ಚೆನ್ನೈ: ಕೋಲ್ಕತ್ತಾ ನೈಟ್‌ರೈಡರ್ಸ್ (Kolkata Knight Riders) ತಂಡದ ಸ್ಪಿನ್ ಮಾಂತ್ರಿಕ ಸುನಿಲ್ ನರೇನ್ (Sunil Naraine) ಅವರು ಪ್ರೀತಿ ಹಾಗೂ ಬೆಂಬಲ ನೀಡಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕೆಕೆಆರ್ ಹಾಗೂ ಶಾರುಖ್ ಖಾನ್ ಸರ್ ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದೇ ವೇಳೆ ಸಿಎಸ್‌ಕೆ ಹಾಗೂ ಎಂಎಸ್ ಧೋನಿ ಅಭಿಮಾನಿಗಳಿಗೂ ವಿಶೇಷ ಕೃತಜ್ಞತೆಗಳನ್ನು ಸುನಿಲ್ ಅವರು ಸಲ್ಲಿಸಿದ್ದಾರೆ.
Advertisement
Thank you KKR & @iamsrk sir Fans Your Love and Support 🙏🏻💜 Special thanks to CSK & @msdhoni Bhai fans .Your Support last night Chepauk 💛🙏🏻 pic.twitter.com/TOklwV8vEH
— Sunil Narine (@Sunilnarine_74) May 27, 2024
Advertisement
ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡಗಳ ನಡುವಿನ IPL 2024 ರ ಫೈನಲ್ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಕೆಕೆಆರ್ ತಂಡವು ಎಸ್‌ಆರ್‌ಹೆಚ್ ವಿರುದ್ಧ ಭರ್ಜರಿ ಜಯಗಳಿಸುವ ಮೂಲಕ 17ನೇ ಆವೃತ್ತಿಯ ಚಾಂಪಿಯನ್ ಆಗಿ ಹೊರಹೊಮ್ಮಿತು.
Advertisement
Advertisement
ಐಪಿಎಲ್ 2024 ರ ಆವೃತ್ತಿಯ ಉದ್ದಕ್ಕೂ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ತಮ್ಮ ಅದ್ಭುತ ಪ್ರದರ್ಶನಗಳನ್ನು ಪ್ರದರ್ಶಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್‌ನ ಸುನಿಲ್ ನರೇನ್ ಅವರು ಅಭೂತಪೂರ್ವ ಮೂರನೇ ಬಾರಿಗೆ ಪ್ರತಿಷ್ಠಿತ ಮೋಸ್ಟ್ ವ್ಯಾಲ್ಯುವೆಬಲ್ ಪ್ಲೇಯರ್ (MVP) ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಇದನ್ನೂ ಓದಿ: IPL 2024: ಚಾಂಪಿಯನ್ KKRಗೆ 20 ಕೋಟಿ ರೂ., ಆರೆಂಜ್, ಪರ್ಪಲ್ ಕ್ಯಾಪ್ ಗೆದ್ದವ್ರಿಗೆ ಸಿಕ್ಕಿದ್ದೆಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಐಪಿಎಲ್ 2024 ರ ಅಂತಿಮ ದಿನವಾದ ನಿನ್ನೆ (ಮೇ 26 ರಂದು) ತನ್ನ ಜನ್ಮದಿನವನ್ನು ಆಚರಿಸಿಕೊಂಡ ನರೇನ್, 14 ಇನ್ನಿಂಗ್ಸ್‌ಗಳಲ್ಲಿ 179.85 ಸ್ಟ್ರೈಕ್ ರೇಟ್‌ನಲ್ಲಿ ಅದ್ಭುತ ಶತಕ ಮತ್ತು ಮೂರು ಅರ್ಧ ಶತಕಗಳನ್ನು ಒಳಗೊಂಡಂತೆ 488 ರನ್ ಗಳಿಸುವ ಮೂಲಕ ತಮ್ಮ ಬ್ಯಾಟಿಂಗ್ ಪರಾಕ್ರಮವನ್ನು ಪ್ರದರ್ಶಿಸಿದರು. ಸುನಿಲ್ ನರೈನ್ 33 ಸಿಕ್ಸರ್‌ಗಳು ಮತ್ತು 50 ಬೌಂಡರಿಗಳ ಮೂಲಕ 17ನೇ ಆವೃತ್ತಿ IPLನಲ್ಲಿ ಬ್ಯಾಟಿಂಗ್‌ನಲ್ಲಿ ಮಿಂಚುವ ಮೂಲಕ KKR ಚಾಂಪಿಯನ್ ಆಗಲು ಕಾರಣರಾದರು. ಸನ್‌ರೈಸರ್ಸ್ ಹೈದರಾಬಾದ್‌ನ ಟ್ರಾವಿಸ್ ಹೆಡ್, ಪ್ಯಾಟ್ ಕಮ್ಮಿನ್ಸ್ ಮತ್ತು ಅಭಿಷೇಕ್ ಶರ್ಮಾ ಅವರ ತೀವ್ರ ಪೈಪೋಟಿಯ ಹೊರತಾಗಿಯೂ , ನರೇನ್ ಲೀಡರ್‌ಬೋರ್ಡ್‌ನ ಅಗ್ರಸ್ಥಾನದಲ್ಲಿ ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡರು.