Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IPL 2026 | ಈವರೆಗೆ ಚುಟುಕು ಕದನದಲ್ಲಿ ಟ್ರೋಫಿ ಗೆದ್ದ ಚಾಂಪಿಯನ್ಸ್‌ ಯಾರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | IPL 2026 | ಈವರೆಗೆ ಚುಟುಕು ಕದನದಲ್ಲಿ ಟ್ರೋಫಿ ಗೆದ್ದ ಚಾಂಪಿಯನ್ಸ್‌ ಯಾರು?

Cricket

IPL 2026 | ಈವರೆಗೆ ಚುಟುಕು ಕದನದಲ್ಲಿ ಟ್ರೋಫಿ ಗೆದ್ದ ಚಾಂಪಿಯನ್ಸ್‌ ಯಾರು?

Public TV
Last updated: March 28, 2026 7:53 am
Public TV
Share
4 Min Read
IPL RCB
SHARE

ವಿಶ್ವದ ಶ್ರೀಮಂತ ಕ್ರಿಕೆಟ್‌ ಲೀಗ್‌ 19ನೇ ಅವೃತ್ತಿಯು ಇಂದಿನಿಂದ ಶುರುವಾಗುತ್ತಿದೆ. 2026ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್‌ (SRH) ತಂಡಗಳು ಮುಖಾಮುಖಿಯಾಗಲಿವೆ. ಇದೀಗ 18 ವರ್ಷಗಳನ್ನೂ ಪೂರೈಸಿರುವ ವಿಶ್ವದ ಶ್ರೀಮಂತ ಟೂರ್ನಿ 19ನೇ ವರ್ಷಕ್ಕೆ ಕಾಲಿಟ್ಟಿದೆ. ಹೀಗಿರುವಾಗ ಈವರೆಗೆ ಯಾವೆಲ್ಲಾ ತಂಡಗಳು ಚಾಂಪಿಯನ್ ಪಟ್ಟ ಅಲಂಕರಿಸಿವೆ? ಇದುವರೆಗೂ ಟ್ರೋಫಿ ಗೆಲ್ಲದ ತಂಡ ಯಾವುದು? ಎಂಬ ವಿವರ ಇಲ್ಲಿದೆ…

2008ರಲ್ಲಿ ಆರಂಭಗೊಂಡ ಐಪಿಎಲ್‌ ಟೂರ್ನಿ 2024ರ ವರೆಗೆ 18 ಆವೃತ್ತಿಗಳನ್ನು ಯಶಸ್ವಿಯಾಗಿ ಪೂರೈಸಿದ್ದು, 19ನೇ ಆವೃತ್ತಿಗೆ ಕಾಲಿಡುತ್ತಿದೆ. ಪ್ರಸ್ತುತ ಆಡುತ್ತಿರುವ ತಂಡಗಳು ಮತ್ತು ನಿಷ್ಕ್ರಿಯ ತಂಡಗಳು ಸೇರಿ ಒಟ್ಟು 15 ತಂಡಗಳು ಈವರೆಗೆ ಐಪಿಎಲ್‌ನಲ್ಲಿ ಆಡಿವೆ ಮತ್ತು ಆಡುತ್ತಿವೆ. ಆದರೆ ಟ್ರೋಫಿ ಗೆದ್ದಿರುವ ತಂಡಗಳು ಮಾತ್ರ 8 ಮಾತ್ರ. ಉಳಿದಂತೆ ಪ್ರಸ್ತುತ ಆಡುತ್ತಿರುವ 3 ಸೇರಿ ಒಟ್ಟು 7 ತಂಡಗಳು (ನಿಷ್ಕ್ರಿಯ ತಂಡಗಳು ಸೇರಿ) ಪ್ರಶಸ್ತಿ ಜಯಿಸಿಲ್ಲ ಎಂಬುದು ಗಮನಾರ್ಹ.

