ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2026) 63ನೇ ಪಂದ್ಯವು ಇಂದು ಚೆಪಾಕ್ ಮೈದಾನದಲ್ಲಿ ನಡೆಯಲಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.
ಋತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ (CSK) ತಂಡಕ್ಕೆ ತವರಿನಲ್ಲಿ ಇಂದು ಮಾಡು ಇಲ್ಲವೇ ಮಡಿ ಸವಾಲು ಎದುರಾಗಿದೆ. ಏಕೆಂದ್ರೆ 12 ಪಂದ್ಯಗಳಲ್ಲಿ 6 ಪಂದ್ಯ ಗೆದ್ದು, 12 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿರುವ ಚೆನ್ನೈ ತಂಡ ಪ್ಲೇ ಆಫ್ (IPL Playoffs) ಪ್ರವೇಶಿಸಲು ಈ ಪಂದ್ಯ ನಿರ್ಣಾಯಕವಾಗಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಚೆನ್ನೈ ಪರಾಭವಗೊಂಡರೆ ಪ್ಲೇ ಆಫ್ ಹಾದಿ ಅತ್ಯಂತ ಕಠಿಣವಾಗಲಿದೆ.

ಸತತ ಸೋಲಿನ ಸುಳಿಗೆ ಸಿಲುಕಿರುವ ಪಂಜಾಬ್ ಕಿಂಗ್ಸ್ (Punjab Kings) ಮುಂದಿನ ಪಂದ್ಯದಲ್ಲೂ ಸೋತರೆ 13 ಅಂಕಗಳೊಂದಿಗೆ ಟೂರ್ನಿಯಿಂದ ಹೊರಬೀಳಲಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ತಂಡ ಬಾಕಿಯಿರುವ ಎರಡೂ ಪಂದ್ಯಗಳಲ್ಲಿ ಸೋಲಬೇಕು. ಆಗ ಸಿಎಸ್‌ಕೆ ತಂಡ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದರೆ ಮಾತ್ರ ಪ್ಲೇ ಆಫ್ ಪ್ರವೇಶಿಸಬಹುದು. ಹಾಗಾಗಿ ಚೆನ್ನೈ ತಂಡ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿದ್ದ ಸನ್‌ರೈಸರ್ಸ್ ಹೈದರಾಬಾದ್ ಬಾಕಿಯಿರುವ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಪಿಚ್ ರಿಪೋರ್ಟ್ ಹೇಗಿದೆ?
ಚೆನ್ನೈನ ಚಿದಂಬರಂ ಪಿಚ್‌ನಲ್ಲಿ ಸ್ಪಿನ್ ಹಾಗೂ ಬೌಲರ್ಸ್ ಪ್ರಾಬಲ್ಯ ಸಾಧಿಸಿದ್ದಾರೆ. ಮೊದಲ ಇನ್ನಿಂಗ್ಸ್ ತಂಡವು 180 ಅಥವಾ 200 ರನ್‌ಗಳ ಗಡಿ ದಾಟಿದ್ರೆ ಮಾತ್ರ ಈ ಪಿಚ್‌ನಲ್ಲಿ 2ನೇ ಇನಿಂಗ್ಸ್ ಬ್ಯಾಟಿಂಗ್ ಮಾಡುವ ತಂಡಕ್ಕೆ ಸ್ವಲ್ಪ ಕಷ್ಟವಾಗುತ್ತದೆ. ಇದರ ಹೊರತಾಗಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು.

ಸಿಎಸ್‌ಕೆ ಸಂಭವನೀಯ ಪ್ಲೇಯಿಂಗ್-11
ಋತುರಾಜ್ ಗಾಯಕ್ವಾಡ್ (ನಾಯಕ), ಸಂಜು ಸ್ಯಾಮ್ಸನ್ (ವಿ.ಕೀ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಪ್ರಶಾಂತ್ ವೀರ್, ಅನ್ಶುಲ್ ಕಾಂಬೋಜ್, ಸ್ಪೆನ್ಸರ್ ಜಾನ್ಸನ್, ನೂರ್ ಅಹ್ಮದ್, ಮುಖೇಶ್ ಚೌಧರಿ.
ಹೈದರಾಬಾದ್ ಸಂಭವನೀಯ ಪ್ಲೇಯಿಂಗ್-11
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿ.ಕೀ.) ಹೆನ್ರಿಚ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಆರ್ ಸ್ಮರನ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಹರ್ಷ್ ದುಬೆ, ಈಶಾನ್ ಮಾಲಿಂಗ, ಸಾಕಿಬ್ ಹುಸೇನ್.

