ಮುಂಬೈ: ಇನ್ನೆರಡು ದಿನಗಳಲ್ಲಿ 2025ರ ಐಪಿಎಲ್ (IPL 2025) ಟೂರ್ನಿ ಆರಂಭವಾಗಲಿದೆ. ಈ ಬಾರಿ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ಮೊದಲ 3 ಪಂದ್ಯಗಳನ್ನು ರಿಯಾನ್ ಪರಾಗ್ (Riyan Parag) ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸಿ ತಿಳಿಸಿದೆ.
ಸದ್ಯ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವ ವಹಿಸಿರುವ ಸಂಜು ಸ್ಯಾಮ್ಸನ್ (Sanju Samson) ಅವರು ಫಿಟ್‌ನೆಟ್ ಸಮಸ್ಯೆ ಎದುರಿಸುತ್ತಿರುವ ಕಾರಣ ಬಿಸಿಸಿಐ ವಿಕೆಟ್ ಕೀಪಿಂಗ್ ಮಾಡಲು ಅನುಮತಿ ನೀಡಿಲ್ಲ. ಈ ಕಾರಣದಿಂದ ತಂಡಕ್ಕೆ ಹೊಸ ನಾಯಕನನ್ನು ನೇಮಿಸುವ ನಿರ್ಧಾರ ಫ್ರಾಂಚೈಸಿ ಕೈಗೊಂಡಿತ್ತು. ಇದೀಗ ರಿಯಾನ್ ಪರಾಗ್‌ನನ್ನು ಮೊದಲ ಮೂರು ಪಂದ್ಯಗಳಿಗೆ ನಾಯಕನನ್ನಾಗಿ ಘೋಷಿಸಿದೆ. ಇನ್ನೂ ಸಂಜು ಸ್ಯಾಮ್ಸನ್ ಈ ಟೂರ್ನಿಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ತಿಳಿಸಿದೆ.ಇದನ್ನೂ ಓದಿ: ಸಚಿವರ ಮೇಲೆ 2 ಸಲ ಹನಿಟ್ರ್ಯಾಪ್ ಯತ್ನ – ಸತೀಶ್ ಜಾರಕಿಹೊಳಿ ಬಾಂಬ್
- Advertisement 2-
- Advertisement 3-
ನಾಯಕತ್ವ ವಹಿಸಲಿರುವ ರಿಯಾನ್ ಪರಾಗ್ ಅವರು, ವಿರಾಟ್ ಕೊಹ್ಲಿ (Virat Kohli) ಬಳಿಕ ಐಪಿಎಲ್‌ನ ಅತ್ಯಂತ ಕಿರಿಯ ನಾಯಕರಲ್ಲಿ ಒಬ್ಬರಾಗಲಿದ್ದಾರೆ.
- Advertisement 4-
2025ರ ಐಪಿಎಲ್ ಟೂರ್ನಿ ಮಾ.22 ರಂದು ಆರಂಭವಾಗಲಿದೆ. ಮಾ.23 ರಂದು ಹೈದರಾಬಾದ್‌ನ (Hyderabad) ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ (Rajiv Gandhi International Cricket Stadium) ಸನ್ ರೈಸರ್ಸ್ ಹೈದರಾಬಾದ್ (Sun Risers Hyderabad) ವಿರುದ್ಧ ರಾಜಸ್ಥಾನ ರಾಯಲ್ಸ್ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯ ಸೇರಿದಂತೆ ಮಾ.26 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮಾ.30 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಗಳನ್ನು ರಿಯಾನ್ ಮುನ್ನಡೆಸಲಿದ್ದಾರೆ.
ಸಂಜು ಸ್ಯಾಮ್ಸನ್‌ಗೆ ಏನಾಗಿತ್ತು?
ಫೆಬ್ರವರಿಯಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅವರ ಬೆರಳಿಗೆ ಪೆಟ್ಟಾಗಿತ್ತು. ಸದ್ಯ ವಿಕೆಟ್‌ಕೀಪರ್-ಬ್ಯಾಟ್ಸ್ಮನ್ ಆಗಿ ಫಿಟ್ ಆಗಲು ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸ್‌ಲೆನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್, ಶುಭಂ ದುಬೆ, ವೈಭವ್ ಸೂರ್ಯವಂಶಿ, ಕುನಾಲ್ ರಾಥೋರ್, ಶಿಮ್ರೋನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್, ರಿಯಾನ್ ಪರಾಗ್, ನಿತೀಶ್ ರಾಣಾ, ಯುಧ್ವೀರ್ ಸಿಂಗ್, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಮದ್ ಸಿಂಗ್ ತೀಕ್ಷಣಾ, ಮದ್ ಕುಮಾರ, ವಾನ್, ವಾನ್ ತುಷಾರ್ ದೇಶಪಾಂಡೆ, ಫಜಲ್ಹಕ್ ಫಾರೂಕಿ, ಕ್ವೇನಾ ಮಫಕಾ, ಅಶೋಕ್ ಶರ್ಮಾ, ಸಂದೀಪ್ ಶರ್ಮಾ.ಇದನ್ನೂ ಓದಿ: ಸೂರ್ಯ ನಟನೆಯ ‘ರೆಟ್ರೋ’ ಸಿನಿಮಾ ಬಗ್ಗೆ ಸಿಕ್ತು ಬಿಗ್ ಅಪ್‌ಡೇಟ್