ಬೆಂಗಳೂರು: ರಾಯಲ್ ಚಾಲೆಂಜರ್ಸ್ (RCB) ತಂಡ ಸತತ ಎರಡನೇ ಬಾರಿ ಐಪಿಎಲ್ ಫೈನಲ್‌ಗೆ (IPL Final) ಲಗ್ಗೆ ಇಟ್ಟ ಬೆನ್ನಲ್ಲೇ, ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ (Vijay Mallya) ವಿಶ್ ಮಾಡಿರುವ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಆರ್‌ಸಿಬಿಯ ಭರ್ಜರಿ ಗೆಲುವಿಗೆ ಸಂತಸ ವ್ಯಕ್ತಪಡಿಸಿದ ವಿಜಯ್ ಮಲ್ಯ, ತಮ್ಮ ಎಕ್ಸ್ ಖಾತೆಯಲ್ಲಿ, ನಮ್ಮ ದೊಡ್ಡ ಸಿಂಹಗಳಿಗೆ ಅಭಿನಂದನೆಗಳು ಎಂದು ಕನ್ನಡದಲ್ಲೆ ಬರೆದುಕೊಂಡಿರುವುದು ವಿಶೇಷ. ನಂತರ ಪೋಸ್ಟ್ನಲ್ಲಿ, ಧರ್ಮಶಾಲಾದಲ್ಲಿ ಅದ್ಭುತ ಗೆಲುವು ಸಾಧಿಸಿದ್ದೀರಿ. ಬೆಂಗಳೂರಿನ ಸಿಂಹಗಳಂತೆ ಗರ್ಜಿಸಿ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದ್ದೀರಿ ಎಂದು ಬರೆದುಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಗುಜರಾತ್ ಬಗ್ಗುಬಡಿದು ಫೈನಲ್‌ಗೆ RCB ‘ರಾಯಲ್’ ಎಂಟ್ರಿ – ಈ ಸಲನೂ ಕಪ್ ನಮ್ದೆ?
Many Many congratulations to RCB namma dodda Simhagulu for an emphatic victory in Dharamshala tonight. You roared loud like the Lions of Bengaluru and roared into the IPL final as defending champions.
— Vijay Mallya (@TheVijayMallya) May 26, 2026
ಕ್ವಾಲಿಫೈಯರ್-1 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್‌ಸಿಬಿ 92 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 5 ವಿಕೆಟ್ ನಷ್ಟಕ್ಕೆ 254 ರನ್ ಕಲೆಹಾಕಿತು. ತಂಡದ ನಾಯಕ ರಜತ್ ಪಾಟಿದಾರ್ ಸ್ಫೋಟಕ ಬ್ಯಾಟಿಂಗ್ ನಡೆಸಿ ಕೇವಲ 33 ಎಸೆತಗಳಲ್ಲಿ ಅಜೇಯ 93 ರನ್ ಸಿಡಿಸಿದರು. ಅವರ ಇನ್ನಿಂಗ್ಸ್ನಲ್ಲಿ 9 ಸಿಕ್ಸರ್ ಹಾಗೂ 5 ಬೌಂಡರಿಗಳು ಸೇರಿದ್ದವು. ಕೊನೆಯ ಓವರ್‌ಗಳಲ್ಲಿ ಆರ್‌ಸಿಬಿ ಬ್ಯಾಟರ್‌ಗಳು ಅಬ್ಬರಿಸಿ ತಂಡದ ಮೊತ್ತವನ್ನು 250ರ ಗಡಿ ದಾಟಿಸಿದರು.
255 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ಆರಂಭದಲ್ಲೇ ಕುಸಿತ ಕಂಡಿತು. ಸಾಯಿ ಸುದರ್ಶನ್ ಹಾಗೂ ನಾಯಕ ಶುಭಮನ್ ಗಿಲ್ ಬೇಗನೆ ವಿಕೆಟ್ ಕಳೆದುಕೊಂಡರು. ಆರ್‌ಸಿಬಿ ಬೌಲರ್‌ಗಳ ದಾಳಿಗೆ ತತ್ತರಿಸಿದ ಗುಜರಾತ್ ತಂಡ 162 ರನ್‌ಗೆ ಆಲೌಟ್ ಆಯಿತು.
ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ, ಜೋಶ್ ಹ್ಯಾಜಲ್‌ವುಡ್ ಹಾಗೂ ರಸಿಖ್ ಸಲಾಂ ಗುಜರಾತ್ ಓಟಕ್ಕೆ ಬ್ರೇಕ್ ಹಾಕಿ ಆರ್‌ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಈ ಗೆಲುವಿನೊಂದಿಗೆ ಆರ್‌ಸಿಬಿ ಐಪಿಎಲ್ ಇತಿಹಾಸದಲ್ಲಿ ಐದನೇ ಬಾರಿ ಫೈನಲ್‌ಗೆ ಪ್ರವೇಶಿಸಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಇದನ್ನೂ ಓದಿ: ಡಫಿ ಜಾಗದಲ್ಲಿ ಶೆಪಾರ್ಡ್ ತಂದು ಬೌಲಿಂಗ್ ಮಾಡಿಸಿದ್ದು ಯಾಕೆ – ತಂಡದ ತಂತ್ರಗಾರಿಕೆಯನ್ನು ಬಿಚ್ಚಿಟ್ಟ ರಜತ್