rajasthan royals

ರಾಜಸ್ಥಾನ್‌ ರಾಯಲ್ಸ್‌ ಚೊಚ್ಚಲ ಚಾಂಪಿಯನ್ಸ್‌
2008ರ ಇಂಡಿಯನ್ ಪ್ರೀಮಿಯರ್ ಲೀಗ್ ಉದ್ಘಾಟನಾ ಆವೃತ್ತಿಯಲ್ಲಿ ರಾಜಸ್ಥಾನ್‌ ರಾಯಲ್ಸ್ (Rajasthan royals) ಟ್ರೋಫಿ ಗೆದ್ದುಕೊಂಡಿತು. ಚುಟುಕು ಪಂದ್ಯಾವಳಿಗೆ ಹುಮ್ಮಸು ತುಂಬಿದ್ದ ಈ ಟೂರ್ನಿಯ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ ರಾಜಸ್ಥಾನ್‌ ರಾಯಲ್ಸ್‌ ಚೊಚ್ಚಲ ಚಾಂಪಿಯನ್‌ ಕಿರೀಟವನ್ನು ಮುಡಿಗೇರಿಸಿಕೊಂಡಿತ್ತು. ಶೇನ್‌ ವಾರ್ನ್‌ ತಂಡದ ನಾಯಕತ್ವ ವಹಿಸಿದ್ದರು.

deccan chargers

2009ರಲ್ಲಿ ಡೆಕ್ಕನ್‌ ಚಾರ್ಜಸ್‌ಗೆ ಕಿರೀಟ
2009ರ ಐಪಿಎಲ್‌ ಟೂರ್ನಿಯ ಫೈನಲ್‌ ಪಂದ್ಯ ಅತ್ಯಂತ ರೋಚಕವಾಗಿತ್ತು. ಆಗಲೇ ಜನಮನ ಗೆದ್ದಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪದಾರ್ಪಣೆ ಮಾಡಿದ 2ನೇ ಆವೃತ್ತಿಯಲ್ಲೇ ಫೈನಲ್‌ ತಲುಪಿತ್ತು. ಆದ್ರೆ ಫೈನಲ್‌ನಲ್ಲಿ ಆಡಂ ಗಿಲ್ಕ್ರಿಸ್ಟ್ ನಾಯಕತ್ವದಲ್ಲಿದ್ದ ಡೆಕ್ಕನ್‌ ಚಾರ್ಜಸ್‌ (deccan chargers) ತಂಡದ ವಿರುದ್ಧ ಸೋತು ನಿರಾಸೆ ಅನುಭವಿಸಿತು. 6 ರನ್‌ಗಳ ರೋಚಕ ಗೆಲುವು ಸಾಧಿಸಿದ ಡೆಕ್ಕನ್‌ ಪ್ರಶಸ್ತಿ ಗೆದ್ದುಕೊಂಡಿತು.

csk

5 ಬಾರಿ ಚೆನ್ನೈ ʻಸೂಪರ್‌ʼ ಚಾಂಪಿಯನ್‌
ಐಪಿಎಲ್‌ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್‌ ಹೊರತುಪಡಿಸಿದ್ರೆ ಅತಿಹೆಚ್ಚು ಬಾರಿ ಚಾಂಪಿಯನ್ಸ್‌ ಪಟ್ಟ ಧಕ್ಕಿಸಿಕೊಂಡ ತಂಡವೆಂದರೆ ಅದು ಚೆನ್ನೈ ಸೂಪರ್‌ ಕಿಂಗ್ಸ್‌ (CSK). ಇದರ ಖ್ಯಾತಿಯೂ ಸಹ ಚೆನ್ನೈ ತಂಡದ ಜೀವಾಳವೇ ಆಗಿರುವ ಕೂಲ್‌ ಕ್ಯಾಪ್ಟನ್‌ ಎಂ.ಎಸ್‌ ಧೋನಿ ಅವರಿಗೆ ಸಲ್ಲುತ್ತದೆ. ಧೋನಿ ನಾಯಕತ್ವದಲ್ಲಿ ಸಿಎಸ್‌ಕೆ 2010, 2011, 2018, 2021, 2023 ರಲ್ಲಿ ಪ್ರಶಸ್ತಿ ಗೆದ್ದಿದೆ. ಪ್ರಸ್ತುತ ಋತುರಾಜ್‌ ಗಾಯಕ್ವಾಡ್ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

mumbai indians

ಮುಂಬೈಗೂ 5 ಬಾರಿ ಕಿರೀಟ 
ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಂತೆ ಮುಂಬೈ ಇಂಡಿಯನ್ಸ್‌ ಸಹ 5 ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ 2013, 2015, 2017, 2019, 2020ರಲ್ಲಿ ಪ್ರಶಸ್ತಿ ಗೆದ್ದಿದೆ. ಪ್ರಸ್ತುತ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ನಾಯಕನಾಗಿದ್ದಾರೆ.

