ಮುಂಬೈ: ಡಿಸೆಂಬರ್‌ನಲ್ಲಿ ನಡೆಯಲಿರುವ ಐಪಿಎಲ್ ಮಿನಿ ಹರಾಜಿಗೂ (IPL 2024 Auction) ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬರೋಬ್ಬರಿ 11 ಆಟಗಾರರನ್ನ ಬಿಡುಗಡೆ ಮಾಡಿದ್ದು, 16 ಆಟಗಾರರನ್ನ ಉಳಿಸಿಕೊಂಡಿದೆ.
ವಿಶೇಷವೆಂದರೆ ಕಳೆದ ಡಿಸೆಂಬರ್ 30 ರಂದು ಕಾರು ಅಪಘಾತದಲ್ಲಿ ಗಾಯಗೊಂಡು 2022ರ ಐಪಿಎಲ್‌ನಿಂದ (IPL 2022) ಹೊರಗುಳಿದಿದ್ದ ರಿಷಬ್ ಪಂತ್ 2024ರ ಐಪಿಎಲ್‌ನಲ್ಲಿ (IPL 2024) ಮತ್ತೆ ಪ್ಯಾಡ್ ಕಟ್ಟಲಿದ್ದಾರೆ. ರಿಷಬ್ ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಕ್ಯಾಂಪನ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದು, 17ನೇ ಆವೃತ್ತಿಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.
Advertisement
Advertisement
ಇನ್ನೂ ಕನ್ನಡಿಗ ಮನಿಷ್ ಪಾಂಡೆ ಅವರನ್ನು ತಂಡದಿಂದ ಬಿಡುಗಡೆ ಮಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ವಿವಾದಕ್ಕೆ ಗುರಿಯಾಗಿದ್ದ ಮಿಚೆಲ್ ಮಾರ್ಷ್ ಅವರನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇದನ್ನೂ ಓದಿ: IPL 2024 Retention: ಮುಂಬೈ ಫ್ಯಾನ್ಸ್‌ಗೆ ಬಿಗ್ ಶಾಕ್ – ಟೈಟಾನ್ಸ್‌ನಲ್ಲೇ ಉಳಿದ ಪಾಂಡ್ಯ
Advertisement
2023ರ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 14ರಲ್ಲಿ ಕೇವಲ 5 ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿತ್ತು. -0.808 ರನ್‌ರೇಟ್ ಹಾಗೂ 10 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿ ಉಳಿದುಕೊಂಡಿತ್ತು.
Advertisement
ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡ ಆಟಗಾರರು:
ರಿಷಬ್ ಪಂತ್, ಡೇವಿಡ್ ವಾರ್ನರ್, ಪೃಥ್ವಿ ಶಾ, ಅಕ್ಷರ್ ಪಟೇಲ್, ಮಿಚೆಲ್ ಮಾರ್ಷ್, ಅಭಿಷೇಕ್ ಪೊರೆಲ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಯಶ್ ಧುಲ್, ಪ್ರವೀಣ್ ದುಬೆ, ವಿಕ್ಕಿ, ಅನ್ರಿಚ್ ನಾರ್ಟ್ಜೆ, ಕುಲ್ದೀಪ್ ಯಾದವ್, ಲುಂಗಿ ಎನ್‌ಗಿಡಿ, ಖಲೀಲ್ ಅಹಮದ್, ಇಶಾತ್ ಶರ್ಮಾ, ಮುಕೇಶ್ ಕುಮಾರ್. ಇದನ್ನೂ ಓದಿ: IPL 2024 Auction: ಹ್ಯಾಜಲ್‌ವುಡ್, ಹಸರಂಗ ಸೇರಿ 11 ಆಟಗಾರರಿಗೆ RCB ಕೊಕ್
ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಿದ ಆಟಗಾರರು:
ರಿಲೀ ರೊಸ್ಸೌ, ಚೇತನ್ ಸಕರಿಯಾ, ರೋವ್ಮನ್ ಪೊವೆಲ್, ಮನೀಷ್ ಪಾಂಡೆ, ಫಿಲ್ ಸಾಲ್ಟ್, ಮುಸ್ತಾಫಿಜುರ್ ರೆಹಮಾನ್, ಕಮಲೇಶ್ ನಾಗರಕೋಟಿ, ರಿಪಾಲ್ ಪಟೇಲ್, ಸರ್ಫರಾಜ್ ಖಾನ್, ಅಮನ್ ಖಾನ್, ಪ್ರಿಯಮ್ ಗಾರ್ಗ್.
ಪಂತ್‌ಗೆ ಏನಾಗಿತ್ತು?
2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಹೊಸ ವರ್ಷಕ್ಕೆ ತನ್ನ ತಾಯಿಗೆ ಸರ್ಪ್ರೈಸ್ ಕೊಡಬೇಕು, ತಾಯಿಯೊಂದಿಗೆ ಹೊಸ ವರ್ಷದ ಸಂಭ್ರಮ ಕಳೆಯಬೇಕು ಎಂದು ಮರ್ಸಿಡೀಸ್ ಎಎಂಜಿ ಜಿಎಲ್‌ಇ-43 ಕೂಪೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು. ಇದರಿಂದ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.