ಚೆನ್ನೈ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2024) 17ನೇ ಆವೃತ್ತಿ ಆರಂಭಗೊಳ್ಳಲು ಒಂದು ದಿನವಷ್ಟೇ ಬಾಕಿಯಿದೆ.
ಮಾರ್ಚ್ 22ರಿಂದ ಮಹತ್ವದ ಟೂರ್ನಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲೇ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs CSK) ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಚೆನ್ನೈನ ಚಿದಂಬರಂ (ಚೆಪಾಕ್) ಕ್ರಿಕೆಟ್ ಕ್ರೀಡಾಂಗಣದಲ್ಲಿ ಇತ್ತಂಡಗಳು ಕಾದಾಟ ನಡೆಸಲಿದ್ದು, ಹಣಾಹಣಿ ವೀಕ್ಷಿಸಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಇದನ್ನೂ ಓದಿ: RCB Unbox: ‘ಬೆಂಗಳೂರ್’ ಅಲ್ಲ ಇನ್ಮುಂದೆ ಹೇಳಿ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’
Advertisement
Advertisement
ಅಲ್ಲದೇ ಈ ಬಾರಿ ಬೇಸಿಗೆಯ ಬಿಸಿ ಐಪಿಎಲ್ ಟೂರ್ನಿಗೂ ತಟ್ಟಿದ್ದು, ಪಂದ್ಯದ ವೇಳೆ ಮೈದಾನ ಹದಗೊಳಿಸಲು ಸಂಸ್ಕರಿಸಿದ ನೀರನ್ನು ಬಳಸಿಕೊಳ್ಳಲು ಮುಂದಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಗಳಿಗೆ ಸಂಸ್ಕರಿಸಿದ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
Advertisement
Advertisement
ಕ್ರೀಡಾಂಗಣಕ್ಕೆ ಸಂಸ್ಕರಿಸಿದ ನೀರನ್ನು ಪೂರೈಸುವಂತೆ ಆಡಳಿತ ಮಂಡಳಿ ಪದಾಧಿಕಾರಿಗಳು ರಾಮ್ ಪ್ರಸಾತ್ ಮನೋಹರ್ ಅವರನ್ನ ಭೇಟಿ ಮಾಡಿ, ಮನವಿಯನ್ನೂ ಸಲ್ಲಿಸಿದ್ದರು. ಪಂದ್ಯಾವಳಿ ಸಂದರ್ಭದಲ್ಲಿ ದಿನಕ್ಕೆ 75,000 ಲೀಟರ್ ನೀರು ಅವಶ್ಯಕತೆಯಿದ್ದು, ಕಬ್ಬನ್ ಪಾರ್ಕ್‌ನ ತ್ಯಾಜದ ನೀರನ್ನು ಸಂಸ್ಕರಿಸಿ, ಕ್ರೀಡಾಂಗಣಕ್ಕೆ ಪೂರೈಸುವಂತೆ ಕೋರಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಸೂಪರ್ ಲೀಗ್‌ಗಿಂತಲೂ ನಮ್ಮ ಹೆಣ್ಮಕ್ಕಳ ಟೂರ್ನಿಯೇ ಹೆಚ್ಚು ಶ್ರೀಮಂತ
ಇದಕ್ಕೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವ ಡಾ.ರಾಮ್ ಪ್ರಸಾತ್ ಮನೋಹರ್, ಸದ್ಯ ನಗರದಲ್ಲಿ ನೀರಿನ ಸಮಸ್ಯೆಯಿದೆ. ಕಾವೇರಿ ನೀರು ಮತ್ತು ಕೊಳವೆ ಬಾವಿ ನೀರು ಪೂರೈಸಲು ಸಾಧ್ಯವಿಲ್ಲ. ಹಾಗಾಗಿ ಸಂಸ್ಕೃರಿಸಿದ ನೀರನ್ನು ಪೂರೈಸಲು ಕ್ರಮ ಕೈಗೊಳ್ಳುತ್ತೇವೆ. ಮುಂದಿನ ದಿನಗಳಲ್ಲೂ ಕ್ರೀಡಾಂಗಣಕ್ಕೆ ಸಂಸ್ಕರಿಸಿದ ನೀರನ್ನು ಬಳಸುವುದೇ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಮುಂಬೈ ತಂಡಕ್ಕೆ ನಾಯಕ ಬದಲಾದ ಬಳಿಕ ಮೊದಲ ಬಾರಿಗೆ ರೋಹಿತ್-ಹಾರ್ದಿಕ್ ಮುಖಾಮುಖಿ
ಬೆಂಗಳೂರಿನಲ್ಲಿ ಯಾವಾಗ ಪಂದ್ಯಗಳು?
ಮಾರ್ಚ್ 25 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ನಂತರ ಮಾರ್ಚ್ 29 ರಂದು ಕೆಕೆಆರ್ ವಿರುದ್ಧ, ಏಪ್ರಿಲ್ 2 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್‌ಸಿಬಿ ತವರು ಕ್ರೀಡಾಂಗಣದಲ್ಲಿ ಸೆಣಸಲಿದೆ.