ಮುಂಬೈ: ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಮತ್ತೆ ತವರು ಮುಂಬೈ ಇಂಡಿಯನ್ಸ್ (Mumbai Indians) ಸೇರ್ಪಡೆಗೊಂಡ ಬಳಿಕ ಗುಜರಾತ್ ಟೈಟಾನ್ಸ್ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ (Shubman Gill) ಹೆಗಲಿಗೆ ನಾಯಕತ್ವದ ಹೊಣೆ ನೀಡಲಾಗಿದೆ.
I am proud to assume the Captaincy of Gujarat Titans and I cannot thank the franchise enough for their trust in me to lead such a fine team. Let’s make it memorable!
To all the fans… #AavaDe! ???? pic.twitter.com/LNELWqwURD
— Shubman Gill (@ShubmanGill) November 27, 2023
Advertisement
ಈ ಬಗ್ಗೆ ಗುಜರಾತ್ ಟೈಟಾನ್ಸ್ (GujaratTaitans) ತನ್ನ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಶುಭಮನ್ ಗಿಲ್ ಸಹ ನಾಯಕತ್ವದ ಹೊಣೆ ನೀಡಿದ ಫ್ರಾಂಚೈಸಿಗೆ ಧನ್ಯವಾದ ತಿಳಿಸಿದ್ದಾರೆ. ಗುಜರಾತ್ ಟೈಟಾನ್ಸ್‌ನ ನಾಯಕತ್ವ ವಹಿಸಿಕೊಳ್ಳಲು ನಾನು ಹೆಮ್ಮೆಪಡುತ್ತೇನೆ. ಇಂತಹ ಉತ್ತಮ ತಂಡವನ್ನು ಮುನ್ನಡೆಸಲು ಫ್ರಾಂಚೈಸಿ ನನ್ನ ಮೇಲೆ ನಂಬಿಕೆಯಿಟ್ಟು ನಾಯಕತ್ವದ ಹೊಣೆ ನೀಡಿದೆ. ಇದನ್ನು ಕೇವಲ ಧನ್ಯವಾದ ಹೇಳಿ ಮುಗಿಸಲಾರೆ. ಈ ಟೂರ್ನಿಯನ್ನು ಸ್ಮರಣೀಯವಾಗಿಸೋಣ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: IPL 2024 Retention: ಭಾರೀ ಹೈಡ್ರಾಮಾ ಬಳಿಕ ಪಾಂಡ್ಯ ಮುಂಬೈಗೆ
Advertisement
Advertisement
ಶುಭಮನ್ ಗಿಲ್ ಗುಜರಾತ್ ಟೈಟಾನ್ಸ್ ಪರ ಆಡಿರುವ 2 ಆವೃತ್ತಿಯ 33 ಇನ್ನಿಂಗ್ಸ್‌ಗಳಲ್ಲಿ, 47.34 ಸರಾಸರಿಯಲ್ಲಿ 1,373 ರನ್ ಬಾರಿಸಿದ್ದಾರೆ. ಅದರಲ್ಲೂ 2023ರ 16ನೇ ಆವೃತ್ತಿಯ ಐಪಿಎಲ್‌ನಲ್ಲಿ 17 ಪಂದ್ಯಗಳಿಂದ 59.33 ಸರಾಸರಿಯಲ್ಲಿ ಒಟ್ಟು 890 ರನ್ ಬಾರಿಸಿದ್ದರು. ಇದರಲ್ಲಿ 3 ಶತಕ, 4 ಅರ್ಧ ಶತಕಗಳೂ ಸೇರಿತ್ತು. ಈ ಆವೃತ್ತಿಯಲ್ಲಿ ಒಟ್ಟು 890 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಜೊತೆಗೆ ಅತಿಹೆಚ್ಚು ರನ್ ಗಳಿಸಿದ್ದಕ್ಕಾಗಿ 10 ಲಕ್ಷ ರೂ. ಬಹುಮಾನವನ್ನೂ ಗಿಟ್ಟಿಸಿಕೊಂಡರು. ಅದರಲ್ಲೂ ಸೆಮಿಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅಬ್ಬರಿಸಿದ್ದ ಗಿಲ್ 60 ಎಸೆತಗಳಲ್ಲೇ 129 ರನ್ ಬಾರಿಸಿದ್ದರು. ಇದರಿಂದ ತಂಡವು ಅಧಿಕ ರನ್‌ಗಳ ಜಯ ಸಾಧಿಸಿತ್ತು.
Advertisement
2 ಆವೃತ್ತಿಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಪಾಂಡ್ಯ ಪ್ರವೇಶಿಸಿದ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿ ಗೆದ್ದು ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್ ಅಪ್ ಸ್ಥಾನ ತಂದುಕೊಟ್ಟಿದ್ದರು. ಇದನ್ನೂ ಓದಿ: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಾಕ್‌ನಲ್ಲಿ ನಡೆಯುವುದು ಅನುಮಾನ