ತಿರುವನಂತಪುರಂ: ಐಪಿಎಲ್ ಮಿನಿ ಹರಾಜಿನಲ್ಲಿ (IPL Auction 2023) ಇಂಗ್ಲೆಂಡ್‍ನ ಸ್ಟಾರ್ ಆಲ್‍ರೌಂಡರ್ ಸ್ಯಾಮ್ ಕರ್ರನ್ (Sam Curran) 18.50 ಕೋಟಿ ರೂ.ಗೆ ಮಾರಾಟವಾಗಿದ್ದಾರೆ. ಈ ಮೂಲಕ ಐಪಿಎಲ್ (IPL) ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
Advertisement
ತೀವ್ರ ಪೈಪೋಟಿಯಿಂದ ಕೂಡಿದ ಬಿಡ್‍ನಲ್ಲಿ ಸ್ಯಾಮ್ ಕರ್ರನ್ ಖರೀದಿಸಲು ಪಂಜಾಬ್ ಹಾಗೂ ಮುಂಬೈ ನಡುವೆ ಬಾರಿ ಜಿದ್ದಾಜಿದ್ದು ಕಂಡುಬಂತು. ಅಂತಿಮವಾಗಿ ಪಂಜಾಬ್ ಕಿಂಗ್ಸ್ 18.50 ಕೋಟಿ ರೂ. ನೀಡಿ ಕರ್ರನ್‍ರನ್ನು ಖರೀದಿಸಿತು. ಈ ಮೂಲಕ ಕ್ರಿಸ್ ಮೋರಿಸ್ ಅವರ ಈ ಹಿಂದಿನ ದಾಖಲೆಯ ಬಿಡ್ ಪತನಗೊಂಡಿತು. ಈ ಹಿಂದೆ ಕ್ರಿಸ್ ಮೋರಿಸ್ ಅವರನ್ನು 16.25 ಕೋಟಿ ನೀಡಿ ರಾಜಸ್ಥಾನ ತಂಡ ಖರೀದಿಸಿತ್ತು ಇದು ಐಪಿಎಲ್ ಇತಿಹಾಸದಲ್ಲಿ ಹೆಚ್ಚಿನ ಬಿಡ್ ಮೊತ್ತವಾಗಿತ್ತು. ಇದೀಗ ಈ ದಾಖಲೆಯನ್ನು ಕರ್ರನ್ ಮುರಿದು ನೂತನ ದಾಖಲೆಯೊಂದಿಗೆ ಬಿಕರಿ ಆಟಗಾರನಾಗಿ ಹೊರ ಹೊಮ್ಮಿದ್ದಾರೆ. ಇದನ್ನೂ ಓದಿ: ರನ್ ಓಡಲು ಪಂತ್ ನಿರಾಕರಣೆ – ಗುರಾಯಿಸಿದ ಕೊಹ್ಲಿ
Advertisement
Advertisement
ಸ್ಯಾಮ್ ಕರ್ರನ್ ಟಿ20 ವಿಶ್ವಕಪ್‍ನಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಇಂಗ್ಲೆಂಡ್ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ಟೂರ್ನಿಯ ಸರಣಿ ಶ್ರೇಷ್ಠ ಆಟಗಾರನಾಗಿ ಹೊರಹೊಮ್ಮಿದ್ದರು. ಹಾಗಾಗಿ ಇವರ ಮೇಲೆ ಹೆಚ್ಚಿನ ನಿರೀಕ್ಷೆ ಇತ್ತು. ಈ ನಿರೀಕ್ಷೆ ಹುಸಿಯಾಗಿದೆ. ದಾಖಲೆಯ ಮೊತ್ತಕ್ಕೆ ಬಿಡ್ ಆಗಿದ್ದಾರೆ.
Advertisement
ಕಳೆದ ಬಾರಿ ಮೆಗಾ ಹರಾಜಿನ ಮೊದಲು ಡ್ರಾಫ್ಟ್ ಪಿಕ್‍ನ ಭಾಗವಾಗಿ ರಾಹುಲ್ ಅವರಿಗೆ ಬರೋಬ್ಬರಿ 17 ಕೋಟಿ ರೂ. ನೀಡಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಖರೀದಿಸಿತ್ತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಗೆ ಖರೀದಿಯಾದ ಆಟಗಾರನಾಗಿ ರಾಹುಲ್ ಹೊರಹೊಮ್ಮಿದ್ದರು.