– ಲೋಕಸಭಾ ಚುನಾವಣೆ ನಡುವೆಯೂ ಭಾರತದಲ್ಲೇ ನಡೆಯುತ್ತೆ – ಐಪಿಎಲ್ ಅಧ್ಯಕ್ಷ ಸುಳಿವು
ಮುಂಬೈ: ಕ್ರಿಕೆಟ್ ಅಭಿಮಾನಿಗಳು ಕುತೂಹಲದಿಂದ ಕಾದಿದ್ದ, ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ.
Advertisement
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ (Arun Dhumal), ಮಾ.22 ರಂದು ಐಪಿಎಲ್‌ಗೆ ಚಾಲನೆ ನೀಡಲು ಎದುರು ನೋಡುತ್ತಿದ್ದೇವೆ. 15 ದಿನಗಳ ವೇಳಾಪಟ್ಟಿಯನ್ನು ಮೊದಲು ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿ ಮನೆಗೆ ಜ್ಯೂನಿಯರ್ ವಿರಾಟ್ ಆಗಮನ
Advertisement
Advertisement
ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಐಪಿಎಲ್ 17ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಗೊಂಡಿಲ್ಲ.
Advertisement
ಲೋಕಸಭೆ ಚುನಾವಣೆಯ ದಿನಾಂಕವನ್ನು ಮಾರ್ಚ್ ಆರಂಭದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಚುನಾವಣೆಯ ಕಾರಣದಿಂದಾಗಿ ಐಪಿಎಲ್ ಪಂದ್ಯಗಳನ್ನು ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿರುವ ಧುಮಾರ್, ಇದು ವಿದೇಶದಲ್ಲಿ ನಡೆಯುವುದಿಲ್ಲ. ಅದಕ್ಕಾಗಿಯೇ ನಾವು ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗಾಗಿ ಕಾಯುತ್ತಿದ್ದೇವೆ. ಅದಕ್ಕೆ ಅನುಗುಣವಾಗಿ ನಾವು ಸ್ಥಳ ನಿಯೋಜನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಿಂಗ್ ಕೊಹ್ಲಿಯ ಅಪರೂಪದ ದಾಖಲೆ ಮುರಿಯುವ ಸನಿಹದಲ್ಲಿ ಯಶಸ್ವಿ!
ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಲೀಗ್ ಅನ್ನು ನಡೆಸುತ್ತಿರುವುದು ಇದೇ ಮೊದಲಲ್ಲ. 2009 ರಲ್ಲಿ ಐಪಿಎಲ್ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. 2014 ರಲ್ಲಿ ಮೊದಲ 20 ಪಂದ್ಯಗಳನ್ನು ಯುಎಇಯಲ್ಲಿ ಮತ್ತು ಉಳಿದ ಪಂದ್ಯಗಳು ಭಾರತದಲ್ಲಿ ನಡೆದಿತ್ತು. ಆದರೆ 2019 ರಲ್ಲಿ ಲೋಕಸಭಾ ಚುನಾವಣೆ ಇದ್ದರೂ ಭಾರತದಲ್ಲೇ ಐಪಿಎಲ್ ನಡೆದಿತ್ತು.
ಟಿ20 ವಿಶ್ವಕಪ್ ಜೂನ್ 1 ರಿಂದ ಪ್ರಾರಂಭವಾಗಲಿದ್ದು, ಮೇ ಅಂತ್ಯದ ವೇಳೆಗೆ ಐಪಿಎಲ್ ಕೊನೆಗೊಳ್ಳುವ ನಿರೀಕ್ಷೆಯಿದೆ. ಸಂಪ್ರದಾಯದಂತೆ ಲೀಗ್‌ನ ಮೊದಲ ಪಂದ್ಯ ಹಿಂದಿನ ವರ್ಷದ ಫೈನಲ್‌ನಲ್ಲಿ ಸೆಣಸಾಡಿದ ತಂಡಗಳ ನಡುವೆ ನಡೆಯಲಿದೆ. ಕಳೆದ ವರ್ಷ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ಸೆಣಸಿದ್ದವು. ಧೋನಿ ತಂಡ ಗೆದ್ದು ಬೀಗಿತ್ತು.