IPL 2025 | ಸೂಪರ್‌ ಸಂಡೇನಲ್ಲಿ ಚೆನ್ನೈ Vs ಮುಂಬೈ ಮೆಗಾ ಫೈಟ್‌

Public TV
1 Min Read
MS Dhoni Rohit Sharma

ಮುಂಬೈ: ಐಪಿಎಲ್‌ (IPL 2025) ಇತಿಹಾಸದಲ್ಲಿ ತಲಾ ಐದು ಬಾರಿ ಚಾಂಪಿಯನ್‌ ಪಟ್ಟ ಗೆದ್ದು ಅತ್ಯಂತ ಯಶಸ್ವಿ ತಂಡಗಳಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ (CSK vs MI) 18ನೇ ಆವೃತ್ತಿ ಟೂರ್ನಿಯಲ್ಲಿ ತೀರಾ ಕಳಪೆ ಪ್ರದರ್ಶನ ನೀಡುತ್ತಿವೆ. ಉಭಯ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದ್ದು, ಮಹತ್ವದ ಪಂದ್ಯದಲ್ಲಿ ಭಾನುವಾರ ಪರಸ್ಪರ ಮುಖಾಮುಖಿಯಾಗಲಿವೆ.

CSK vs MI

ಇಂದು ಸಂಜೆ 7:30ಕ್ಕೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede stadium) ಉಭಯ ತಂಡಗಳು ಮುಖಾಮುಖಿಯಾಗಲಿವೆ. ಇತ್ತಂಡಗಳು ಈವರೆಗೆ 38 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 18ರಲ್ಲಿ ಸಿಎಸ್‌ಕೆ, 20 ಪಂದ್ಯಗಳಲ್ಲಿ ಮುಂಬೈ ಗೆಲುವು ಸಾಧಿಸಿದೆ. ಪ್ರಸ್ತುತ ಆವೃತ್ತಿಯಲ್ಲಿ ಮುಂಬೈ ಆಡಿರುವ 7 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿದ್ದರೆ, ಚೆನ್ನೈ ಸೂಪರ್‌ ಕಿಂಗ್ಸ್‌ ಕೇವಲ 2 ಪಂದ್ಯಗಳಲ್ಲಿ ಗೆದ್ದು ಕೊನೆಯ ಸ್ಥಾನದಲ್ಲಿದೆ.

Mumbai 2

ಈಗಾಗಲೇ ಉಭಯ ತಂಡಗಳು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಎದುರಾಗಿದ್ದು, ಚೆನ್ನೈ ಜಯಭೇರಿ ಬಾರಿಸಿತ್ತು. ಅಲ್ಲದೇ ಚೆನ್ನೈ ಕಳೆದ 5 ಮುಖಾಮುಖಿಯಲ್ಲಿ ಎರಡೂ ಬಾರಿಯೂ ಮುಂಬೈಯನ್ನು ಸೋಲಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲು ಮುಂಬೈ ತಂಡ ಕಾಯುತ್ತಿದೆ. ನ್ನೈಗೆ ಹೋಲಿಸಿದ್ರೆ ಮುಂಬೈ ತಂಡ ಬಲಿಷ್ಠವಾಗಿದೆ.

CSK

ರೋಹಿತ್ ಶರ್ಮಾ ಅವರು ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿದ್ದರು, ರಿಕಲ್ಟನ್‌, ತಿಲಕ್ ವರ್ಮಾ, ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ ಮುಂತಾದವರು ಬ್ಯಾಟಿಂಗ್‌ನಲ್ಲಿ ಬಲ ತುಂಬುತ್ತಿದ್ದಾರೆ. ಇನ್ನೂ ಬೌಲಿಂಗ್‌ನಲ್ಲಿ ಜಸ್ಪ್ರೀತ್‌ ಬುಮ್ರಾ, ಟ್ರೆಂಟ್‌ ಬೌಲ್ಟ್‌, ಮಿಚೆಲ್‌ ಸ್ಯಾಂಟ್ನರ್‌ ತಂಡಗಳ ಕೈ ಹಿಡಿಯುವ ನಿರೀಕ್ಷೆಯಲ್ಲಿದೆ. ಅಲ್ಲದೇ ಉಭಯ ತಂಡಗಳಿಗೆ ಇದು ನಿರ್ಣಾಯಕ ಪಂದ್ಯ ಎನಿಸಿದ್ದು, ಯಾರು ಸೋತರು ಪ್ಲೇ ಆಫ್ಸ್‌ ಹಾದಿ ಬಹುತೇಕ ಬಂದ್‌ ಆಗುವ ಸಾಧ್ಯತೆಯಿದೆ ಎಂದು ಕ್ರಿಕೆಟ್‌ ವಿಶ್ಲೇಷಕರು ಅಂದಾಜಿಸಿದ್ದಾರೆ.

Share This Article