ರಲ್ಲಿ ಮೂರು ಬಾರಿ ಫೈನಲ್ ಪ್ರವೇಶಿಸಿದೆ. ಆದ್ರೆ ಈ ವರೆಗೆ ಒಮ್ಮೆಯೂ ಟ್ರೋಫಿ ಗೆದ್ದಿಲ್ಲ.
ರಾಜಸ್ಥಾನ್ ರಾಯಲ್ಸ್ ಸಾಧನೆ:
2008ರ ಐಪಿಎಲ್ ಉದ್ಘಾಟನಾ ಆವೃತ್ತಿಯಲ್ಲೇ ಚಾಂಪಿಯನ್ ಆಗಿ ಹೊರಹೊಮ್ಮಿದ ತಂಡ ರಾಜಸ್ಥಾನ್ ರಾಯಲ್ಸ್. ಇದಾದ ಬಳಿಕ 2022ರ ಆವೃತ್ತಿಯಲ್ಲಿ 2ನೇ ಬಾರಿಗೆ ಫೈನಲ್ ಪ್ರವೇಶಿಸಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. 2024ರ ಆವೃತ್ತಿಯಲ್ಲಿ ಲೀಗ್‌ನಲ್ಲಿ 3ನೇ ಸ್ಥಾನ ಪಡೆಯುವ ಮೂಲಕ 6ನೇ ಬಾರಿ ಫೈನಲ್ ಪ್ರವೇಶಿಸಿದೆ. ಇದನ್ನೂ ಓದಿ: 4ನೇ ಬಾರಿಗೆ ಫೈನಲ್‌ಗೆ – ಕೋಲ್ಕತ್ತಾ ಅಬ್ಬರಕ್ಕೆ ಮುಳುಗಿದ ಸನ್ ರೈಸರ್ಸ್