ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಹರಾಜಿಗೆ ಕೆಲವೇ ದಿನಗಳು ಬಾಕಿಯಿದ್ದು, ನವೆಂಬರ್ 26ರಂದು 10 ಫ್ರಾಂಚೈಸಿಗಳು ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಭಾನುವಾರ ಅಧಿಕೃತಗೊಳಿಸಿವೆ. ಈ ನಡುವೆ ಮುಂಬೈ ಇಂಡಿಯನ್ಸ್ ಕೂಡ ತನ್ನ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
???????????? ???????????????????????????????? ????????????????????!
Read more: https://t.co/GooXOrFmjG#OneFamily #MumbaiIndians #MumbaiMeriJaan pic.twitter.com/fgvGY1rFOO
— Mumbai Indians (@mipaltan) November 26, 2023
Advertisement
11 ಆಟಗಾರರಿಗೆ ಗೇಟ್ ಪಾಸ್ ಕೊಟ್ಟಿರುವ ಮುಂಬೈ ಇಂಡಿಯನ್ಸ್, 17 ಆಟಗಾರರನ್ನು ತನ್ನಲ್ಲೇ ಉಳಿಸಿಕೊಂಡಿದೆ. ರೋಹಿತ್ ಶರ್ಮಾ ನಾಯಕನಾಗಿ ಮುಂದುವರಿದಿದ್ದಾರೆ. ಇದನ್ನೂ ಓದಿ: IPL 2024 Retention: ಪಂತ್ ಮತ್ತೆ ಅಖಾಡಕ್ಕೆ – ಕನ್ನಡಿಗನನ್ನು ಕೈಬಿಟ್ಟು ಮಿಚೆಲ್ ಮಾರ್ಷ್ ಉಳಿಸಿಕೊಂಡ ಕ್ಯಾಪಿಟಲ್ಸ್
Advertisement
Advertisement
ಮುಂಬೈ ಇಂಡಿಯನ್ಸ್ 2013, 2015, 2017, 2019 ಹಾಗೂ 2020ರ ಆವೃತ್ತಿಯಲ್ಲಿ 5 ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2022ರ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನದಿಂದಾಗಿ ಲೀಗ್ ಸುತ್ತಿನಲ್ಲೇ ಹೊರಬಿದ್ದಿದ್ದ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಪ್ರವೇಶಿಸುವ ಅವಕಾಶವನ್ನೇ ಕಳೆದುಕೊಂಡಿತ್ತು. 2023ರ ಐಪಿಎಲ್‌ನಲ್ಲಿ 14 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿತ್ತು. ಆದ್ರೆ ಪ್ಲೇ ಆಫ್‌ನ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತು ಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿತ್ತು.
Advertisement
ಮುಂಬೈ ತಂಡದ ರಿಟೇನ್ ಪ್ಲೇಯರ್ಸ್: ರೋಹಿತ್ ಶರ್ಮಾ (ನಾಯಕ), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಕ್ಯಾಮರೂನ್ ಗ್ರೀನ್, ಶಾಮ್ಸ್ ಮಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾಲ್, ಜೇಸನ್ ಬೆಹ್ರೆನ್ಡಾರ್ಫ್, ರೊಮಾರಿಯೋ ಶೆಫರ್ಡ್ (ಲಕ್ನೋ ತಂಡದಿಂದ).
ಬಿಡುಗಡೆ ಮಾಡಿದ ಆಟಗಾರರು: ಮೊಹಮ್ಮದ್ ಅರ್ಷದ್ ಖಾನ್, ರಮಣದೀಪ್ ಸಿಂಗ್, ಹೃತಿಕ್ ಶೋಕೀನ್, ರಾಘವ್ ಗೋಯಲ್, ಜೋಫ್ರಾ ಆರ್ಚರ್, ಟ್ರಿಸ್ಟಾನ್ ಸ್ಟಬ್ಸ್, ಡುವಾನ್ ಜಾನ್ಸೆನ್, ಝೈ ರಿಚರ್ಡ್ಸನ್, ರಿಲೆ ಮೆರೆಡಿತ್, ಕ್ರಿಸ್ ಜೋರ್ಡಾನ್, ಸಂದೀಪ್ ವಾರಿಯರ್. ಇದನ್ನೂ ಓದಿ: IPL 2024 Retention: ಮುಂಬೈ ಫ್ಯಾನ್ಸ್‌ಗೆ ಬಿಗ್ ಶಾಕ್ – ಟೈಟಾನ್ಸ್‌ನಲ್ಲೇ ಉಳಿದ ಪಾಂಡ್ಯ