kkr

ಕೆಕೆಆರ್‌ಗೆ 3 ಬಾರಿ ಪಟ್ಟ
2024ರ ಆವೃತ್ತಿಯಲ್ಲಿ ಪ್ರಶಸ್ತಿ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಹಾಲಿ ಚಾಂಪಿಯನ್ಸ್‌ ಆಗಿದೆ. 2012, 2014 ಗೌತಮ್‌ ಗಂಭೀರ್‌ ನಾಯಕತ್ವದಲ್ಲಿ ಪ್ರಶಸ್ತಿ ಗೆದ್ದಿದ್ದ ಕೆಕೆಆರ್‌, 2024 ರಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಟ್ರೋಫಿ ಗೆದ್ದಿದೆ ವಿಶೇಷವೆಂದ್ರೆ ಆಗಲೂ ಕೆಕೆಆರ್‌ಗೆ ಮೆಂಟರ್‌ ಆಗಿದ್ದು ಗೌತಮ್‌ ಗಂಭೀರ್‌ ಅವರೇ. ಅಜಿಂಕ್ಯ ರಹಾನೆ ಪ್ರಸ್ತುತ ನಾಯಕನಾಗಿ ಆಯ್ಕೆಯಾಗಿದ್ದಾರೆ.

SRH 1

ಸನ್‌ ರೈಸರ್ಸ್‌ 2016ರ ಚಾಂಪಿಯನ್
2016ರ ರೋಚಕ ಫೈನಲ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಟ್ರೋಫಿ ಗೆದ್ದಿತ್ತು. ರೋಚಕ ಫೈನಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 8 ರನ್‌ಗಳಿಂದ ಸೋಲಿಸಿತ್ತು. ಅಂದು ಡೇವಿಡ್‌ ವಾರ್ನರ್‌ ತಂಡದ ನಾಯಕತ್ವ ವಹಿಸಿದ್ದರು. ಈ ವರ್ಷ ಸ್ಫೋಟಕ ಬ್ಯಾಟರ್‌ ಇಶಾನ್‌ ಕಿಶನ್‌ ತಂಡದ ನಾಯಕತ್ವದ ಹೊಣೆ ಹೊತ್ತಿದ್ದಾರೆ.

gujarath titans 2

ಪದಾರ್ಪಣೆ ಆವೃತ್ತಿಯಲ್ಲೇ ಪ್ರಶಸ್ತಿ ಗೆದ್ದ ಟೈಟಾನ್ಸ್‌
ಇನ್ನೂ 2022ರಲ್ಲಿ ಟೂರ್ನಿಯಲ್ಲಿ ಆಗಷ್ಟೇ ಪದಾರ್ಪಣೆ ಮಾಡಿದ ಗುಜರಾತ್‌ ಟೈಟಾನ್ಸ್‌ ತಂಡ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿಗೆ ಮುತ್ತಿಟ್ಟಿತು. ಹಾರ್ದಿಕ್ ಪಾಂಡ್ಯ ನೇತೃತ್ವದ ಜಿಟಿ ತಂಡವು ರಾಜಸ್ಥಾನ್‌ ರಾಯಲ್ಸ್ ತಂಡವನ್ನು ಪ್ರಶಸ್ತಿ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಸೋಲಿಸಿತ್ತು. 2ನೇ ಆವೃತ್ತಿಯಲ್ಲಿ ಹಾರ್ದಿಕ್‌ ಪಾಂಡ್ಯ ಅವ್ರೇ ತಂಡವನ್ನ ಮುನ್ನಡೆಸಿ, ರನ್ನರ್‌ ಅಪ್‌ ಪ್ರಶಸ್ತಿ ಗೆಲ್ಲುವಂತೆ ಮಾಡಿದ್ದರು. ಹಾರ್ದಿಕ್‌ ಪಾಂಡ್ಯ ಮುಂಬೈ ತಂಡಕ್ಕೆ ಕಂಬ್ಯಾಕ್‌ ಮಾಡಿದ ಬಳಿಕ ಶುಭಮನ್‌ ಗಿಲ್‌ ಜಿಟಿ ತಂಡದ ನಾಯಕನಾಗಿದ್ದಾರೆ.

