ಲಕ್ನೋ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ (IPL 2026) 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (Luknow Super Giants) ತಂಡಗಳು ಕಾದಾಟ ನಡೆಸಲಿವೆ. ಸತತ ಸೋಲಿನ ಸುಳಿಗೆ ಸಿಲುಕಿರುವ ಶ್ರೇಯಸ್ ಐಯ್ಯರ್ ಪಡೆಗೆ ಇಂದು ಅಗ್ನಿ ಪರೀಕ್ಷೆ ಎದುರಾಗಿದೆ. ಒಂದು ವೇಳೆ ಈ ಪಂದ್ಯದಲ್ಲಿ ಲಕ್ನೋ ಗೆದ್ದರೆ ಪಂಜಾಬ್ ಪ್ಲೇಆಫ್ ಕನಸು ಕಮರಲಿದೆ.
ಪಾಯಿಂಟ್ಸ್ ಟೇಬಲ್‌ನಲ್ಲಿ 13 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿರುವ ಪಂಜಾಬ್ ತಂಡ ನಾಕೌಟ್ ಹಂತಕ್ಕೆ ಪ್ರವೇಶಿಸಲು ಇಂದಿನ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಪಂಜಾಬ್ ಇಂದಿನ ಪಂದ್ಯದಲ್ಲಿ ಗೆದ್ದರೆ 15 ಅಂಕಗಳೊಂದಿಗೆ ರಾಜಸ್ಥಾನ್ ತಂಡವನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೆ ಜಿಗಿಯಲಿದೆ. ಆಗ ಆರ್‌ಆರ್ ತಂಡ 14 ಅಂಕಗಳೊಂದಿಗೆ 5ನೇ ಸ್ಥಾನಕ್ಕೆ ಕುಸಿಯಲಿದೆ. ಬಳಿಕ ರಾಜಸ್ಥಾನ್ ರಾಯಲ್ಸ್ ತಂಡದ ಕೊನೆಯ ಪಂದ್ಯದ ಫಲಿತಾಂಶದ ಮೇಲೆ ಪಂಜಾಬ್ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ರಾಜಸ್ಥಾನ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಸೋತರೆ ಅಯ್ಯರ್ ಪಡೆ ಪ್ಲೇಆಫ್‌ಗೆ ಲಗ್ಗೆ ಇಡಲಿದೆ. ಇದನ್ನೂ ಓದಿ: ಟ್ರಾವಿಸ್ ಹೆಡ್ ಕೈ ಚಾಚಿದ್ರೂ ಹ್ಯಾಂಡ್ ಶೇಕ್ ಮಾಡದ ಕೊಹ್ಲಿ – ಪಂದ್ಯದ ವೇಳೆ ಆಗಿದ್ದೇನು?
ಪಂಜಾಬ್ ಕಿಂಗ್ಸ್ ಟೂರ್ನಿಯ ಆರಂಭದ 7 ಪಂದ್ಯಗಳ ಪೈಕಿ 6 ಪಂದ್ಯಗಳಲ್ಲಿ ಜಯ ದಾಖಲಿಸಿತ್ತು. ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಮಳೆ ಅಡಚಣೆ ಉಂಟಾದ ಕಾರಣ ಉಭಯ ತಂಡಗಳಿಗೆ ತಲಾ 1 ಅಂಕ ನೀಡಲಾಗಿತ್ತು. ಪಂಜಾಬ್ ಈ ಮೂಲಕ ಒಟ್ಟು 13 ರನ್ ಕಲೆಹಾಕಿತ್ತು. ಆದರೆ, ಪಂಜಾಬ್ ಗೆಲುವಿನ ನಾಗಾಲೋಟಕ್ಕೆ ಆರ್‌ಆರ್ ತಂಡ ಬ್ರೇಕ್ ಹಾಕಿತ್ತು. ಅದಾದ ಬಳಿಕ ಪಿಬಿಕೆಎಸ್ ಆಡಿರುವ 6 ಪಂದ್ಯಗಳ ಪೈಕಿ ಒಂದರಲ್ಲೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ.
ಪಿಚ್ ರಿಪೋರ್ಟ್ ಹೇಗಿದೆ?
ಏಕನಾ ಕ್ರಿಕೆಟ್ ಕ್ರೀಡಾಂಗಣದ ಸಾಮಾನ್ಯವಾಗಿ 200 ರನ್‌ಗಳ ಗರಿಷ್ಠ ಮೊತ್ತ ದಾಖಲಿಸಿದ್ರೆ ಮಾತ್ರ ಮೊದಲು ಬ್ಯಾಟಿಂಗ್ ಮಾಡುವ ತಂಡಗಳಿಗೆ ಸಹಕಾರಿಯಾಗಿರುತ್ತದೆ. ಇಲ್ಲದಿದ್ದರೆ 2ನೇ ಇನ್ನಿಂಗ್ಸ್ ಬ್ಯಾಟಿಂಗ್ ಮಾಡುವ ತಂಡಕ್ಕೆ ಅನುಕೂಲವಿರಲಿದೆ. ವೇಗದ ಬೌಲರ್‌ಗಳಿಗಿಂತಲೂ ಸ್ಪಿನ್ ಬೌಲರ್ಸ್ ಹೆಚ್ಚು ಪ್ರಾಬಲ್ಯ ಮೆರೆಯುವ ಸಾಧ್ಯತೆಯಿದೆ. ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು.
ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಪ್ಲೇಯಿಂಗ್-11
ಅರ್ಶಿನ್ ಕುಲಕರ್ಣಿ, ಜೋಶ್ ಇಂಗ್ಲಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ರಿಷಭ್ ಪಂತ್ (ನಾಯಕ ಹಾಗೂ ವಿ.ಕೀ.), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಪ್ರಿನ್ಸ್ ಯಾದವ್, ದಿಗ್ವೇಶ್ ರಾಠಿ.
ಪಂಜಾಬ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್-11
ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್ (ವಿ.ಕೀ), ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), 5 ಸೂರ್ಯಾಂಶ್ ಶೆಡ್ಜ್, ಮಾರ್ಕಸ್ ಸ್ಟೊಯಿನಿಸ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಒಮರ್ಜಾಯ್, ಹಪ್ರೀತ್ ಸಿಂಗ್, ಬ್ರಾಕ್, ಎಫ್ ಬ್ರಾಕ್, ಯಜುವೇಂದ್ರ ಚಹಾಲ್.ಇದನ್ನೂ ಓದಿ: ಮೊದಲ ಬಾರಿ ಐಪಿಎಲ್‌ನ ಇಡೀ ಆವೃತ್ತಿ ಆಡದ ಧೋನಿ – 2027ಕ್ಕೂ ಮುನ್ನವೇ ನಿವೃತ್ತಿ?
