ರಾಯ್ಪುರ: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ಗೈರಾಗಿದ್ದ ಬಗ್ಗೆ ಮುಂಬೈ ಇಂಡಿಯನ್ಸ್ (Mumbai Indians) ಮಾಹಿತಿ ನೀಡಿದೆ.
ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಮಹೇಲ ಜಯವರ್ಧನೆ ಅವರು ಮಾಹಿತಿ ನೀಡಿದ್ದು, ನಾಯಕ ಹಾರ್ದಿಕ್ ಪಾಂಡ್ಯ ಅವರ ಗಾಯದ ಬಗ್ಗೆ ಅಪ್ಡೇಟ್ ಕೊಟ್ಟಿದ್ದಾರೆ. ಹಾರ್ದಿಕ್‌ಗೆ ಬೆನ್ನುನೋವಿನ ಸಮಸ್ಯೆ ಇದೆ. ಅದನ್ನು ಸರಿಪಡಿಸೋಕೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇನ್ನೂ ಗುಣಮುಖರಾಗಿಲ್ಲ. ಹೀಗಾಗಿ ಕಳೆದ ಕೆಲವು ದಿನಗಳಿಂದ ಅವರಿಗೆ ಪ್ರ್ಯಾಕ್ಟೀಸ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆ ಓವರ್‌ನಲ್ಲಿ ಭುವನೇಶ್ವರ್ ಸಿಕ್ಸರ್; ಆರ್‌ಸಿಬಿಗೆ 2 ವಿಕೆಟ್‌ಗಳ ರೋಚಕ ಜಯ- ಪ್ಲೇ ಆಫ್ ರೇಸ್‌ನಿಂದ ಮುಂಬೈ ಔಟ್
ಸದ್ಯ ಹಾರ್ದಿಕ್ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ (Suryakumar Yadav) ತಂಡವನ್ನು ಮುನ್ನಡೆಸುತ್ತಿದ್ದಾರೆ. ನಿನ್ನೆಯೇ ಪಂದ್ಯದಲ್ಲಿ ಮುಂಬೈ ತಂಡ ಆರ್‌ಸಿಬಿ (RCB) ವಿರುದ್ಧ ಎರಡು ವಿಕೆಟ್‌ಗಳಿಂದ ಸೋಲನುಭವಿಸಿದೆ. ಈ ಸೋಲು ಪ್ಲೇಆಫ್ ರೇಸ್‌ನಿಂದ ಹೊರಗುಳಿಯುವಂತೆ ಮಾಡಿದೆ. ಲಕ್ನೋ ಸೂಪರ್ ಜೈಂಟ್ಸ್ ನಂತರ ಪಂದ್ಯಾವಳಿಯಿಂದ ಹೊರಗುಳಿದ ಎರಡನೇ ತಂಡವಾಗಿ ಮುಂಬೈ ಹೊರಹೊಮ್ಮಿದೆ.
ಮುಂಬೈ ತಂಡವು ಸರಣಿ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಕೂಡ 166 ರನ್‌ಗಳ ಸವಾಲಿನ ಮೊತ್ತ ದಾಖಲಿಸಿ, ಉತ್ತಮ ಪ್ರದರ್ಶನ ನೀಡಿತು. ಆದರೆ ಆರ್‌ಸಿಬಿ ಕೊನೆಯ ಎಸೆತದಲ್ಲಿ ಗುರಿಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮುಂಬೈ ತಂಡ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿದೆ.ಇದನ್ನೂ ಓದಿ: ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

