ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆದ್ರೆ ಗುಜರಾತ್ ಟೈಟಾನ್ಸ್ ವಿರುದ್ಧ ಮಾಡಿದ ತಪ್ಪನ್ನೇ ಮತ್ತೆ ಮಾಡಿದ ಕಾರಣ ತಂಡದ ನಾಯಕ ಶ್ರೇಯಸ್ ಅಯ್ಯರ್‌ಗೆ (Shreyas Iyer) 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ತಪ್ಪು ಮತ್ತೆ ಮರುಕಳಿಸಿದ್ರೆ, ಅಯ್ಯರ್ 36 ಲಕ್ಷ ರೂ. ದಂಡದೊಂದಿಗೆ ಒಂದು ಪಂದ್ಯದಿಂದ ಬ್ಯಾನ್ ಆಗಲಿದ್ದಾರೆ.

ಹೌದು. ಸಿಎಸ್‌ಕೆ (Chennai Super Kings) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನೀತಿ ಸಂಹಿತೆ ಉಲ್ಲಂಘನೆ ಆಧಾರದ ಮೇಲೆ ಅಯ್ಯರ್‌ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಮತ್ತೊಂದು ಪಂದ್ಯದಲ್ಲಿ ಈ ರೀತಿ ಮಾಡಿದ್ರೆ, ಅದರ ಮುಂದಿನ ಒಂದು ಪಂದ್ಯದಿಂದ ಅಯ್ಯರ್ ಬ್ಯಾನ್ ಆಗಲಿದ್ದಾರೆ. 2024ರ ಸೀಸನ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿದ್ದ ರಿಷಭ್ ಪಂತ್ ಇದೇ ತಪ್ಪು ಮಾಡಿ ನಿರ್ಣಾಯಕ ಪಂದ್ಯದಿಂದ ಬ್ಯಾನ್ ಆಗಿದ್ದರು. ಇದನ್ನೂ ಓದಿ: IPL 2026 | ಅಂಪೈರ್ ಜೊತೆಗೆ ಕಿತ್ತಾಡಿದ ಅಭಿಷೇಕ್ ಶರ್ಮಾಗೆ ಭಾರೀ ದಂಡ
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 7ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಧಾನಗತಿಯ ಓವರ್ ರೇಟ್ (slow over-rate) ಕಾಯ್ದುಕೊಂಡಿತು. ಇದ್ದಕ್ಕಾಗಿ ನಾಯಕನಿಗೆ 24 ಲಕ್ಷ ದಂಡ ವಿಧಿಸಲಾಗಿದೆ. ಇನ್ನೂ ಇಂಪ್ಯಾಕ್ಟ್ ಪ್ಲೇಯರ್ ಸೇರಿ ಪ್ಲೇಯಿಂಗ್-11 ನ ಇತರ ಸದಸ್ಯರಿಗೆ ತಲಾ 6 ಲಕ್ಷ ರೂ. ದಂಡ ಅಥವಾ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಲಾಗಿದೆ. ಇದರಲ್ಲಿ ಯಾವುದು ಅನುಕೂಲವೋ ಅದನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಐಪಿಎಲ್ ಮಂಡಳಿ ಹೇಳಿದೆ.

ಇನ್ನೂ ಶುಕ್ರವಾರ ಸ್ಪಿನ್ನರ್‌ಗಳ ಸ್ವರ್ಗವಾಗಿದ್ದ ಚೆಪಾಕ್ ಮೈದಾನ ಶುಕ್ರವಾರ ಬ್ಯಾಟಿಂಗ್ ಪ್ಯಾರಡೈಸ್ ಆಗಿ ಬದಲಾಗಿತ್ತು. ಇತ್ತಂಡಗಳಿಂದ ರನ್ ಹೊಳೆಯೇ ಹರಿಯಿತು. ಮೊದಲು ಬ್ಯಾಟ್ ಮಾಡಿದ್ದ ಸಿಎಸ್‌ಕೆ 5 ವಿಕೆಟ್ ನಷ್ಟಕ್ಕೆ 20 ಓವರ್‌ಗಳಲ್ಲಿ 209 ರನ್ ಚಚ್ಚಿತ್ತು. ಆದ್ರೆ ಆರಂಭದಿಂದಲೇ ಸ್ಫೋಟಕ ಪ್ರದರ್ಶನಕ್ಕಿಳಿದ ಪಂಜಾಬ್ ಕಿಂಗ್ಸ್ 18.4 ಓವರ್‌ಗಳಲ್ಲೇ 5 ವಿಕೆಟ್ ನಷ್ಟಕ್ಕೆ 210 ರನ್ ಬಾರಿಸಿ ಗೆಲುವು ಸಾಧಿಸಿತು. ಸದ್ಯ ಆರಂಭಿಕ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಪಂಜಾಬ್ 4 ಅಂಕ ಪಡೆದು ಅಗ್ರಸ್ಥಾನಕ್ಕೇರಿದೆ. ಇದನ್ನೂ ಓದಿ: ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್ ಸಿಗ್ನಲ್?