RCB Victory Celebration Entry to Chinnaswamy stadium is only allowed to those with tickets and passes

18 ವರ್ಷಗಳ ವನವಾಸಕ್ಕೆ ಅಂತ್ಯ ಹಾಡಿದ ಆರ್‌ಸಿಬಿ
ಹೌದು. 2025 ರ ಆವೃತ್ತಿಯಲ್ಲಿ ಹೊಸ ಪಡೆಯೊಂದಿಗೆ ಕಣಕ್ಕಿಳಿದ ಆರ್‌ಸಿಬಿ ಯಾರೂ ಊಹಿಸದ ರೀತಿ ಟೂರ್ನಿಯುದ್ಧಕ್ಕೂ ಪ್ರದರ್ಶನ ನೀಡುತ್ತಾ ಬಂದಿತು. 17 ವರ್ಷಗಳಿಂದಲೂ ಪ್ಲೇ ಆಫ್‌, ಎಲಿಮಿನೇಟರ್‌, ಸೆಮಿಫೈನಲ್‌, ಫೈನಲ್‌ ಹಂತಗಳನ್ನು ಆಡಿದ್ದ ಆರ್‌ಸಿಬಿ 18ನೇ ಆವೃತ್ತಿಯಲ್ಲಿ ತನ್ನ ಪ್ರಶಸ್ತಿಯ ಬರ ಬರ ನೀಗಿಸಿಕೊಂಡಿತು. 2025ರ ವರ್ಷದಲ್ಲಿ ರಜತ್‌ ಪಾಟಿದಾರ್‌ ಅವರ ನಾಯಕತ್ವದಲ್ಲಿ ಆರ್‌ಸಿಬಿ ತನ್ನ ಚೊಚ್ಚಲ ಟ್ರೋಫಿಯನ್ನ ಮುಡಿಗೇರಿಸಿಕೊಂಡಿತು. ಶ್ರೇಯಸ್‌ ಅಯ್ಯರ್‌ ನಾಯಕತ್ವದ ಪಂಜಾಬ್‌ ಕಿಂಗ್ಸ್‌ ತಂಡವನ್ನ 6 ರನ್‌ಗಳಿಂದ ಸೋಲಿಸಿ ಟ್ರೋಫಿ ಗೆದ್ದುಕೊಂಡಿತು.

ಈವರೆಗೆ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ರಶಸ್ತಿಗೆ ಮುತ್ತಿಕ್ಕಿಲ್ಲ. ನಿಷ್ಕ್ರಿಯಗೊಂಡ ತಂಡಗಳ ಪೈಕಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್, ಪುಣೆ ವಾರಿಯರ್ಸ್, ಗುಜರಾತ್ ಲಯನ್ಸ್, ಕೊಚ್ಚಿ ಟಸ್ಕರ್ಸ್‌ ಕೇರಳ ತಂಡಗಳು ಟ್ರೋಫಿ ಗೆದ್ದಿಲ್ಲ.

TAGGED:bengaluruCSKIPL 2026IPL ChampionsKKRrcbಆರ್‍ಸಿಬಿಐಪಿಎಲ್‌ 2026ಐಪಿಎಲ್‌ ಚಾಂಪಿಯನ್ಸ್‌ಕೆಕೆಆರ್ಸಿಎಸ್‍ಕೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
18 minutes ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
20 minutes ago
Ajit Agarkar
Cricket

2027 ರ ಏಕದಿನ ವಿಶ್ವಕಪ್‌ ವರೆಗೆ ಅಜಿತ್‌ ಅಗರ್ಕರ್‌ ಟೀಂ ಇಂಡಿಯಾ ಆಯ್ಕೆ ಮುಖ್ಯಸ್ಥ?

Public TV
By Public TV
41 minutes ago
DK Shivakumar 1 1
Bengaluru City

ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ: ಬಿಜೆಪಿಗೆ ಡಿಕೆಶಿ ತಿರುಗೇಟು

Public TV
By Public TV
1 hour ago
Mysuru 2 1
Crime

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ!

Public TV
By Public TV
2 hours ago
Vijayanagar Lorry Accident
Bellary

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?