ಲಕ್ನೋ: ಇಂಡಿಯನ್ ಪ್ರೀಮಿಯರ್ ಲೀಗ್‍ನ (IPL) 59ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ತಂಡಗಳು ಇಲ್ಲಿನ ಏಕನಾ ಕ್ರಿಕೆಟ್ ಮೈದಾನದಲ್ಲಿ ಕಾದಾಟ ನಡೆಸಲಿವೆ.
ಆರಂಭದಲ್ಲಿ ಸತತ ಸೋಲನುಭವಿಸಿದರೂ, ಬಳಿಕ ಗೆಲುವಿನ ಲಯಕ್ಕೆ ಮರಳಿರುವ ಋತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ತಂಡಕ್ಕೆ ಇಂದು ಲಕ್ನೋ ವಿರುದ್ಧ ಮಾಡು ಇಲ್ಲವೇ ಮಡಿ ಸವಾಲು ಎದುರಾಗಿದೆ. ಒಂದು ವೇಳೆ ಈ ಪಂದ್ಯದಲ್ಲಿ ಸಿಎಸ್‍ಕೆ ಸೋತರೆ ಪ್ಲೇ ಆಫ್ ಕನಸು ನುಚ್ಚುನೂರಾಗುತ್ತದೆ. ಇತ್ತ 11 ಪಂದ್ಯಗಳಲ್ಲಿ ಕೇವಲ 3 ಪಂದ್ಯಗಳನ್ನು ಮಾತ್ರ ಗೆದ್ದಿದ್ದು, ಈಗಾಗಲೇ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿರುವ ಲಕ್ನೋ ತಂಡ ಇಂದು ಔಪಚಾರಿಕ ಪಂದ್ಯವನ್ನಾಡಲಿದೆ.
ಪಿಚ್ ರಿಪೋರ್ಟ್ ಹೇಗಿದೆ?
ಈ ಪಿಚ್ ಬೌಲಿಂಗ್ ಸಹಕಾರಿ ಪಿಚ್ ಆಗಿದ್ದು, ಸಾಮಾನ್ಯವಾಗಿ ಸ್ಪಿನ್ನರ್ಸ್ ಹಾಗೂ ಸ್ಲೋ ಬೌಲರ್ಸ್ ಪ್ರಾಬಲ್ಯ ಸಾಧಿಸಬಹುದು. ಈ ಕ್ರೀಡಾಂಗಣದಲ್ಲಿ ದೊಡ್ಡ ಮೊತ್ತ ಕಲೆ ಹಾಕುವುದು ಕಷ್ಟ. ಎರಡನೇ ಇನಿಂಗ್ಸ್‍ನಲ್ಲಿ ಬ್ಯಾಟ್ ಮಾಡುವ ತಂಡಕ್ಕೆ ಸ್ವಲ್ಪ ಕಷ್ಟವಾಗಬಹುದು. ಹಾಗಾಗಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಲಕ್ನೋ ಸೂಪರ್ ಜೈಂಟ್ಸ್ ಸಂಭವನೀಯ ತಂಡ:
ಮಿಚೆಲ್ ಮಾರ್ಷ್, ಜೋಶ್ ಇಂಗ್ಲಿಸ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ ಹಾಗೂ ವಿ.ಕೀ), ಏಡೆನ್ ಮಾಕ್ರ್ರಾಮ್, ಅಕ್ಷತ್ ರಘುವಂಶಿ, ಹಿಮ್ಮತ್ ಸಿಂಗ್, ಶಹಬಾಜ್ ಅಹ್ಮದ್, ಮೊಹಮ್ಮದ್ ಶಮಿ, ದಿಗ್ವೇಶ್ ಸಿಂಗ್ ರಾಠಿ, ಪ್ರಿನ್ಸ್ ಯಾದವ್.
ಚೆನ್ನೈ ಸೂಪರ್ ಕಿಂಗ್ಸ್ ಸಂಭವನೀಯ ತಂಡ:
ಸಂಜು ಸ್ಯಾಮ್ಸನ್ (ವಿ.ಕೀ), ಋತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಸ್ಪೆನ್ಸರ್ ಜಾನ್ಸನ್ / ಮ್ಯಾಟ್ ಹೆನ್ರಿ, ಅಕೇಲ್ ಹೊಸೈನ್, ಅನ್ಶುಲ್ ಕಾಂಬೋಜ್, ನೂರ್ ಅಹ್ಮದ್, ಮುಖೇಶ್ ಚೌಧರಿ.

